ಶಕ್ತಿ ಯೋಜನೆ ಸ್ಮಾರ್ಟ್‌ ಕಾರ್ಡ್ ವಿತರಣೆ ಅವಧಿ ಮತ್ತೆ ವಿಸ್ತರಣೆ: ಸಂಪುಟ ಸಭೆಯಲ್ಲಿ ತೀರ್ಮಾನ

ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗದುಕೊಳ್ಳಲಾಗಿದೆ. ಸಭೆ ಬಳಿಕ ಸಚಿವ ಹೆಚ್‌.ಕೆ.ಪಾಟೀಲ್‌ ಮಾತನಾಡಿ, ಶಕ್ತಿ ಯೋಜನೆ ಸ್ಮಾರ್ಟ್‌ ಕಾರ್ಡ್ ವಿತರಣೆ ಅವಧಿ ಮತ್ತೆ ಆರು ತಿಂಗಳಿಗೆ ವಿಸ್ತರಣೆ ಮಾಡಿದ್ದು, ಇದಕ್ಕೆ ಸೇವಾ ಶುಲ್ಕ 14.16 ರೂ. ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆ ಸ್ಮಾರ್ಟ್‌ ಕಾರ್ಡ್ ವಿತರಣೆ ಅವಧಿ ಮತ್ತೆ ವಿಸ್ತರಣೆ: ಸಂಪುಟ ಸಭೆಯಲ್ಲಿ ತೀರ್ಮಾನ
ಸಚಿವ ಹೆಚ್‌.ಕೆ.ಪಾಟೀಲ್‌
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 07, 2023 | 8:26 PM

ಬೆಂಗಳುರೂ, ಸೆಪ್ಟೆಂಬರ್​​ 7: ಶಕ್ತಿ ಯೋಜನೆ ಸ್ಮಾರ್ಟ್‌ ಕಾರ್ಡ್ ವಿತರಣೆ ಅವಧಿ ಮತ್ತೆ ಆರು ತಿಂಗಳಿಗೆ ವಿಸ್ತರಣೆ ಮಾಡಿದ್ದು, ಇದಕ್ಕೆ ಸೇವಾ ಶುಲ್ಕ 14.16 ರೂ. ನಿಗದಿ ಮಾಡಲಾಗಿದೆ ಎಂದು ಸಚಿವ ಹೆಚ್‌.ಕೆ.ಪಾಟೀಲ್ (HK Patil) ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್​, ವಾಯುವ್ಯ ಸಾರಿಗೆಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 375 ಹೊಸ ಬಸ್, ಬಿಎಂಟಿಸಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಎಸಿ ಎಲೆಕ್ಟ್ರಿಕ್ ಬಸ್​ ಮತ್ತು ಕರ್ನಾಟಕ ಸಾರಿಗೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್ ಖರೀದಿಗೆ ಸಚಿವ ಸಂಪುಟಲ್ಲಿ ಅನುಮೋದನೆ ದೊರೆತಿದೆ ಎಂದು ಹೇಳಿದರು.

ಕಳಪೆ ಸಮವಸ್ತ್ರ ಪೂರೈಕೆ ಬಗ್ಗೆ ತನಿಖೆಗೆ ಸಂಪುಟ ಸಭೆಯಲ್ಲಿ ತೀರ್ಮಾನ

ಕೇಂದ್ರೀಯ ಭಂಡಾರದಿಂದ ಕಳಪೆ ಸಮವಸ್ತ್ರ ಪೂರೈಕೆಯ ಬಗ್ಗೆ ತನಿಖೆಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಿಂದಿನ ಸರ್ಕಾರದಲ್ಲಿ ಆಗಿದ್ದ ಕಳಪೆ ಸಮವಸ್ತ್ರ ಪೂರೈಕೆ, ಹಣ ಪಾವತಿ, ಶಾಲಾ ಸಮವಸ್ತ್ರ ಪೂರೈಸಿದ ಕೆಹೆಚ್‌ಡಿಸಿಗೆ 14.48 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ; ಸಿಎಂ ಹೇಳಿದ್ದೇನು?

ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಬಗ್ಗೆ ನ್ಯಾ.ಭಕ್ತವತ್ಸಲ ಸಮಿತಿ ಶಿಫಾರಸು ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು. ಉಗ್ರಾಣಗಳ ನಿರ್ಮಾಣಕ್ಕೆ 13 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಲಾಗುತ್ತಿದೆ. ಕೆಪಿಎಸ್‌ಸಿಯ ಎರಡು ಖಾಲಿ ಸ್ಥಾನಗಳ ಭರ್ತಿ ಸಿಎಂ ವಿವೇಚನೆ ನಡೆಸಿದ್ದು, ಆರ್ಥಿಕ ಇಲಾಖೆಯ 5ನೇ ರಾಜ್ಯ ಹಣಕಾಸು ಆಯೋಗ ರಚನೆ, ಅಧ್ಯಕ್ಷರು ಹಾಗೂ ಇಬ್ಬರು ಸದಸ್ಯರನ್ನು ಒಳಗೊಂಡ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ.

ವೈದ್ಯಕೀಯ ಕಾಲೇಜುಗಳ ಸಿವಿಲ್ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ

ಮಂಡ್ಯ, ಕೊಪ್ಪಳ, ಕಲಬುರ್ಗಿ ವೈದ್ಯಕೀಯ ಕಾಲೇಜುಗಳ ಸಿವಿಲ್ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಮಲೆನಾಡು ಭಾಗದ ಕೆಲವೆಡೆ ಹೊರತುಪಡಿಸಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ತಿದ್ದುಪಡಿ ತರುವುದಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು, ಜೆಒಸಿ ಉಪನ್ಯಾಸಕರ ಬಿಇಡಿ ಶಿಕ್ಷಣಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ನೀಚ ಎಂದು ಕರೆಯಲು ಯತ್ನಿಸಿದ ಸಿಎಂ ಸಿದ್ದರಾಮಯ್ಯ; ಪ್ರಲ್ಹಾದ್ ಜೋಶಿ ಕಿಡಿ

ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ 307.96 ಕೋಟಿ ರೂ. ಹಣ ಕೊಡಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದಿಸಿದೆ. ನಗರಾಭಿವೃದ್ಧಿ ಇಲಾಖೆಯಿಂದ ಕೋರಮಂಗಲ ಬಳಿ ಒಳ ವರ್ತುಲ ರಸ್ತೆ 2012-13ರಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧಾರ‌ ಕೈಗೊಳ್ಳಲಾಗಿತ್ತು. ಕಾವೇರಿ ವಿಚಾರದಲ್ಲಿ ರೈತರ ಹಿತರಕ್ಷಣೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ ಬಗ್ಗೆ ಜಲಸಂಪನ್ಮೂಲ ಇಲಾಖೆ ಸಚಿವರು ಸಂಪುಟ ಸಭೆಯಲ್ಲಿ ವಿವರಿಸಿದ್ದಾರೆ ಎಂದು ಸಚಿವ ಹೆಚ್‌.ಕೆ.ಪಾಟೀಲ್‌ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಶಿಕ್ಷೆ ಕೊಡಿಸಲು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ
ಶಿಕ್ಷೆ ಕೊಡಿಸಲು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ
ಸತತ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ: ಗಿನ್ನಿಸ್​ ದಾಖಲೆ
ಸತತ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ: ಗಿನ್ನಿಸ್​ ದಾಖಲೆ
ನಟ ದರ್ಶನ್ 45 ದಿನಗಳಿಂದ ಹೊರಗಿದ್ದರೂ ಭೇಟಿಯ ಪ್ರಯತ್ನ ಮಾಡಿಲ್ಲ
ನಟ ದರ್ಶನ್ 45 ದಿನಗಳಿಂದ ಹೊರಗಿದ್ದರೂ ಭೇಟಿಯ ಪ್ರಯತ್ನ ಮಾಡಿಲ್ಲ
ಗದಗ: ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್ ಕೊರೆಸಿದ ಅತ್ತೆ, ಸೊಸೆ!
ಗದಗ: ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್ ಕೊರೆಸಿದ ಅತ್ತೆ, ಸೊಸೆ!
ಇಂಥ ಎಫ್​ಐಆರ್​ಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲ್ಲ: ಶೆಟ್ಟರ್
ಇಂಥ ಎಫ್​ಐಆರ್​ಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲ್ಲ: ಶೆಟ್ಟರ್
ಪತ್ನಿ ಮತ್ತು ಮಕ್ಕಳು ಓಡಿ ಬಂದು ಅರ್ಜುನ್​ರನ್ನು ತಬ್ಬಿಕೊಂಡರು!
ಪತ್ನಿ ಮತ್ತು ಮಕ್ಕಳು ಓಡಿ ಬಂದು ಅರ್ಜುನ್​ರನ್ನು ತಬ್ಬಿಕೊಂಡರು!
ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್
ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್