ಸೊಂಕು ಹೆಚ್ಚಳ ಹಿನ್ನೆಲೆ ಕೆನರಾ ಬ್ಯಾಂಕ್‌ನಿಂದ ಸೇವಾ ಸಮಯ ಕಡಿತ, 10 ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಜನರಿಗೆ ಅವಕಾಶ

|

Updated on: Apr 22, 2021 | 10:01 AM

ಕೊರೊನಾ 2ನೆ ಅಲೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿ ಕೆಲವು ಕ್ರಮಗಳನ್ನು ಕೈಗೊಂಡಿದೆ. ಕೆನರಾ ಬ್ಯಾಂಕ್‌ನ ಸೇವಾ ಸಮಯ ಕಡಿತಗೊಳಿಸಲಾಗಿದೆ.

ಸೊಂಕು ಹೆಚ್ಚಳ ಹಿನ್ನೆಲೆ ಕೆನರಾ ಬ್ಯಾಂಕ್‌ನಿಂದ ಸೇವಾ ಸಮಯ ಕಡಿತ, 10 ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಜನರಿಗೆ ಅವಕಾಶ
ಸಾಂದರ್ಭಿಕ ಚಿತ್ರ
Follow us on

ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ನ ಸೇವಾ ಸಮಯ ಕಡಿತಗೊಳಿಸಲಾಗಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಇಂದಿನಿಂದ ಮೇ 31ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಕೆನರಾ ಬ್ಯಾಂಕ್‌ನಲ್ಲಿ ಶೇ.50ರಷ್ಟು ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸಬೇಕೆಂದು ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಕೊರೊನಾ 2ನೆ ಅಲೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿ ಕೆಲವು ಕ್ರಮಗಳನ್ನು ಕೈಗೊಂಡಿದೆ. ಕೆನರಾ ಬ್ಯಾಂಕ್‌ನ ಸೇವಾ ಸಮಯ ಕಡಿತಗೊಳಿಸಲಾಗಿದೆ. ಹಾಗೂ ಕೇವಲ ಶೇ.50ರಷ್ಟು ಸಿಬ್ಬಂದಿ ಮಾತ್ರ ಬ್ಯಾಂಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಕೆಲವು ಬ್ಯಾಂಕ್ ನೌಕರರಿಗೆ ವರ್ಕ್ ಫ್ರಮ್ ಹೋಂಗೆ ಅವಕಾಶ ನೀಡಲಾಗಿದೆ. ಪ್ರತಿ ಸಿಬ್ಬಂದಿ ಕೊರಾನಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸೂಚನೆ ನೀಡಿದೆ.

ಮೈಸೂರಿಗೆ ಸುಧಾಕರ್ ಭೇಟಿ
ಇನ್ನು ಇಂದು ಮೈಸೂರಿನ ತಾಲ್ಲೂಕು ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಭೇಟಿ ನೀಡಲಿದ್ದಾರೆ. ಹಾಗೂ ಆಸ್ಪತ್ರೆ ಸೌಲಭ್ಯಗಳ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ಬಗ್ಗೆ ಸಭೆ ನಡೆಸಲಿದ್ದಾರೆ. ಕೋವಿಡ್19 ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಸಂಜೆ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.

ಮೈಸೂರು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಆತಂಕ
ಮೈಸೂರು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಹುಣಸೂರು ತಾಲ್ಲೂಕಿನ 180 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹುಣಸೂರು ತಾಲೂಕಿನಲ್ಲಿ ಬುಧವಾರ ಒಂದೇ ದಿನ 46 ಜನರಲ್ಲಿ ಸೋಂಕು ದೃಢಪಟ್ಟಿದೆ. ಗುರುಪುರ ಟಿಬೆಟ್ ನಿರಾಶ್ರಿತರ ಕ್ಯಾಂಪ್‌ಗಳಲ್ಲಿ ಸೋಂಕಿತರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಕೆಂಪಮ್ಮನ ಹೊಸೂರಿನಲ್ಲಿ 19 ಜನರಿಗೆ ಸೋಂಕು ತಗುಲಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 18 ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಉಳಿದವರು ಹೋಂ ಕ್ವಾರಂಟೇನ್ ಮಾಡಲಾಗಿದೆ. ಇದುವರೆಗೂ 2943 ಜನರಿಗೆ ಸೋಂಕು ತಗುಲಿದೆ. 2730 ಜನರು ಗುಣಮುಖರಾಗಿದ್ದಾರೆ. ತಾಲ್ಲೂಕಿನಲ್ಲಿ 36 ಜನ ಕೊರೊನಾಗೆ ಬಲಿಯಾಗಿದ್ದಾರೆ ಹಾಗೂ 180 ಸಕ್ರಿಯ ಪ್ರಕರಣಗಳಿವೆ ಎಂದು ಟಿ.ಹೆಚ್.ಓ ಡಾ.ಕೀರ್ತಿಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ