ದಾವಣಗೆರೆ: ಯುವಕನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಕೇಸ್​: ಐವರ ಬಂಧನ

ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದ ಬೆಂಕಿನಗರದ ಮದರಸಾ ಬಳಿ ಖಾಲಿ‌ ಕೊಠಡಿಯಲ್ಲಿ ಯುವಕ ಮೇಲೆ ಹಲ್ಲೆ ಮಾಡಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಪ್ರತಿಕ್ರಿಯಿಸಿದ್ದು, ಹಲ್ಲೆಗೊಳಗಾದ ಯುವಕ ಅಲ್ಲಿದ್ದ ಕೆಲ ಮಹಿಳೆಯರ ಫೋಟೋ, ವಿಡಿಯೋ ಮಾಡಿಟ್ಟುಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ ಎಂದಿದ್ದಾರೆ.

ದಾವಣಗೆರೆ: ಯುವಕನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಕೇಸ್​: ಐವರ ಬಂಧನ
ದಾವಣಗೆರೆಯಲ್ಲಿ ಯುವಕನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಕೇಸ್​: ಐವರ ಬಂಧನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 13, 2024 | 9:56 PM

ದಾವಣಗೆರೆ, ಜೂನ್​ 13: ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿ‌ಕೊಠಡಿಯಲ್ಲಿ ಏಳು ಜನರು ಸೇರಿ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿದಂತೆ ಸದ್ಯ ಐವರನ್ನು ಪೊಲೀಸರು ಬಂಧಿಸಿದ್ದಾರೆ (arrest). ಉಳಿದವರ ಪತ್ತೆಗೆ ತಂಡ ರಚನೆ ಮಾಡಲಾಗಿದೆ. ಮಹಮ್ಮದ್ (24) ಎಂಬಾತನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದು, ನಂತರ ತಲೆ ಬೋಳಿಸಲಾಗಿತ್ತು. ಈ ಘಟನೆಯಲ್ಲಿ ಯುವಕನಿಗೆ ಹೊಡೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಕುರಿತಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಪ್ರತಿಕ್ರಿಯಿಸಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬೆಂಕಿ ನಗರದ ಮದರಸಾ ಪಕ್ಕದ ಖಾಲಿ ರೂಮ್​​ನಲ್ಲಿ ಹಾಕಿ ಹಲ್ಲೆ ಮಾಡಿದ ಪ್ರಕರಣ ಇದೇ ಏಳರಂದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ: ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ, ವಿಡಿಯೋ ವೈರಲ್

ಹಲ್ಲೆಗೊಳಗಾದ ಯುವಕ ಅಲ್ಲಿದ್ದ ಕೆಲ ಮಹಿಳೆಯರ ಫೋಟೋ, ವಿಡಿಯೋ ಮಾಡಿಟ್ಟುಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ. ಸದ್ಯ ಹಲ್ಲೆಗೊಳಗಾದ ಯುವಕನ ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಸಂತ್ರಸ್ಥ ಮಹಿಳೆಯರು ಅಧಿಕೃತ ದೂರು ಕೊಟ್ಟರೆ ಯುವಕನ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಆದರೆ ಈ ವರೆಗೆ ಮಹಿಳೆಯರು ದೂರು ದಾಖಲಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ರಾಯಚೂರಿನ ತೋಟಗಾರಿಕೆ ಇಲಾಖೆ ಕಚೇರಿಗೆ ಲೋಕಾಯುಕ್ತ ದಾಳಿ: ಪರಿಶೀಲನೆ

ರಾಯಚೂರು: ನಗರದ ತೋಟಗಾರಿಕೆ ಇಲಾಖೆ ಕಚೇರಿಗೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗಿದೆ. ಮುಂಗಾರು ಆರಂಭ ಹಿನ್ನೆಲೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆ, ದಾಸ್ತಾನು ಪರಿಶೀಲನೆ ಮಾಡಲಾಗಿದೆ.

ಇದನ್ನೂ ಓದಿ: ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಸುತ್ತಾಟ ಆರೋಪ: ಸ್ಥಳೀಯರ ಕೈಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು

ರಾಯಚೂರು ಲೋಕಾಯುಕ್ತ ಎಸ್‌ಪಿ ಶಶಿಧರ್ ಎಂ.ಎನ್ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, 15 ಜನ ಅಧಿಕಾರಿಗಳ ತಂಡದಿಂದ ದಾಖಲೆಗಳ ತಪಾಸಣೆ ಮಾಡಲಾಗಿದೆ. ಅರ್ಹ ಫಲಾನುಭವಿಗಳಿಗೆ ಇಲಾಖೆ ಸೌಲಭ್ಯ ತಲುಪುತ್ತಿದ್ದಾವಾ, ಇಲ್ಲವಾ? ಇಲಾಖೆ ಅಧಿಕಾರಿಗಳ ಕಾರ್ಯವೈಖರಿ, ದಾಖಲೆಗಳ ನಿರ್ವಹಣೆ, ನ್ಯೂನತೆಗಳು, ಸಕಾಲದಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುತ್ತಿರುವ ಬಗ್ಗೆ ತಪಾಸಣೆ ಮಾಡಲಾಗಿದೆ. ಪರಿಶೀಲನೆ ಬಳಿಕ ರಾಜ್ಯ ಲೋಕಾಯುಕ್ತರಿಗೆ ಅಧಿಕಾರಿಗಳು ಅಂತಿಮ ವರದಿ ಸಲ್ಲಿಸಲಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:56 pm, Thu, 13 June 24

ತಾಜಾ ಸುದ್ದಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ