ಕಾಂತರಾಜು ವರದಿ ಸ್ವೀಕರಿಸಿ: ಸಿದ್ದರಾಮಯ್ಯಗೆ ಸವಾಲು ಹಾಕಿದ ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲು ಹಾತೊರೆಯುತ್ತಿದೆ. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸ್ವಪಕ್ಷದ ನಾಯಕರಿಂದಲೇ ವಿರೋಧ ವ್ಯಕ್ತವಾಗಿರುವುದು ವರದಿ ಬಿಡುಗಡೆಗೆ ಮುಂದಾದ ಸಿದ್ದರಾಮಯ್ಯಗೆ ತಲೆಬಿಸಿಯಾಗಿದೆ. ಈ ನಡುವೆ, ಕಾಂತರಾಜು ವರದಿ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಕಾಂತರಾಜು ವರದಿ ಸ್ವೀಕರಿಸಿ: ಸಿದ್ದರಾಮಯ್ಯಗೆ ಸವಾಲು ಹಾಕಿದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
Follow us
ಮಂಜುನಾಥ ಕೆಬಿ
| Updated By: Rakesh Nayak Manchi

Updated on: Nov 24, 2023 | 7:41 PM

ಹಾಸನ, ನ.24: ಕಾಂತರಾಜು ಅವರ ವರದಿಯನ್ನು ಕುಮಾರಸ್ವಾಮಿ ಅವರು ಸ್ವೀಕಾರ ಮಾಡಲಿಲ್ಲ ಎನ್ನುವ ಸಿದ್ದರಾಮಯ್ಯ (Siddaramaiah) ಈಗ ಮುಖ್ಯಮಂತ್ರಿ. ಈಗ ಅವರೇ ಆ ವರದಿಯನ್ನು ಸ್ವೀಕರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಸವಾಲು ಹಾಕಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, 2018ರಲ್ಲಿ ಕಾಂತರಾಜು ವರದಿ ಸ್ವೀಕಾರ ಮಾಡಲು ಕುಮಾರಸ್ವಾಮಿ ಒಪ್ಪಿಲ್ಲ ಎಂದು ನೀವು ಆರೋಪ, ಆಪಾದನೆ ಮಾಡುತ್ತಿದ್ದೀರಿ. ಈಗ ನಿಮ್ಮ ಸರಕಾರ ಬಂದು 6 ತಿಂಗಳಾಗಿದೆ. ನೀವು ಯಾಕೆ ವರದಿ ಸ್ವೀಕಾರ ಮಾಡಿಲ್ಲ? ಎಂದು ಸಿದ್ದರಾಮಯ್ಯ ಅವರನ್ನೇ ಪ್ರಶ್ನಿಸಿದರು.

ಜನರಿಗೆ ಒಳ್ಳೆಯದು ಮಾಡಬೇಕು ಎನ್ನುವುದಕ್ಕಿಂತ ತಮ್ಮ ಶಕ್ತಿ ಹೆಚ್ಚಿಸಿಕೊಳ್ಳಬೇಕು, ಸಮಾಜದಲ್ಲಿ ಸಂಘರ್ಷ ಸೃಷ್ಟಿ ಮಾಡಲು ವೇದಿಕೆ ಮಾಡಲು ಹೊರಟಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂದು ಹಾದಿ ಬೀದಿಯಲ್ಲಿ ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಗುರುವಾರದ ಕ್ಯಾಬಿನೆಟ್​ನಲ್ಲಿ ಮಾಡಿದ ತೀರ್ಮಾನಕ್ಕೆ ಇದೇ ಅರ್ಥವೇ ಎಂದು ಸಿದ್ದರಾಮಯ್ಯರನ್ನು ಕುಮಾರಸ್ವಾಮಿ ಪ್ರಶ್ನಿಸಿದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್: ಸಿದ್ದರಾಮಯ್ಯ ಸಂಪುಟ ಡಿಕೆಶಿ ಪಾದದಡಿಯಲ್ಲಿದೆ ಎಂದ ಕುಮಾರಸ್ವಾಮಿ

ಕಾಂತರಾಜು ವರದಿಯ ಮೂಲ ಪ್ರತಿ ಕಳ್ಳತನವಾಗಿರುವುದು ಗೊತ್ತಿಲ್ಲ ಎಂದು ಗೃಹ ಸಚಿವರು ಹೇಳುತ್ತಿದ್ದಾರೆ. ಅವರಲ್ಲೇ ದ್ವಂದ್ವವಿದೆ. ಜಾತಿಗಣತಿಯನ್ನು ಮನೆಗಳಿಗೆ ಹೋಗಿ ಮಾಡಿಲ್ಲ, ವಿದ್ಯಾರ್ಥಿಗಳಿಂದ ಮಾಡಿಸಿದ್ದಾರೆ ಎಂಬ ಆರೋಪವಿದೆ. ಕಾಂತರಾಜು ವರದಿ ಸಿದ್ಧವಾಗಿ 9 ವರ್ಷಗಳಾಗಿವೆ. ಇಷ್ಟು ವರ್ಷಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಅದನ್ನು ಆಧಾರವಾಗಿ ಇಟ್ಟುಕೊಂಡು ಯಾರಿಗೆ ನ್ಯಾಯ ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.

ತಮ್ಮ ಹೆಮ್ಮೆಯ ನಾಯಕ ರಾಹುಲ್ ಗಾಂಧಿಯವರ ಅಪೇಕ್ಷೆಯಂತೆ ಅವರನ್ನು ತೃಪ್ತಿಪಡಿಸಲು ಜಾತಿ ಗಣತಿ ವರದಿ ಸ್ವೀಕಾರ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದರೆ, ಈ ವರದಿಯನ್ನು ಯಾವ ರೀತಿ ಕಾರ್ಯರೂಪಕ್ಕೆ ತರುತ್ತಾರೆ ಎಂದು ಕಾದು ನೋಡೊಣ ಎಂದರು‌.

ಪರಮಪೂಜ್ಯ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ನಮ್ಮ ಸಮುದಾಯದ ಶಾಸಕರು, ಸಂಸದರು, ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಕೊಡಲಾಗಿರುವ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಎಲ್ಲರೂ ಕೂಡ ಸಹಿ ಹಾಕಿದ್ದಾರೆ. ಹಿಂದುಳಿದ ಆಯೋಗದ ಈಗಿನ ಅಧ್ಯಕ್ಷರು ಫೆಬ್ರವರಿಗೆ ವರದಿ ಕೊಡುವುದಾಗಿ ಹೇಳಿದ್ದಾರೆ. ಮುಂದೆ ಏನಾಗುತ್ತದೋ ಕಾದು ನೋಡೋಣ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?