AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜಾತಿ ಗಣತಿಗೆ ಕೊನೆಗೂ ಮುಹೂರ್ತ ಫಿಕ್ಸ್; ಗೈರಾದವರ ಮೇಲೆ ಕಠಿಣ ಕ್ರಮ

ಬೆಂಗಳೂರಿನಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಕ್ಕೆ ಕೊನೆಗೂ ಮುನ್ಸೂಚನೆ ಸಿಕ್ಕಿದೆ. ಸಿಬ್ಬಂದಿ ಕೊರತೆಯಿಂದ ಈ ಸಮೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ದಸರಾ ನಂತರ ಜಿಬಿಎ ನೇತೃತ್ವದಲ್ಲಿ ಗಣತಿ ಕಾರ್ಯರೂಪಕ್ಕೆ ಬರಲಿದೆ. ಗಣತಿಯಲ್ಲಿ ಒಟ್ಟೂ 17 ಸಾವಿರ ಸಮೀಕ್ಷಕರು ಪಾಲ್ಗೊಳ್ಳಲಿದ್ದು, ವಿನಾಕಾರಣ ಗೈರು ಹಾಜರಾಗುವ ಸಮೀಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಜಾತಿ ಗಣತಿಗೆ ಕೊನೆಗೂ ಮುಹೂರ್ತ ಫಿಕ್ಸ್; ಗೈರಾದವರ ಮೇಲೆ ಕಠಿಣ ಕ್ರಮ
ಬೆಂಗಳೂರಿನಲ್ಲಿ ಜಾತಿ ಸಮೀಕ್ಷೆ ಆರಂಭವಾಘುವ ಕುರಿತು ಮಾಹಿತಿ ನೀಡಿದ ಜಿಬಿಎ ಆಯುಕ್ತ
ಶಾಂತಮೂರ್ತಿ
| Updated By: ಭಾವನಾ ಹೆಗಡೆ|

Updated on: Oct 01, 2025 | 9:15 AM

Share

ಬೆಂಗಳೂರು, ಅಕ್ಟೋಬರ್ 1:  ರಾಜಧಾನಿ ಬೆಂಗಳೂರಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ದಸರಾ ಮುಗಿಯುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಜಿಬಿಎ (GBA ಸಮೀಕ್ಷೆಗೆ ಸಜ್ಜಾಗುತ್ತಿದ್ದು, ವಿವಿಧ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಿರುವ ಸರ್ಕಾರ, ಸಮೀಕ್ಷೆಗೆ ಹಾಜರಾಗದವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಜಿಬಿಎಗೆ ನೀಡಿದೆ.

ಬೆಂಗಳೂರಿನಲ್ಲಿ ಮುಂದೂಡಲಾಗಿದ್ದ ಸಮೀಕ್ಷೆಗೀಗ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದೆ. ಇತ್ತ ಸಿಬ್ಬಂದಿ ಕೊರತೆಯಿಂದ ರಾಜಧಾನಿಯಲ್ಲಿ ಮುಂದೂಡಲಾಗಿದ್ದ ಸಮೀಕ್ಷೆ ಆರಂಭಕ್ಕೆ ಜಿಬಿಎ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದೆ. ಈಗಾಗಲೇ ವಿವಿಧ ಇಲಾಖೆಗಳ ನೌಕರರನ್ನು ಸಮೀಕ್ಷಕರಾಗಿ ನೇಮಿಸಿರುವ ಸರ್ಕಾರ, ಜಿಬಿಎ ಮೂಲಕ ತರಬೇತಿ ನೀಡುತ್ತಿದೆ. ದಸರಾ ಮುಗಿಯುತ್ತಿದ್ದಂತೆ ಬೆಂಗಳೂರಲ್ಲಿ ಸಮೀಕ್ಷೆ ಆರಂಭಿಸಲು ಜಿಬಿಎ ಸಜ್ಜಾಗುತ್ತಿದೆ. ಪ್ರತಿವಾರ್ಡ್​ಗೆ  ತಲಾ 70 ರಿಂದ 80 ಸಮೀಕ್ಷಕರನ್ನು ನಿಯೋಜಿಸಿರುವ ಜಿಬಿಎ ಸಮೀಕ್ಷೆ ಆರಂಭಕ್ಕೆ ತಯಾರಿ ನಡೆಸಿದೆ.

ಇದನ್ನೂ ಓದಿ ನಾಳೆಯಿಂದ ಜಾತಿಗಣತಿ: ಸಮೀಕ್ಷೆ ವೇಳೆ ನೀವು ಈ 60 ಪ್ರಶ್ನೆಗಳಿಗೆ ಉತ್ತರ ನೀಡಲು ಸಜ್ಜಾಗಿರಿ

ಸುಖಾಸುಮ್ಮನೆ ಗೈರಾಗುವವರ ಮೇಲೆ ಜಿಬಿಎ ಕ್ರಮ

ಈ ಸಮೀಕ್ಷೆಯಲ್ಲಿ 17 ಸಾವಿರ ಸಿಬ್ಬಂದಿ ಭಾಗಿಯಾಗಲಿದ್ದು, ಒಬ್ಬೊಬ್ಬ ಸಮೀಕ್ಷಕನಿಗೂ ತಲಾ 750 ಮನೆ ಸಮೀಕ್ಷೆ ಮಾಡುವ ಜವಾಬ್ದಾರಿ ವಹಿಸಲು ಜಿಬಿಎ ಸಜ್ಜಾಗಿದೆ. ಸದ್ಯ 10 ರಿಂದ 15 ದಿನಗಳ ಒಳಗೆ ಸಮೀಕ್ಷೆ ಮುಗಿಸಲು ಜಿಬಿಎ ಚಿಂತನೆ ಮಾಡಿದೆ. ಅಂದುಕೊಂಡ ಸಮಯದೊಳಗೆ ಸಮೀಕ್ಷೆ ಮುಗಿಯದಿದ್ದರೆ ಸಮೀಕ್ಷೆಯನ್ನು ಮತ್ತಷ್ಟು ಮುಂದುವರಿಸುವುದಾಗಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆ, ವಿಶೇಷಚೇತನ ಸಮೀಕ್ಷಕರು ಸೂಕ್ತ ದಾಖಲೆ ನೀಡಿದರೆ ಸಮೀಕ್ಷೆಯಿಂದ ವಿನಾಯಿತಿ ಪಡೆಯಬಹುದು ಎಂದು ಆಯುಕ್ತರು ಹೇಳಿದ್ದಾರೆ. ಸುಖಾಸುಮ್ಮನೆ ಸಮೀಕ್ಷೆಗೆ ಗೈರಾದರೆ ಅವರ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಇಷ್ಟು ದಿನಗಳ ವಿಳಂಬದ ಬಳಿಕ ಇದೀಗ ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಆರಂಭಿಸಲು ತಯಾರಿ ನಡೆಸುತ್ತಿದೆ. ಇನ್ನು ಚುನಾವಣಾ ಆಯೋಗದ ಕೆಲಸ ಕಾರ್ಯಕ್ಕೂ ಸಿಬ್ಬಂದಿ ಬೇಕಾಗಿದ್ದಾರೆ. ಹೀಗಾಗಿ ಸಮೀಕ್ಷೆ ಕಾರ್ಯಕ್ಕೆ ಮತ್ತೆಸಿಬ್ಬಂದಿ ಕೊರತೆ ಎದುರಾಗುವ  ಸಾಧ್ಯತೆ ಕೂಡ ಇದ್ದು, ಸದ್ಯ ರಾಜಧಾನಿಯಲ್ಲಿ ಅಂದುಕೊಂಡ ಸಮಯದೊಳಗೆ ಸಮೀಕ್ಷೆ ಪೂರ್ಣಗೊಳ್ಳುತ್ತದೆಯೇ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ