Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅತಿ ಹಿಂದುಳಿದ ವರ್ಗಗಳ ವೇದಿಕೆಯಿಂದ ಎಚ್ಚರಿಕೆ

ಕರ್ನಾಟಕ ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ವಿಚಾರವಾಗಿ ಆಡಳಿತ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ ವರದಿ ಬಿಡುಗಡೆಗೆ ಒಕ್ಕಲಿಗ-ಲಿಂಗಾಯಿತ ಸಮುದಾಯದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಇವರ ಒತ್ತಡಕ್ಕೆ ಮಣಿದು ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ.

ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅತಿ ಹಿಂದುಳಿದ ವರ್ಗಗಳ ವೇದಿಕೆಯಿಂದ ಎಚ್ಚರಿಕೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿಯಾದ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ
Follow us
Pramod Shastri G
| Updated By: Rakesh Nayak Manchi

Updated on: Oct 14, 2023 | 8:50 AM

ಬೆಂಗಳೂರು, ಅ.14: ಕರ್ನಾಟಕ ರಾಜ್ಯದಲ್ಲಿ ಜಾತಿ ಜನಗಣತಿ ವರದಿ (Caste Census Report) ಬಿಡುಗಡೆ ವಿಚಾರವಾಗಿ ಆಡಳಿತ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಒಂದೆಡೆ, ವರದಿ ಬಿಡುಗಡೆಗೆ ಒಕ್ಕಲಿಗ-ಲಿಂಗಾಯಿತ ಸಮುದಾಯದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರೆ, ಇನ್ನೊಂದೆಡೆ ಒತ್ತಡಕ್ಕೆ ಮಣಿದು ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ. ಇದು ರಾಜ್ಯ ಸರ್ಕಾರವು ಒತ್ತಡಕ್ಕೆ ಸಿಲುಕಿಸಿದೆ.

ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಂತೆ ಒಕ್ಕಲಿಗ-ಲಿಂಗಾಯಿತ ವಿರೋಧದ ನಡುವೆ ವರದಿ ಬಿಡುಗಡೆಗೆ ಅತಿ ಹಿಂದುಳಿದ ವರ್ಗಗಳ ಸಂಘ ಪಟ್ಟು ಹಿಡಿದಿದೆ. ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಗ್ಡೆ ಅವರನ್ನು ಭೇಟಿಯಾಗಿದ್ದು, 72 ಜಾತಿಗಳನ್ನ ಹಿಂದುಳಿದವರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಹಿರಂಗಕ್ಕೂ ಮುನ್ನ ಸಿಡಿಯುತ್ತಿದೆ ಪರ-ವಿರೋಧದ ಕಿಡಿ!

ಅಲ್ಲದೆ, ಜಾತಿ ಗಣತಿ ವಿರೋಧಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಹಿಂದುಳಿದವರ್ಗ, ವರದಿ ವಿರೋಧಿಸುವುದು ಸಮಂಜಸವಲ್ಲ. ವರದಿ ಅವೈಜ್ಞಾನಿಕ ಎಂಬುದಕ್ಕೆ ಯಾವುದೇ ಆಧಾರವೇ ಇಲ್ಲ. ವರದಿ ಯಾರು ನೋಡದೇ ಸರಿ ಇಲ್ಲ ಅನ್ನೋದು ಹೇಗೇ? ಎಂದು ಪ್ರಶ್ನಿಸಿದೆ.

ಸರ್ಕಾರ ವರದಿ ಬಿಡುಗಡೆ ಮಾಡಿದ ಬಳಿಕ ಚರ್ಚೆಗೆ ಬಿಡಲಿ. ಸಾಧಕ-ಬಾಧಕಗಳ ಚರ್ಚೆಯಾದರೆ ಸಮಾಜಕ್ಕೂ ಸ್ಪಷ್ಟತೆ ಸಿಗಲಿದೆ. ಆಕ್ಷೇಪವಿದ್ದರೆ ಸರ್ಕಾರಕ್ಕೆ ವಿವರವಾಗಿ ಸಲ್ಲಿಸಲಿ. ಜಾತಿ ಗಣತಿ ಬಗ್ಗೆ ಆಕ್ಷೇಪಗಳಿದ್ದರೆ ಬಿಡುಗಡೆ ಬಳಿಕ ನ್ಯಾಯಾಲಯದಲ್ಲೂ ಪ್ರಶ್ನಿಸಲಿ ಎಂದು ವೇದಿಕೆ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಒಂದು ವೇಳೆ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ವೇಣುಗೋಪಾಲ್, ಈಗ ನೀಡಿರುವ ಮೀಸಲಾತಿಯೇ ಸಂಪೂರ್ಣ ಅವೈಜ್ಞಾನಿಕವಾಗಿದೆ. ಸಮಾಜಗಳ ಯಾವ ಅಂಕಿಅಂಶಗಳಿಲ್ಲದೇ ಮನಬಂದಂತೆ ಮೀಸಲಾತಿ ನೀಡಲಾಗಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!