AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಮೂವರು ಸಜೀವದಹನ, ಓರ್ವ ಗಂಭೀರ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ತಡೆಗೋಡೆಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವ ದಹನವಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಮೂವರು ಸಜೀವದಹನ, ಓರ್ವ ಗಂಭೀರ
ಹೊತ್ತಿಉರಿದ ಕಾರುImage Credit source: tv9 kannada
Jagadisha B
| Edited By: |

Updated on: Apr 01, 2026 | 6:58 PM

Share

ತುಮಕೂರು, ಏಪ್ರಿಲ್​ 01: ಭೀಕರ ಅಪಘಾತಕ್ಕೆ ಕಾರೊಂದು ಹೊತ್ತಿಉರಿದಿದ್ದು, ಮೂವರು ಸಜೀವದಹನವಾಗಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೋರಗೆರೆ ಸೇತುವೆ ಮೇಲೆ ನಡೆದಿದೆ. ಮೃತರು ಗುಬ್ಬಿ ತಾಲೂಕಿನವರು ಎನ್ನಲಾಗುತ್ತಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸದ್ಯ ಗಾಯಾಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ನಾಲ್ವರು ಇಂದು ಪಂಚಣಿಯಹಳ್ಳಿ ಹತ್ತಿರದ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಂಡು ವಾಪಸ್​ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಸೇತುವೆಯ ತಡೆಗೊಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಮೂವರು ಸಜೀವದಹನವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು,  ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕಸ್ಮಿಕ ಬೆಂಕಿ: ಕುರಿಗಾಹಿ ಸೇರಿ 45 ಕುರಿಗಳು ಸಜೀವದಹನ

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೊರಾಳ ಗ್ರಾಮದಲ್ಲಿ ತಡರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಕುರಿಗಾಹಿ ಸೇರಿದಂತೆ ಸುಮಾರು 45 ಕುರಿಗಳು ಸಜೀವ ದಹನಗೊಂಡಿರುವಂತಹ ಘಟನೆ ನಡೆದಿದೆ. ಶಂಕರ ಮೇತ್ರ (65) ಮೃತ ವ್ಯಕ್ತಿ. ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಆಕಸ್ಮಿಕ ಕಾರಣದಿಂದ ಬೆಂಕಿ ತಗುಲಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ತನ್ನದೇ ಟೆಂಪೋದಲ್ಲಿ ಶವವಾಗಿ ಪತ್ತೆಯಾದ ಮಾಲೀಕ: ಸಾವಿನ ಸುತ್ತ ಅನುಮಾನದ ಹುತ್ತ

ಇನ್ನು ಈ ಘಟನೆ ಔರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಮಾಹಿತಿ ದೊರಯುತ್ತಿದ್ದಂತೆ ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ನಿಖರ ಕಾರಣ ಸ್ಪಷ್ಟವಾಗಿಲ್ಲ.

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ಹೊರಟ್ಟಿದ್ದ ಶ್ರೀನಿವಾಸ್(54) ಮೃತ ವ್ಯಕ್ತಿ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಜೀಪ್ ಚಾಲಕರಾಗಿದ್ದರು. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us