AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸಗೊಳಿಸಿದ ಕೇಸ್​, 33 ಜನರ ಬಂಧನ: ಎಸ್​ಪಿ

ನಿನ್ನೆ ನಡೆದ ಇಂಡಿಗನತ್ತ ಗಲಭೆ ಹಾಗೂ ಇವಿಎಂ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್​​ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಈವರೆಗೂ 33 ಮಂದಿಯನ್ನು ಬಂಧಿಸಿದ್ದೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಹೇಳಿದ್ದಾರೆ. ಸೋಮವಾರ ಮರು ಮತದಾನ ನಡೆಯಲಿದೆ.

ಚಾಮರಾಜನಗರ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸಗೊಳಿಸಿದ ಕೇಸ್​, 33 ಜನರ ಬಂಧನ: ಎಸ್​ಪಿ
ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Apr 27, 2024 | 10:44 PM

ಚಾಮರಾಜನಗರ, ಏಪ್ರಿಲ್​ 27: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆ ಮಹದೇಶ್ವರ ಬೆಟ್ಟ (Male Mahadeshwara Hills) ಪೊಲೀಸ್​​ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಈವರೆಗೂ 33 ಮಂದಿಯನ್ನು ಬಂಧಿಸಿದ್ದೇವೆ (arrested) ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂಡಿಗನತ್ತ ಗ್ರಾಮದಲ್ಲಿ ಗ್ರಾಮದಲ್ಲಿ ಒಂದು KSRP ತುಕಡಿ, ಡಿಎಆರ್ ತುಕಡಿ ನಿಯೋಜನೆ ಮಾಡುವ ಮೂಲಕ ಪೊಲೀಸ್ ಬಿಗಿ ಬಂದೋಬಸ್ತ್​ ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಭೆ ನಡೆಸಿದ ಚುನಾವಣಾ ಅಧಿಕಾರಿಗಳು ಸೋಮವಾರ ಮರು ಮತದಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ರೊಚ್ಚಿಗೆದ್ದ ಹಾಡಿಯ ಮಂದಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಕಲ್ಲು ಬೀಸಿ ಇವಿಎಂ ವಿವಿಪ್ಯಾಟ್​​ನ ಧ್ವಂಸ ಮಾಡಿ ಹಾಕಿದ್ದರು. ಈ ಹಿನ್ನಲೆ ಸೋಮವಾರ ಇಂಡಿಗನತ್ತ 146 ಮತಗಟ್ಟೆಯಲ್ಲಿ ಮರು ಮತದಾನಕ್ಕೆ ಸಿದ್ದತೆ ನಡೆಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ

ಇನ್ನು ನಿನ್ನೆ ಗಲಾಟೆ ಗದ್ದಲವಾಗಿ ಇವಿಎಂ ಮಷಿನ್ ಧ್ವಂಸ ಮಾಡಿದ ಬೆನ್ನಲ್ಲೆ ಕೇಂದ್ರ ಚುನಾವಣಾ ಆಯೋಗಕ್ಕೆ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿ ವರದಿ ನೀಡಿತ್ತು. ವರದಿ ಹಾಗೂ ಎಫ್​ಐಆರ್​ ಕಾಪಿ ಸ್ವೀಕರಿಸಿದ ಕೇಂದ್ರ ಚುನಾವಣಾ ಆಯೋಗ ಸೋಮವಾರ ಮರು ಮತದಾನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನಲೆ ಪೊಲೀಸ್ ಇಲಾಖೆ ಸೂಕ್ತ ಭದ್ರತೆಯೊಂದಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಜತೆ ಮರು ಮತದಾನಕ್ಕೆ ಸಿದ್ದತೆ ನಡೆಸಿದೆ.

ಮತದಾನದ ವೇಳೆ ನಡೆದಿದ್ದೇನು?

ಮೂಲ ಸೌಕರ್ಯವನ್ನು ಕಲ್ಪಿಸದ ವಿಚಾರವಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದರು. ಯಾರೊಬ್ಬರೂ ಮತದಾನಕ್ಕೆ ಬಾರದೆ ಇರುವುದರಿಂದ ಶೂನ್ಯ ಮತದಾನವಾಗುವ ಆತಂಕ ಅಧಿಕಾರಿಗಳದ್ದಾಗಿತ್ತು. ಹೀಗಾಗಿ ಅಧಿಕಾರಿಗಳು ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಮುಂದಾಗಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಆಗ್ರಹಿಸಿದ್ದರು.

ಇದನ್ನೂ ಓದಿ: Chamarajanagar: ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ: ಅಷ್ಟಕ್ಕೂ ಆಗಿದ್ದೇನು? ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿ

ಈ ವೇಳೆ, ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮೇಜು, ಕುರ್ಚಿ, ಇವಿಎಂ ಧ್ವಂಸ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!