ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಇತ್ತ ಸಿಡಿಯ ಬಗ್ಗೆ ಎಸ್ಐಟಿ ತನಿಖೆ ಆರಂಭಿಸಿದ್ದು ಯುವತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಇನ್ನೊಂದೆಡೆ, ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಅವರು ಈ ಕೂಡಲೇ ಕನ್ನಡಿಗರ ಬೇಷರತ್ ಕ್ಷಮೆ ಕೇಳಬೇಕು. ಒಂದುವೇಳೆ ರಮೇಶ್ ಜಾರಕಿಹೊಳಿ ಕ್ಷಮೆಯಾಚಿಸಿದಿದ್ದರೆ ಅವರ ನಿವಾಸದ ಬಳಿ ಮಹಿಳಾ ಕಾರ್ಯಕರ್ತೆಯರು ಧರಣಿ ಕೂರುವುದು ನಿಶ್ಚಿತ ಎಂದು ಇದೇ ವೇಳೆಯಲ್ಲಿ ಎಚ್ಚರಿಸಲಾಗಿದೆ.
ಇದನ್ನೂ ಓದಿ:
ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್ ಜಾರಕಿಹೊಳಿ
ಟ್ವೀಟ್ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು?
Published On - 3:56 pm, Tue, 16 March 21