ಇನ್ಮುಂದೆ ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕರಿಸುವಂತಿಲ್ಲ

ಇನ್ಮುಂದೆ ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕರಿಸುವಂತಿಲ್ಲ
ಸಾಂಕೇತಿಕ ಚಿತ್ರ

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿದೆ.

TV9kannada Web Team

| Edited By: guruganesh bhat

Jun 05, 2021 | 9:49 PM

ಬೆಂಗಳೂರು: ಉಪ ನೋಂದಣಿ ಕಚೇರಿಯಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿದೆ. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಕರ್ನಾಟಕದಲ್ಲಿ ಇಂದು 13,800 ಜನರಲ್ಲಿ ಕೊವಿಡ್ ಸೋಂಕು ಪತ್ತೆ; ಪಾಸಿಟಿವಿಟಿ ಪ್ರಮಾಣ ಶೇ.10ಕ್ಕೆ ಇಳಿಕೆ ಕರ್ನಾಟಕದಲ್ಲಿ ಇಂದು ಒಂದೇ ದಿನ 13,800 ಜನರಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಶೇ.10ಕ್ಕೆ ಕೊರೊನಾ ಪಾಸಿಟಿವಿಟಿ ದರ ಇಳಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಏಪ್ರಿಲ್‌ ಬಳಿಕ ಮೊದಲ ಬಾರಿಗೆ ಕರ್ನಾಟಕದ ಕೊವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 1,42, 291 ಕೊವಿಡ್ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, 13,800 ಜನರಿಗೆ ಕೊರೊನಾ ದೃಢಪಟ್ಟಿದೆ. ಅಲ್ಲದೇ ಇದೇ ಅವಧಿಯಲ್ಲಿ 25,346 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದವರ ಪೈಕಿ 8,852ಜನರು ಬೆಂಗಳೂರಿನವರೇ ಆಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಇಂದಿನ ಕೊವಿಡ್ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ರಾಜ್ಯದಲ್ಲಿ ಈವರೆಗಿನ ಕೊವಿಡ್ ಸೋಂಕಿತರ ಸಂಖ್ಯೆ 26,83,314ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 365 ಜನರ ಸಾವನ್ನಪ್ಪಿದ್ದು, ಇದುವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 31,260 ಕ್ಕೆ ಏರಿಕೆಯಾಗಿದೆ.  ಸೋಂಕಿತರ ಪೈಕಿ 23,83,758 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,  2,68,275 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

ಕೊವಿಡ್ 2ನೇ ಅಲೆಯಲ್ಲಿ ದೇಶದಲ್ಲಿ 646, ಕರ್ನಾಟಕದಲ್ಲಿ 9 ವೈದ್ಯರು ನಿಧನ

(Cash and DD are not acceptable in sub registration offices orders Karnataka Govt)

Follow us on

Related Stories

Most Read Stories

Click on your DTH Provider to Add TV9 Kannada