Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಇಂದಿನಿಂದ 3ದಿನ ವಿಶೇಷ ಶಿಬಿರ, ನಿಮ್ಮ ಗ್ರಾ.ಪಂಚಾಯತಿಗೆ ಭೇಟಿ ನೀಡಿ

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರಿಂದ ಕೆಲ ದೂರುಗಳು ಕೇಳಿಬರುತ್ತಿವೆ. ಬ್ಯಾಂಕ್, ಆಧಾರ್ ಕಾರ್ಡ್​ ಲಿಂಕ್ ಸೇರಿದಂತೆ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಈ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸಲು ಮೂರು ದಿನ ವಿಶೇಶ ಕ್ಯಾಂಪ್ ಆಯೋಜಿಸಿದೆ.

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಇಂದಿನಿಂದ 3ದಿನ ವಿಶೇಷ ಶಿಬಿರ, ನಿಮ್ಮ ಗ್ರಾ.ಪಂಚಾಯತಿಗೆ ಭೇಟಿ ನೀಡಿ
Follow us
ರಮೇಶ್ ಬಿ. ಜವಳಗೇರಾ
|

Updated on:Dec 27, 2023 | 9:41 AM

ಬೆಂಗಳೂರು, (ಡಿಸೆಂಬರ್ 27): ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆಗೆ ( Gruha Lakshmi scheme) ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು, ಗೃಹ ಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಫಲಾನುಭವಿಗಳು ನಿಮ್ಮ ಗ್ರಾಮ ಪಂಚಾಯಿತಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅದರಂತೆ, ದಿನಾಂಕ:27.12.2023 ರಿಂದ 29.12.2023 ರವರೆಗೆ ಕ್ಯಾಂಪ್‌ ಆಯೋಜಿಸಿದ್ದು, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಮೂರು ದಿನ ಬೆಳಿಗ್ಗೆ 9 ರಿಂದ ಸಂಜೆ 5 ರ ವರೆಗೆ ಈ ಶಿಬಿರದಲ್ಲಿ ಸುಮಾರು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಫಲಾನುಭವಿಗಳ ಬ್ಯಾಂಕ್ ಖಾತೆ ಸಮಸ್ಯೆ, ಹಣ ಜಮೆಗೆ ಸಂಬಂಧಿಸಿದಂತೆ ಈ ಯೋಜನೆಗಯ ಲಾಭ ಪಡೆದುಕೊಳ್ಳಲು ಫಲಾನುಭವಿಗಳಿಗೆ ಕೆಲ ತೊಂದರೆಗಳು ಆಗುತ್ತಿರುವುದು ಕಂಡುಬಂದಿದೆ. ಹೀಗಾಗಿ ಈ ಕ್ಯಾಂಪ್​ನಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹರಿಸಲಾಗುತ್ತದೆ.

  • ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.
  • ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು
  •  ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
  • ಇ-ಕೆವೈಸಿ ಅಪ್‌ಡೇಟ್ ಮಾಡುವುದು.
  •  ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
  • ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:37 am, Wed, 27 December 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​