AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಫೆಬ್ರವರಿ 26ರಂದು ದೇಶಾದ್ಯಂತ ಧರಣಿ; ಲಾರಿ ಮಾಲೀಕರ ಬೆಂಬಲ

Petrol And Diesel Price Rise | ಫೆಬ್ರವರಿ 26 ರಂದು ಸರಕು ಸಾಗಣೆ ಟ್ರೇಡರ್ಸ್​ಗಳಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘವೂ ಬೆಂಬಲ ವ್ಯಕ್ತಪಡಿಸಿದೆ. ಫೆ.26ರಂದು ಹೈವೇಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆಗೆ ಬೆಂಬಲ ನಿಡುತ್ತೇವೆ ಎಂದು ಟಿವಿ9ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಫೆಬ್ರವರಿ 26ರಂದು ದೇಶಾದ್ಯಂತ ಧರಣಿ; ಲಾರಿ ಮಾಲೀಕರ ಬೆಂಬಲ
ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 15, 2021 | 2:17 PM

Share

ಬೆಂಗಳೂರು: ಬಜೆಟ್ ಮಂಡನೆಯಾಗಿ ಎರಡೇ ವಾರಕ್ಕೆ ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಕಳೆದೊಂದು ವಾರದಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ರಾಕೆಟ್​ನಂತೆ ಗಗನಕ್ಕೆ ಏರುತ್ತಿದೆ. ಹೀಗಾಗಿ ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಅನೇಕ ಕಡೆ ಈಗಾಗಲೇ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಇಂಧನ ದರ 100ರ ಗಡಿ ದಾಟುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸರ್ಕಾರದ ವಿರುದ್ಧ ಆಕ್ರೋಶ ತೀವ್ರವಾಗುತ್ತಿದ್ದ ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ದೇಶಾದ್ಯಂತ ಧರಣಿ ನಡೆಸಲು ನಿರ್ಧರಿಸಲಾಗಿದೆ.

ಫೆಬ್ರವರಿ 26 ರಂದು ಸರಕು ಸಾಗಣೆ ಟ್ರೇಡರ್ಸ್​ಗಳಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘವೂ ಬೆಂಬಲ ವ್ಯಕ್ತಪಡಿಸಿದೆ. ಫೆ.26ರಂದು ಹೈವೇಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆಗೆ ಬೆಂಬಲ ನೀಡುತ್ತೇವೆ ಎಂದು ಟಿವಿ9ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೆ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸ್ತೇವೆ. ಅಂಗಡಿ ಮುಂಗಟ್ಟು ಬಂದ್ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಖಂಡಿಸಿ ದೇಶದ ನಾನಾ ಕಡೆ ಆಕ್ರೋಶ ವ್ಯಕ್ತವಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: Petrol Diesel Price Hike Impact | ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಯ್ತು… ಈಗ ಹಣ್ಣು-ತರಕಾರಿ ಬೆಲೆಯೂ ಏರುತ್ತಿದೆ! 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ