ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ: ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್

ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ವಿವಿ ತಿದ್ದುಪಡಿ ವಿಧೇಯಕ, ಬಿಬಿಎಂಪಿ ತಿದ್ದುಪಡಿ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಸೇರಿದಂತೆ ಒಟ್ಟು 9 ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. ರಾಜ್ಯಪಾಲರ ಅಧಿಕಾರವನ್ನು ಮುಖ್ಯಮಂತ್ರಿಗೆ ವರ್ಗಾಯಿಸುವುದು ಮತ್ತು ಕಾರ್ಮಿಕ ಕಲ್ಯಾಣ ನಿಧಿ ಹೆಚ್ಚಳ ಮುಂತಾದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ: ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್
ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ: ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Nov 28, 2024 | 7:39 PM

ಬೆಂಗಳೂರು, ನವೆಂಬರ್ 28: ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಮಧ್ಯೆ ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಂಪುಟ ಸಭೆ ಮಾಡಲಾಗಿದೆ. ಸಂಪುಟ ಸಂಪುಟ ಪುನಾರಚನೆ ಸೇರಿದಂತೆ ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಲಾಗಿದೆ.  ಅದರಲ್ಲಿ ಪ್ರಮುಖವಾಗಿ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ. ಇದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಷ್ಟು ದಿನ ರಾಜ್ಯಪಾಲರು ಚಾನ್ಸಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿ ಚಾನ್ಸಲರ್ ಆಗಲಿದ್ದಾರೆ. ಆ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಸಿಎಂಗೆ ನೀಡಲಾಗಿದೆ.

ಇದನ್ನೂ ಓದಿ: ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ: ಹೈಕಮಾಂಡ್ ಜತೆ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ ಸಾಧ್ಯತೆ

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌.ಕೆ.ಪಾಟೀಲ್​, ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯ. ಶಿಕ್ಷೆ ಹಾಗೂ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶವಿದೆ. ಅದೇ ರೀತಿಯಾಗಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದಿಸಿದ್ದು, ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.

9 ಮಸೂದೆಗಳನ್ನು ಮಂಡಿಸಲು ಸಂಪುಟ ಸಭೆಯಲ್ಲಿ ಅನುಮೋದನೆ

ಕರ್ನಾಟಕ ಕಾರ್ಮಿಕರ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ-2024, ಕಲ್ಯಾಣ ನಿಧಿ ಸಂಗ್ರಹದ ಮೊತ್ತ ಏರಿಸಲು ವಿಧೇಯಕದಲ್ಲಿ ತಿದ್ದುಪಡಿ ಮಾಡಲಾಗಿದೆ. ಕಾರ್ಮಿಕರಿಂದ 20, ಮಾಲೀಕರಿಂದ 40, ಸರ್ಕಾರದಿಂದ 20 ರೂ. ಬದಲು, 50-100-50 ರೂಪಾಯಿಗಳ ಸಂಗ್ರಹಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. 42 ಕೋಟಿ ರೂ. ವಂತಿಗೆ ಸಂಗ್ರಹ ಆಗುತ್ತಿತ್ತು, ಇದರ ಪ್ರಮಾಣ ಹೆಚ್ಚಾಗಲಿದೆ ಎಂದಿದೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ

ಮೈಸೂರು ಲಲಿತ ಮಹಲ್ ಪ್ಯಾಲೇಸ್ ಹೋಟೆಲ್​ನ ಕಾರ್ಯಾಚರಣೆ ನಿರ್ವಹಣೆ ದುರಸ್ಥಿ ನವೀಕರಣ ಇವೆಲ್ಲವನ್ನು ಪಾರಂಪರಿಕ ಕಟ್ಟಡ ಸಂರಕ್ಷಸಿ ಹೆರಿಟೇಜ್ ಮಾನದಂಡ ಪ್ರಕಾರ ಮಾಡಲು ಪಾರದರ್ಶಕ ಟೆಂಡರ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ