ಬಾಗಲಕೋಟೆ: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಛಬ್ಬಿ ಗ್ರಾಮದ ಬಳಿ ನಡದಿದೆ. ಕಾರುಗಳಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ತಡರಾತ್ರಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಎರಡು ಕಾರಿನ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ಲಮಾಣಿ (29), ರಂಗಪ್ಪ ಕಟ್ಟಿಮನಿ (26) ಮೃತ ದುರ್ದೈವಿಗಳು. ಸಾಗರ ಲಮಾಣಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ದಾಡಿಬಾವಿ ತಾಂಡಾ ನಿವಾಸಿಯಾಗಿದ್ದು, ರಂಗಪ್ಪ ಕಟ್ಟಿಮನಿ ವಾಂಬೆ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ. ಕಾರುಗಳಲ್ಲಿದ್ದ ಮೂವರಿಗೆ ಗಾಯವಾಗಿದೆ. ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Drug Case: ಡ್ರಗ್ ಕೇಸ್ನಲ್ಲಿ CCB ಬಿಜಿಯಾಗಿದ್ದಾಗ ಸ್ಟಾರ್ ಹೋಟೆಲ್ನಲ್ಲಿ ನಡೆಯುತ್ತಿತ್ತು ಹೈಫೈ ಡ್ರಗ್ ಪಾರ್ಟಿಗಳು! 5 ಮಂದಿ ಅರೆಸ್ಟ್