ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

| Updated By: ವಿವೇಕ ಬಿರಾದಾರ

Updated on: Sep 29, 2024 | 8:18 AM

ಕೇಕ್ ಪ್ರಿಯರಿಗೆ ಆಹಾರ ಇಲಾಖೆ ಕಹಿ ಸುದ್ದಿ ನೀಡಿದೆ. ನೀವೇನಾದರು ರೆಡ್ ವೆಲ್ವೆಟ್, ಬ್ಲಾಕ್ ಫಾರೆಸ್ಟ್ ಕೇಕ್ ಲವರ್ಸ್ ಆಗಿದ್ದರೇ ಈ ಸುದ್ದಿಯನ್ನು ಒಮ್ಮೆ ಓದಿ. ಏಕೆಂದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಆತಂಕಕಾರಿ ಅಂಶ ಹೊರಬಿದ್ದಿದೆ.

ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!
ಕೇಕ್
Follow us on

ಬೆಂಗಳೂರು, ಸೆಪ್ಟೆಂಬರ್​ 29: ಗೋಬಿ, ಕಬಾಬ್​ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ (Cancer)​ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್​​ಗೆ (Cake) ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಕೇಕ್​​ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್​ ಮಾದರಿಗಳನ್ನು ಸಂಗ್ರಹಿಸಿದರು. ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್​ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ನಲ್ಲಿ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ, ಇದು ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ

ಹಾಗೂ, ರುಚಿ ಎನಿಸುವ ಕೇಕ್ ತಿನ್ನುವ ಮುನ್ನ ಎಚ್ಚರಿಕೆ ವಹಿಸಬೇಕಿದೆ. 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R , ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ. ಈ ಕೃತಕ ಬಣ್ಣಗಳಿಂದ ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Sun, 29 September 24