AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 31ರವರೆಗೆ ಜಾತಿ ಗಣತಿ ಅವಧಿ ವಿಸ್ತರಣೆ: ಸಮೀಕ್ಷೆ ಕಾರ್ಯದಿಂದ ಶಿಕ್ಷಕರ ಕೈಬಿಟ್ಟ ಸರ್ಕಾರ

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಮೂರು ಜಿಲ್ಲೆಗಳಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರ ಜೊತೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೂ ಸರ್ಕಾರ ಗುಡ್​ ನ್ಯೂಸ್​ ಕೊಟ್ಟಿದೆ.

ಅ. 31ರವರೆಗೆ ಜಾತಿ ಗಣತಿ ಅವಧಿ ವಿಸ್ತರಣೆ: ಸಮೀಕ್ಷೆ ಕಾರ್ಯದಿಂದ ಶಿಕ್ಷಕರ ಕೈಬಿಟ್ಟ ಸರ್ಕಾರ
ಜಾತಿಗಣತಿ ಅವಧಿ ವಿಸ್ತರಣೆ
ಪ್ರಸನ್ನ ಗಾಂವ್ಕರ್​
| Updated By: ಪ್ರಸನ್ನ ಹೆಗಡೆ|

Updated on:Oct 19, 2025 | 6:54 PM

Share

ಬೆಂಗಳೂರು, ಅಕ್ಟೋಬರ್​ 19: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಮೂರು ಜಿಲ್ಲೆಗಳಲ್ಲಿ ಗಣತಿ ಕುಂಠಿತವಾಗಿದ್ದು, ಈ ಹಿನ್ನಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ ಒಳಗೆ ಮುಕ್ತಾಯಗೊಳಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದ ಹಿನ್ನಲೆ ಅಕ್ಟೋಬರ್​ 18ರ ವರೆಗೆ ಜಾತಿ ಸಮೀಕ್ಷೆ ಕಾರ್ಯ ವಿಸ್ತರಣೆಗೊಂಡಿತ್ತು.

ಬೆಂಗಳೂರನ್ನು ಹೊರತುಪಡಿಸಿ ಇಲ್ಲಿಯವರೆಗೆ ಬಹುತೇಕ ಜಿಲ್ಲೆಗಳಲ್ಲಿ ಶೇ.95ರಷ್ಟು ಸಮೀಕ್ಷೆ ಕಾರ್ಯ ಮುಗಿದಿದೆ. ರಾಮನಗರ, ಬೀದರ್, ಧಾರವಾಡದಲ್ಲಿ ಇದರ ಪ್ರಮಾಣ ಶೇ. 90ಕ್ಕಿಂತ ಕಡಿಮೆ ಆಗಿದೆ. ಬೆಂಗಳೂರಲ್ಲಿ ಗಣತಿ ಕಾರ್ಯ ಅತ್ಯಂತ ನಿಧಾನವಾಗಿ ನಡೆಯುತ್ತಿದ್ದು ಈವರೆಗೆ ಕೇವಲ ಶೇ.45ರಷ್ಟು ಮನೆಗಳ ಸಮೀಕ್ಷೆ ಮಾತ್ರ ಮುಗಿದಿದೆ. ಈ ನಡುವೆ ದೀಪಾವಳಿ ಹಬ್ಬದ ರಜೆಯೂ ಬಂದಿರುವುದರಿಂದ ಸಮೀಕ್ಷೆ ವಿಸ್ತರಣೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್​ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂಬ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸಿಎಂ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ನಿಗದಿತ ಗುರಿ ತಲುಪುವಲ್ಲಿ ವಿಫಲ: ರಾಜ್ಯದಲ್ಲಿ ಮತ್ತೆ ವಿಸ್ತರಣೆಯಾಗುತ್ತಾ ಜಾತಿಗಣತಿ ಅವಧಿ?

ಸಮೀಕ್ಷೆಯಿಂದ ಶಿಕ್ಷಕರಿಗೆ ಬಿಡುಗಡೆ

ಸಮೀಕ್ಷೆ ಅವಧಿ ವಿಸ್ತರಣೆ ಬೆನ್ನಲ್ಲೇ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಗಣತಿ ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆ ಸಿಬ್ಬಂದಿ ಬಳಸಿಕೊಂಡು ಬಾಕಿ ಉಳಿದಿರುವ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ನಿಗದಿತ ಅವಧಿಯೊಳಗೆ ಜಾತಿ ಗಣತಿ ಕಾರ್ಯ ಮುಗಿಯದ ಕಾರಣ ಈ ಹಿಂದೆ ಸರ್ಕಾರ ಅವಧಿಯನ್ನ ವಿಸ್ತರಿಸಿತ್ತು. ಆದರೆ ಆಗ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಕೈ ಬಿಟ್ಟಿರಲಿಲ್ಲ. ಬದಲಾಗಿ ಶಾಲೆಗಳ ರಜಾ ಅವಧಿಯನ್ನೇ ವಿಸ್ತರಿಸಿತ್ತು. ಆದರೆ ಈಗ ಶಾಲೆಗಳು ಆರಂಭವಾಗಿರುವ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅ.21-23ರ ವರೆಗೆ ಸಮೀಕ್ಷೆಗೆ ಬ್ರೇಕ್​

ಸಮೀಕ್ಷೆ ಇನ್ನೂ ಅವಕಾಶ ನೀಡಲಾಗುತ್ತಿದ್ದು, ಯಾರು ಭಾಗಹಿಸಲ್ಲವೋ ಅವರು ಭಾಗವಹಿಸಿ. ಎಲ್ಲಾ ಸಮಾಜದವರು ಇರುವ ಅವಕಾಶ ಕಳೆದುಕೊಳ್ಳೋಕೆ ಹೋಗಬೇಡಿ. ಅ.21-23ರ ವರೆಗೆ ದೀಪಾವಳಿ ಹಿನ್ನಲೆ ಸಮೀಕ್ಷೆ ಇರಲ್ಲ. ಬೆಂಗಳೂರು ಸೌತ್, ಬೀದರ್, ಧಾರವಾಡ ಬಿಟ್ಟು ಉಳಿದ ಕಡೆ ಗಣತಿ ಕಾರ್ಯ ಚೆನ್ನಾಗಿ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:52 pm, Sun, 19 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ