ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

ರಾಜ್ಯ ಸರ್ಕಾರ ಇತ್ತೀಚಿಗಷ್ಟೆ ಗೋಬಿ ಮಂಚೂರಿ, ಕಬಾಬ್​ಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​ ಮಾಡಿತ್ತು. ಗೋಬಿ ಮಂಚೂರಿ, ಕಬಾಬ್​ಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಇದೀಗ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆಯಾಗಿದೆ.

ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?
ಪಾನಿಪುರಿ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Jun 27, 2024 | 1:52 PM

ಬೆಂಗಳೂರು, ಜೂನ್​ 27: ಗೋಬಿ ಮಂಚೂರಿ (Gobi Manchuri), ಕಬಾಬ್​​ಗೆ (Kabab) ಕ್ಯಾನ್ಸರ್​ (Cancer) ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ (Karnataka Government) ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​​ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ (Panipuri) ಪ್ರಿಯರಿಗೂ ಶಾಕ್​​ ನೀಡಲು ಸದ್ದಿಲ್ಲದೆ ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಗೆ ಬಳಸುವ ಸಾಸ್​, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ.

ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪುರಿ ತಯಾರಿಕೆಗೆ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್​ ಮಾಡುವ ಬಗ್ಗೆ ಚಿಂತನೆ ನಡೆದಿದೆ.

ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಪಾನಿಪುರಿ ಬಗ್ಗೆ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 243 ಮಾದರಿಗಳನ್ನು ಸಂಗ್ರಹಿಸಿದ್ದೇವು. 41 ಮಾದರಿಗಳಲ್ಲಿ ಅಸುರಕ್ಷಿತ ಅಂತ ಬಂದಿದೆ. 18 ಮಾದರಿಗಳು ಕಳಪೆ ಗುಣಪಟ್ಟದಿಂದ ಕೂಡಿವೆ. ಪಾನಿಪುರಿಯಲ್ಲಿ 4-5 ರಾಸಾಯನಿಕಗಳನ್ನು ಬಳಸಿರುವುದು ಪರಿಶೀಲನೆ ವೇಳೆ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ಇನ್ನೂ 4-5 ಮಾದರಿಗಳ ಫಲಿತಾಂಶ ಬರಬೇಕಿದೆ. ಅವು ಬಂದ ಬಳಿಕ ಸಭೆ ನಡೆಸಿ, ಬಳಿಕ ಪಾನಿಪುರಿಗೆ ಬಳಸುವ ರಾಸಾಯನಿಕಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದೆ ಎಂದರು.

ಪಾನಿಪುರಿಯಲ್ಲಿ ಬಳಸುವ ಕಾರ ಹಾಗೂ ಮಿಟಾದಲ್ಲಿ ರಾಸಾಯನಿಕಗಳು ಪತ್ತೆಯಾಗಿವೆ. ಕಾರ ಹೆಚ್ಚಾಗಿ ತಿನ್ನುವುದರಿಂದ ಅಸಿಡಿಟಿ, ಭೇದಿಯಾಗುತ್ತದೆ. ಹೆಚ್ಚಿಗೆ ಕಾರ ಇರುವ ಪಾನಿಪುರಿಯನ್ನು 5-7 ವರ್ಷ ತಿಂದರೆ ಅಲ್ಸರ್​ ಮತ್ತು ಕ್ಯಾನ್ಸರ್​ ರೋಗ ಬರುತ್ತದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Thu, 27 June 24

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ