ಬೆಂಗಳೂರು: ಬಜೆಟ್ ಮಂಡನೆಯಾಗಿ ಎರಡೇ ವಾರಕ್ಕೆ ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಕಳೆದೊಂದು ವಾರದಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ರಾಕೆಟ್ನಂತೆ ಗಗನಕ್ಕೆ ಏರುತ್ತಿದೆ. ಹೀಗಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಅನೇಕ ಕಡೆ ಈಗಾಗಲೇ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಇಂಧನ ದರ 100ರ ಗಡಿ ದಾಟುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸರ್ಕಾರದ ವಿರುದ್ಧ ಆಕ್ರೋಶ ತೀವ್ರವಾಗುತ್ತಿದ್ದ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ದೇಶಾದ್ಯಂತ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಫೆಬ್ರವರಿ 26 ರಂದು ಸರಕು ಸಾಗಣೆ ಟ್ರೇಡರ್ಸ್ಗಳಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘವೂ ಬೆಂಬಲ ವ್ಯಕ್ತಪಡಿಸಿದೆ. ಫೆ.26ರಂದು ಹೈವೇಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆಗೆ ಬೆಂಬಲ ನೀಡುತ್ತೇವೆ ಎಂದು ಟಿವಿ9ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೆ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸ್ತೇವೆ. ಅಂಗಡಿ ಮುಂಗಟ್ಟು ಬಂದ್ ಮಾಡುತ್ತೇವೆ ಎಂದು ಹೇಳಿದರು.
ಇನ್ನು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಖಂಡಿಸಿ ದೇಶದ ನಾನಾ ಕಡೆ ಆಕ್ರೋಶ ವ್ಯಕ್ತವಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಇದನ್ನೂ ಓದಿ: Petrol Diesel Price Hike Impact | ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಯ್ತು… ಈಗ ಹಣ್ಣು-ತರಕಾರಿ ಬೆಲೆಯೂ ಏರುತ್ತಿದೆ!