AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ಆಗದು; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್

Karnataka Lockdown News: ರಾಜ್ಯದಲ್ಲಿ ರಾತ್ರೋರಾತ್ರಿ ಬೆಡ್ ಸೌಲಭ್ಯವನ್ನು ಒದಗಿಸಬಹುದು. ಆದರೆ ಐಸಿಯು, ವೆಂಟಿಲೇಟರ್ ಮತ್ತು ವೈದ್ಯರುಗಳನ್ನು ಒದಗಿಸಲು ಆಗಲ್ಲ. ಈ ವ್ಯವಸ್ಥೆಗಳನ್ನು ಕಲ್ಪಿಸಲು ನಮಗೆ ಕನಿಷ್ಠ 15 ದಿನಗಳ ಸಮಯವಾದರೂ ಬೇಕಾಗುತ್ತದೆ: ಪಿ. ರವಿಕುಮಾರ್

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ಆಗದು; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ (ಸಂಗ್ರಹ ಚಿತ್ರ)
guruganesh bhat
|

Updated on: Apr 24, 2021 | 2:53 PM

Share

ಬೆಂಗಳೂರು: ರಾಜ್ಯದಲ್ಲಿ ವಾರದ ಇತರ ದಿನಗಳಲ್ಲೂ ಕರ್ಫ್ಯೂವನ್ನು ಮುಂದುವರಿಸಿದರೆ ಒಳಿತು ಎಂದು ಬಿಬಿಎಂಪಿ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೂ ಕರ್ಫ್ಯೂ ಮುಂದುವರಿಸಬೇಕೆಂಬ ಇಚ್ಛೆ ಇದೆ. ಆದರೆ ರಾಜ್ಯದಲ್ಲಿರುವ ಜನರೇ ಬೇಡ ಎಂದು ಹೇಳುತ್ತಿದ್ದಾರೆ. ಎಲ್ಲವನ್ನೂ ಸರ್ಕಾರ ಮಾಡಬೇಕೆಂದು ಜನ ತಿಳಿಯಬಾರದು. ಜನರಿಗೂ ಕೂಡ ಜವಾಬ್ದಾರಿ ಇರಬೇಕು ಎಂದು ಬೆಂಗಳೂರಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ತಿಳಿಸಿದರು.

ರಾಜ್ಯದಲ್ಲಿ ರಾತ್ರೋರಾತ್ರಿ ಬೆಡ್ ಸೌಲಭ್ಯವನ್ನು ಒದಗಿಸಬಹುದು. ಆದರೆ ಐಸಿಯು, ವೆಂಟಿಲೇಟರ್ ಮತ್ತು ವೈದ್ಯರುಗಳನ್ನು ಒದಗಿಸಲು ಆಗಲ್ಲ. ಈ ವ್ಯವಸ್ಥೆಗಳನ್ನು ಕಲ್ಪಿಸಲು ನಮಗೆ ಕನಿಷ್ಠ 15 ದಿನಗಳ ಸಮಯವಾದರೂ ಬೇಕಾಗುತ್ತದೆ. ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳು ಕೂಡ ನಡೆಯಬೇಕಾಗಿದೆ. ರಾಜ್ಯದಲ್ಲಿ ಕಂಪ್ಲೀಟ್ ಲಾಕ್‌ಡೌನ್ ಮಾಡಲು ಆಗುವುದಿಲ್ಲ. ಹೀಗಾಗಿ, ಸೋಮವಾರದಿಂದ ನೈಟ್ ಕರ್ಫ್ಯೂ ಮಾತ್ರ ಇರುತ್ತದೆ. ಆದರೆ, ನಮ್ಮ ರಾಜ್ಯದಲ್ಲೂ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಪ್ರಕರಣ ಕಡಿಮೆ ಆಗಬಹುದೆಂಬ ನಂಬಿಕೆ ದೃಢವಾಗಿದೆ. ಇದನ್ನು ಸಾಧ್ಯವಾಗಿಸಲು ಜನರು ಮನೆಯಿಂದ ಅನಗತ್ಯವಾಗಿ ಹೊರಬರಬಾರದು ಎಂದು ಅವರು ಮನವಿ ಮಾಡಿದರು.

ವಾರಾಂತ್ಯದ ಕರ್ಫ್ಯೂ ಪರಿಶೀಲಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಲ್ಲೆಡೆ ಜಾರಿಗೊಳಿಸಿದ್ದ ವೀಕೆಂಡ್​ ಕರ್ಫ್ಯೂ ಯಶಸ್ವಿಯಾಗಿದೆ. ಜನ ಸಹಕಾರ ಕೊಡುತ್ತಿದ್ದಾರೆ, ಜನರಲ್ಲೂ ಅರಿವು ಮೂಡಿದೆ. ಕೊರೊನಾ ಸೋಂಕು ಕಳೆದ ಬಾರಿಗಿಂತ ಹೆಚ್ಚು ತೀವ್ರವಾಗಿದೆ. ಪೊಲೀಸರು ಕೂಡ ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡ್ತಿದ್ದಾರೆ ಎಂದು ಬೆಂಗಳೂರಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲು ಸಾಕಷ್ಟು ಕ್ರಮ ಕೈಗೊಂಡಿದ್ದೇವೆ. ಆಕ್ಸಿಜನ್ ವಿಚಾರವಾಗಿ ನಿನ್ನೆ 3 ಗಂಟೆ ಸಭೆ ಮಾಡಿದ್ದೇವೆ. ಈಗ ಸುಮಾರು 800 ಮೆಟ್ರಿಕ್ ಟನ್ ಸರಬರಾಜು ಆಗುತ್ತಿದೆ. ಆದರೆ ಪ್ರತಿನಿತ್ಯ ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಉತ್ಪಾದಕರ ಬಳಿ ಸಿಎಸ್​ ಮಾತಾಡಿ ಪಡೆದಿದ್ದಾರೆ. ನಮ್ಮ ಘಟಕಗಳಲ್ಲೂ ಆಕ್ಸಿಜನ್ ಉತ್ಪಾದನೆ ಮಾಡುತ್ತೇವೆ. ಕೆಲವು ಸಿಮೆಂಟ್ ಫ್ಯಾಕ್ಟರಿಗಳಲ್ಲೂ ಉತ್ಪಾದನೆ ಆಗುತ್ತಿದೆ. ಚೀಫ್ ಸೆಕ್ರೆಟರಿ ಆಕ್ಸಿಜನ್ ಉತ್ಪಾದಕರ ಬಳಿ ಮಾತನಾಡಿ ಹೆಚ್ಚುವರಿ ಪಡೆದುಕೊಂಡಿದ್ದೇವೆ. ನಮ್ಮ ಪವರ್ ಪ್ಲ್ಯಾಂಟ್​ನಲ್ಲೂ ಆಕ್ಸಿಜನ್ ಉತ್ಪಾದನೆ ಮಾಡುತ್ತೇವೆ. ಅದನ್ನೂ ವೈದ್ಯಕೀಯ ಉಪಯೋಗಕ್ಕೆ ಬಳಸಿಕೊಳ್ಳುತ್ತೇವೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್​ಪಂತ್​ ಅವರನ್ನು ಭೇಟಿಯಾಗಿ ವೀಕೆಂಡ್ ಕರ್ಫ್ಯೂ ಬಗ್ಗೆ ಮಾಹಿತಿ ಪಡೆದರು. ನಗರದ ಪರಿಸ್ಥಿತಿ ಅವಲೋಕಿಸಿ ಕೈಗೊಂಡ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

(Can not done complete lockdown in Karnataka says CS P Ravikumar in Bengaluru)

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ