ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • TV9 Web Team
  • Published On - 15:56 PM, 16 Mar 2021
ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು
ರಮೇಶ್​ ಜಾರಕಿಹೊಳಿ

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್​ ಜಾರಕಿಹೊಳಿಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಇತ್ತ ಸಿಡಿಯ ಬಗ್ಗೆ ಎಸ್​ಐಟಿ ತನಿಖೆ ಆರಂಭಿಸಿದ್ದು ಯುವತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಇನ್ನೊಂದೆಡೆ, ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಅವರು ಈ ಕೂಡಲೇ ಕನ್ನಡಿಗರ ಬೇಷರತ್ ಕ್ಷಮೆ ಕೇಳಬೇಕು. ಒಂದುವೇಳೆ ರಮೇಶ್​ ಜಾರಕಿಹೊಳಿ ಕ್ಷಮೆಯಾಚಿಸಿದಿದ್ದರೆ ಅವರ ನಿವಾಸದ ಬಳಿ ಮಹಿಳಾ ಕಾರ್ಯಕರ್ತೆಯರು ಧರಣಿ ಕೂರುವುದು ನಿಶ್ಚಿತ ಎಂದು ಇದೇ ವೇಳೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ:
ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು?