ಬೆಂಗಳುರೂ, ಸೆಪ್ಟೆಂಬರ್ 7: ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ ಅವಧಿ ಮತ್ತೆ ಆರು ತಿಂಗಳಿಗೆ ವಿಸ್ತರಣೆ ಮಾಡಿದ್ದು, ಇದಕ್ಕೆ ಸೇವಾ ಶುಲ್ಕ 14.16 ರೂ. ನಿಗದಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ (HK Patil) ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್, ವಾಯುವ್ಯ ಸಾರಿಗೆಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 375 ಹೊಸ ಬಸ್, ಬಿಎಂಟಿಸಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಎಸಿ ಎಲೆಕ್ಟ್ರಿಕ್ ಬಸ್ ಮತ್ತು ಕರ್ನಾಟಕ ಸಾರಿಗೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್ ಖರೀದಿಗೆ ಸಚಿವ ಸಂಪುಟಲ್ಲಿ ಅನುಮೋದನೆ ದೊರೆತಿದೆ ಎಂದು ಹೇಳಿದರು.
ಕೇಂದ್ರೀಯ ಭಂಡಾರದಿಂದ ಕಳಪೆ ಸಮವಸ್ತ್ರ ಪೂರೈಕೆಯ ಬಗ್ಗೆ ತನಿಖೆಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಿಂದಿನ ಸರ್ಕಾರದಲ್ಲಿ ಆಗಿದ್ದ ಕಳಪೆ ಸಮವಸ್ತ್ರ ಪೂರೈಕೆ, ಹಣ ಪಾವತಿ, ಶಾಲಾ ಸಮವಸ್ತ್ರ ಪೂರೈಸಿದ ಕೆಹೆಚ್‌ಡಿಸಿಗೆ 14.48 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ; ಸಿಎಂ ಹೇಳಿದ್ದೇನು?
ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಬಗ್ಗೆ ನ್ಯಾ.ಭಕ್ತವತ್ಸಲ ಸಮಿತಿ ಶಿಫಾರಸು ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು. ಉಗ್ರಾಣಗಳ ನಿರ್ಮಾಣಕ್ಕೆ 13 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಲಾಗುತ್ತಿದೆ. ಕೆಪಿಎಸ್‌ಸಿಯ ಎರಡು ಖಾಲಿ ಸ್ಥಾನಗಳ ಭರ್ತಿ ಸಿಎಂ ವಿವೇಚನೆ ನಡೆಸಿದ್ದು, ಆರ್ಥಿಕ ಇಲಾಖೆಯ 5ನೇ ರಾಜ್ಯ ಹಣಕಾಸು ಆಯೋಗ ರಚನೆ, ಅಧ್ಯಕ್ಷರು ಹಾಗೂ ಇಬ್ಬರು ಸದಸ್ಯರನ್ನು ಒಳಗೊಂಡ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ.
ಮಂಡ್ಯ, ಕೊಪ್ಪಳ, ಕಲಬುರ್ಗಿ ವೈದ್ಯಕೀಯ ಕಾಲೇಜುಗಳ ಸಿವಿಲ್ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಮಲೆನಾಡು ಭಾಗದ ಕೆಲವೆಡೆ ಹೊರತುಪಡಿಸಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ತಿದ್ದುಪಡಿ ತರುವುದಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು, ಜೆಒಸಿ ಉಪನ್ಯಾಸಕರ ಬಿಇಡಿ ಶಿಕ್ಷಣಕ್ಕೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ನೀಚ ಎಂದು ಕರೆಯಲು ಯತ್ನಿಸಿದ ಸಿಎಂ ಸಿದ್ದರಾಮಯ್ಯ; ಪ್ರಲ್ಹಾದ್ ಜೋಶಿ ಕಿಡಿ
ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ 307.96 ಕೋಟಿ ರೂ. ಹಣ ಕೊಡಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದಿಸಿದೆ. ನಗರಾಭಿವೃದ್ಧಿ ಇಲಾಖೆಯಿಂದ ಕೋರಮಂಗಲ ಬಳಿ ಒಳ ವರ್ತುಲ ರಸ್ತೆ
2012-13ರಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧಾರ ಕೈಗೊಳ್ಳಲಾಗಿತ್ತು. ಕಾವೇರಿ ವಿಚಾರದಲ್ಲಿ ರೈತರ ಹಿತರಕ್ಷಣೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ ಬಗ್ಗೆ ಜಲಸಂಪನ್ಮೂಲ ಇಲಾಖೆ ಸಚಿವರು ಸಂಪುಟ ಸಭೆಯಲ್ಲಿ ವಿವರಿಸಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.