ದೇವನಹಳ್ಳಿ: ಕಾಂಕ್ರೀಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಇಂದು ಮುಂಜಾನೆ ಬಾಗಲೂರು-ಕಣ್ಣೂರು ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಬಾಗಲೂರಿನ ಶಿವು (26), ಮಿಲನ್(25) ಹಾಗೂ ಸಾತನೂರಿನ ಮಧು(26) ಮೃತ ದುರ್ದೈವಿಗಳಾಗಿದ್ದಾರೆ. ಅನೂಷಾ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂಚಾರಿ ಡಿಸಿಪಿ ಸಜಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ಗೆ ಲಾರಿ ಡಿಕ್ಕಿ: ಅಪಘಾತದ ರಭಸಕ್ಕೆ ರಸ್ತೆಯ ಮಧ್ಯದಲ್ಲಿಯೇ ಹೊತ್ತಿ ಉರಿದ ಲಾರಿ