AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ಸಭೆಯ ನಿರ್ಣಯಗಳು: ಬಾಗಲಕೋಟೆ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆ, ಸಬ್ ರಿಜಿಸ್ಟ್ರಾರ್​ಗಳ ವರ್ಗಾವಣೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾದ ಹಲವು ನಿರ್ಧಾರಗಳ ಬಗ್ಗೆ ಸಚಿವ ಹೆಚ್​ಕೆ ಪಾಟೀಲ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಗೈಡ್‌ಲೈನ್ಸ್‌ಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದಿಸಲಾಗಿದೆ ಎಂದಿದ್ದಾರೆ.

ಸಂಪುಟ ಸಭೆಯ ನಿರ್ಣಯಗಳು: ಬಾಗಲಕೋಟೆ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆ, ಸಬ್ ರಿಜಿಸ್ಟ್ರಾರ್​ಗಳ ವರ್ಗಾವಣೆ
ಸಂಪುಟ ಸಭೆಯ ನಿರ್ಣಯಗಳು: ಬಾಗಲಕೋಟೆ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆ, ಸಬ್ ರಿಜಿಸ್ಟ್ರಾರ್​ಗಳ ವರ್ಗಾವಣೆ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 04, 2024 | 3:23 PM

Share

ಬೆಂಗಳೂರು, ಜುಲೈ 04: ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ (cabinet meeting) ಇದೀಗ ಅಂತ್ಯವಾಗಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದ್ದು, ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್‌.ಕೆ.ಪಾಟೀಲ್​ ಮಾಧ್ಯಮದವರೊಂದಿಗಿ ಮಾತನಾಡಿದ್ದು, ಹಿಂದುಳಿದ ವರ್ಗಗಳ ಇಲಾಖೆಯಡಿ ಭಕ್ತವತ್ಸಲ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಗೈಡ್‌ಲೈನ್ಸ್‌ಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ಮಾಡಲಾಗಿದೆ ಎಂದು ತಿಳಿಸಿದರು.

ಒಳನಾಡು ಕೆರೆ, ಜಲಾಶಯಗಳಲ್ಲಿ ಮೀನು ಸಾಕಣೆಗೆ ಟೆಂಡರ್​ ಟೆಂಡರ್ ಮುಂದುವರಿಕೆಗೆ ಡಿಸಿಗಳಿಗೆ ಹೊಣೆ ನೀಡಲಾಗಿದೆ. 100 ಹಾಸಿಗೆಗಳ ಸಾಮರ್ಥ್ಯದ 7 ತಾಲೂಕು ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೆ 256 ಕೋಟಿ ರೂ. ಅಂದಾಜು ಮೊತ್ತ, 15 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸಲು ಅಸ್ತು ನೀಡಲಾಗಿದೆ. ಕೆಇಎ ಕಟ್ಟಡ ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಅನುಮೋದಿಸಲಾಗಿದೆ. ಕಾನೂನು ಮತ್ತು ನೀತಿಗೆ (ಹೊಸ ಕಾನೂನು ನೀತಿ), ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ 20 ಗುಂಟೆ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ.

ಇದನ್ನೂ ಓದಿ: ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯರಿಂದ ಪುನಃ ಅಸಮಂಜಸ ಪ್ರತಿಕ್ರಿಯೆ!

ಕೌನ್ಸೆಲಿಂಗ್​ ಮೂಲಕ ಸಬ್​ರಿಜಿಸ್ಟ್ರಾರ್ ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ನೇರವಾಗಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ ಮಾಡಲಾಗುತ್ತಿತ್ತು. ಈಗಿನಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಅಕ್ರಮ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವರ್ಗಾವಣೆಗೆ ಹೊಸ ನೀತಿ ಜಾರಿ ಮಾಡಲಾಗಿದೆ. ಈ ವರ್ಷದಿಂದಲೇ ಕೌನ್ಸೆಲಿಂಗ್​ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಸಬ್​ರಿಜಿಸ್ಟ್ರಾರ್ ಹಂತಕ್ಕಿಂತ ಕೆಳ ಅಧಿಕಾರಿಗಳ ವರ್ಗಾವಣೆಗೂ ಕೌನ್ಸೆಲಿಂಗ್ ಮಾಡಲಾಗುವುದು. ಬೆಂಗಳೂರಿನಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿ ಕೆಲಸ ಮಾಡಿದರೆ ಹೊರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಬಾಗಲಕೋಟೆ ರನ್ನ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆಗೆ ಒಪ್ಪಿಗೆ, ಇಂದಿರಾ ಕ್ಯಾಂಟೀನ್ ಕಿಚನ್​ಗಳಿಗೆ ಅಡುಗೆ ಉಪಕರಣ ಖರೀದಿಗೆ 84.58 ಕೋಟಿ ರೂ. ಅನುಮೋದನೆ ನೀಡಲಾಗಿದೆ. ಪಂಚಾಯತ್ ರಾಜ್ ಇಲಾಖೆ ಅಡಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅನುಮೋದನೆ ನೀಡಿದ್ದೇವೆ ಎಂದರು.

ನೋಂದಣಿ ಇಲಾಖೆಯಲ್ಲಿ ವರ್ಗಾವಣೆ ಪಾರದರ್ಶಕ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೆ ತರುತ್ತಿದ್ದೇವೆ. ಎಫ್.ಡಿಎ ಹೊರತುಪಡಿಸಿ ಸಬ್ ರಿಜಿಸ್ಟ್ರಾರ್​​ಗಳಿಗೆ ವರ್ಗಾವಣೆ ಆಗಲಿದೆ. ಕಾರ್ಪೋರೇಷನ್ ಏರಿಯಾದಲ್ಲಿ ಇರುವ ಸಬ್ ರಿಜಿಸ್ಟ್ರಾರ್​ಗಳಿಗೆ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಇಲಾಖೆಯೇ ನೋಡಿಕೊಳ್ಳಲಿದೆ. ಆ ಮೂಲಕ ಪಾರದರ್ಶಕತೆ ತರಲು ಇದರಿಂದ ಸಾಧ್ಯವಾಗುತ್ತದೆ. ಶೋಷಣೆ ಮುಕ್ತ ವ್ಯವಸ್ಥೆ ರೂಪುಗೊಳ್ಳಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಬಟ್ಟೆ ಮಾತ್ರ ಪರಿಶುದ್ದವಾಗಿದ್ದರೆ ಸಾಲದು, ಆಡಳಿತವೂ ಶುದ್ಧವಾಗಿರಬೇಕು: ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ

ಗಣಿಗಾರಿಕೆ ಪರಿಣಾಮ ಬೀರುವ ವಲಯದಲ್ಲಿ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆಗೆ ನೋಡಲ್ ಏಜೆನ್ಸಿ ನೇಮಕಕ್ಕೆ ಕ್ಯಾಬಿನೆಟ್ ಅನುಮೋದಿಸಿದೆ. ಮಾಜಿ ಶಾಸಕ ವಿಎಸ್ ಪಾಟೀಲ್​ಗೆ ಜಿ ಕ್ಯಾಟಗರಿ ಸೈಟ್ ನೀಡಿಕೆಗೆ ಶುದ್ದ ಕ್ರಯ ಪತ್ರ ನೀಡಲು ಕ್ಯಾಬಿನೆಟ್ ಅನುಮೋದಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ