ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು

ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಬಿಂದುಗೌಡ ವಿರುದ್ಧ​ ದೂರು ನೀಡಿದ್ದಾರೆ.

ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು
ಬಿಂದು ಗೌಡ (ಎಡ), ಕೆ. ಸುಧಾಕರ್ (ಬಲ)
Follow us
TV9 Web
| Updated By: ganapathi bhat

Updated on:Apr 05, 2022 | 12:51 PM

ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​ ಚಿತ್ರವನ್ನು ಮಹಿಳೆಗೆ ಹೋಲಿಸಿ  ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಬಿಂದುಗೌಡ ವಿರುದ್ಧ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಕೆಪಿಸಿಸಿಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ವಿರುದ್ಧ ಐಟಿ ಆ್ಯಕ್ಟ್ 2008ರ ಅಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್​ ದೂರು ನೀಡಿದ್ದಾರೆ.

‘ಅಖಿಲ ಕರ್ನಾಟಕ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದಿಂದ ಸುಧಾಕರ್ ಅವರಿಗೆ ಭಾರಿ ಗೌರವ ಪೂರಕ ಅಭಿನಂದನೆ’ ಎಂದು ಬರೆದು ಬಿಂದು ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. ಕೊರೊನಾ ಕಾರಣದಿಂದ ಥಿಯೇಟರ್​ಗಳಿಗೆ ಹೇರಿದ್ದ ನಿಯಮಾವಳಿಗಳನ್ನು ಸಡಿಲಗೊಳಿಸಿದ ಕಾರಣ ಈ ರೀತಿ ಪೋಸ್ಟ್ ಹಂಚಿಕೊಂಡಿದ್ದರು. ಆದರೆ, ಪೋಸ್ಟ್​ನಲ್ಲಿ ಆರೋಗ್ಯ ಸಚಿವ ಸುಧಾಕರ್​ರನ್ನು ಹುಡುಗಿಯಂತೆ ತೋರಿಸುವ, ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಅದರ ವಿರುದ್ಧ ಈಗ ದೂರು ದಾಖಲಾಗಿದೆ.

ಇದನ್ನೂ ಓದಿ: ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಇದನ್ನೂ ಓದಿ: ಸಿಡಿ ಪ್ರಕರಣಕ್ಕೆ ರೋಚಕ ತಿರುವು; ಸಿಡಿ ಬಿಡುಗಡೆಗೂ ಮುನ್ನ ಯುವತಿ ಜತೆ ಹಣಕಾಸು ವ್ಯವಹಾರ ನಡೆಸಿದ್ದ ಮಾಜಿ ಸಚಿವ ಡಿ.ಸುಧಾಕರ್​?

Published On - 6:35 pm, Sun, 4 April 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ