AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ತೀರ್ಮಾನಗಳು: ಒಬಿಸಿ ನಿಗಮಗಳಡಿ ಸಾಲದ ಮೇಲಿನ‌ ಬಡ್ಡಿ ಮನ್ನಾ, SC, ST ಸಹಾಯಧನ ಹೆಚ್ಚಳ

ಬಸವಣ್ಣ ಮತ್ತು ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ಅವರ 'ಬಸವ ಮಂಟಪ' ಕೃತಿಯ ಕುರಿತು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ. ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಲೇಖಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಪುಟ ಸಮ್ಮತಿ ನೀಡಿದೆ. ಜೊತೆಗೆ ಒಬಿಸಿ ನಿಗಮಗಳಡಿ ಸಾಲದ ಮೇಲಿನ‌ ಬಡ್ಡಿ ಮನ್ನಾ ಮತ್ತು SC, ST ಸಹಾಯಧನ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ.

ಸಂಪುಟ ತೀರ್ಮಾನಗಳು: ಒಬಿಸಿ ನಿಗಮಗಳಡಿ ಸಾಲದ ಮೇಲಿನ‌ ಬಡ್ಡಿ ಮನ್ನಾ, SC, ST ಸಹಾಯಧನ ಹೆಚ್ಚಳ
ಸಚಿವ ಸಂಪುಟ ಸಭೆ
ಗಂಗಾಧರ​ ಬ. ಸಾಬೋಜಿ
|

Updated on:Nov 19, 2026 | 9:28 PM

Share

ಬೆಂಗಳೂರು, ನವೆಂಬರ್​​ 19: ಲೇಖಕ ರವಿ ಹಂಜ್ ಅವರ ವಿವಾದಾತ್ಮಕ ಹೇಳಿಕೆಗಳು ಈಗ ಬಸವಾನುಯಾಯಿಗಳ ಆಕ್ರೋಶಕ್ಕೆ ಕಿಡಿ ಹೊತ್ತಿಸಿವೆ. ‘ಬಸವ ಮಂಟಪ’ ಕೃತಿ ಹಾಗೂ ವಸಂದರ್ಶನದ ವಿರುದ್ಧ ಸಚಿವರು, ಮಠಾಧೀಶರು ಮತ್ತು ಬಸವಪರ ಸಂಘಟನೆಗಳು ಸಿಡಿದೆದ್ದಿವೆ. ಈ ಬೆನ್ನಲ್ಲೇ ಇಂದಿನ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ಆಗಿದ್ದು, ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು, ಕೃತಿಯ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಾಗೂ ಎಫ್‌ಐಆರ್ ದಾಖಲಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೊತೆಗೆ ಒಬಿಸಿ ನಿಗಮಗಳಡಿ ಸಾಲದ ಮೇಲಿನ‌ ಬಡ್ಡಿ ಮನ್ನಾ ಸೇರಿದಂತೆ SC, ST ಸಹಾಯಧನ ಹೆಚ್ಚಳಕ್ಕೆ ಸಂಪುಟ ಅಸ್ತು ಎಂದಿದೆ.

ಲೇಖಕ ರವಿ ಹಂಜ್​ ವಿರುದ್ಧ FIR ದಾಖಲಿಸಲು ತೀರ್ಮಾನ

‘ರವಿ ಹಂಜ ಅಂತ ಹೇಳಿ ಓರ್ವ ವ್ಯಕ್ತಿ ಬಸವ ಮಂಟಪ ಅಂತ ಪುಸ್ತಕವನ್ನ ಬರೆದಿದ್ದು, ಅದು ಪಬ್ಲಿಷ್ ಆಗಿದೆ. ಬಸವಣ್ಣ ಅವರ ಬಗ್ಗೆ ಲೂಟಿಕೋರ, ಕೊಲೆಗಡುಕ, ಕಳ್ಳ ಎನ್ನುವ ಶಬ್ದ ಉಪಯೋಗ ಮಾಡಿದ್ದಾರೆ. ಈ ಕುರಿತು ಸಚಿವ ಸಂಪುಟ ಸುದೀರ್ಘ ಚರ್ಚೆ ಮಾಡಲಾಗಿದೆ. ‘ಬಸವಣ್ಣ ಅವರ ಸದರಿ ಕೃತಿಯನ್ನ ಮುಟ್ಟುಗೋಲು ಹಾಕಿಕೊಳ್ಳಲು, ಲೇಖಕರು ಮತ್ತು ಪಬ್ಲಿಷರ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇದು ಬಹಳ ಗಂಭೀರ ವಿಚಾರ. ಇದರ ಇಂಪ್ಯಾಕ್ಟ್ ದೊಡ್ಡ ಪ್ರಮಾಣದಲ್ಲಿ ಆಗುವ ಸಾಧ್ಯತೆ ಇದೆ. ಅದಕ್ಕಾಗಿ ಕ್ಯಾಬಿನೆಟ್ ಈ ತೀರ್ಮಾನ ತೆಗೆದುಕೊಂಡಿದೆ. ಲೇಖಕ ರವಿ ಹಂಜ್​ ವಿರುದ್ಧ FIR ದಾಖಲಿಸಲು ತೀರ್ಮಾನಿಸಲಾಗಿದೆ.

ಕ್ಯಾಬಿನೆಟ್​ನಲ್ಲಿ ಸಾರ್ವತ್ರಿಕ ರಜಾದಿನಗಳ ಪಟ್ಟಿಯ ಅಂಗೀಕಾರ

2027ನೇ ಕ್ಯಾಲೆಂಡರ್ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ದೊರೆತಿದೆ. ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರಗಳನ್ನು ಹೊರತುಪಡಿಸಿ 2027ನೇ ಸಾಲಿನಲ್ಲಿ ಒಟ್ಟು 18 ಸಾರ್ವತ್ರಿಕ ರಜಾದಿನಗಳನ್ನು ಘೋಷಿಸಲಾಗಿದೆ. ಇದರ ಜೊತೆಗೆ, ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾದಿನಗಳನ್ನು ಹೊರತುಪಡಿಸಿ ಒಟ್ಟು 19 ಪರಿಮಿತ ರಜಾದಿನಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Published On - 9:19 pm, Thu, 19 November 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು