ಜಾತಿ ಗಣತಿಯ ವರದಿ ಕಾಣೆ, ಜಯಪ್ರಕಾಶ್ ಹೆಗ್ಡೆಯಿಂದ ರಾಜ್ಯ ಸರ್ಕಾರಕ್ಕೆ ಪತ್ರ; ತಡವಾಗಿ ಬೆಳಕಿಗೆ
ಜಾತಿ ಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಕಾಣೆಯಾಗಿದೆ. ಸೀಲ್ಡ್ ಬಾಕ್ಸ್ನಲ್ಲಿದ್ದ ಮೂಲ ಪ್ರತಿ ಅಥವಾ ಹಸ್ತಪ್ರತಿ ಲಭ್ಯವಿಲ್ಲವೆಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ ಪತ್ರ ಬರೆದಿದ್ದಾರೆ.
ಬೆಂಗಳೂರು ನ.22: ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿ (Caste Census Report) ಅನುಷ್ಠಾನ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಜಾತಿ ಗಣತಿ ವರದಿ ಜಾರಿಗೆ ಒಕ್ಕಲಿಗ ಮತ್ತು ಲಿಂಗಾಯತ ಸಮಾಜದ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆಯೇ ಜಾತಿ ಗಣತಿ ವರದಿ ಮತ್ತೊಂದು ವಿವಾದಕ್ಕೆ ಸಿಲುಕುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಹೌದು ಜಾತಿ ಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಕಾಣೆಯಾಗಿದೆ. ಸೀಲ್ಡ್ ಬಾಕ್ಸ್ನಲ್ಲಿದ್ದ ಮೂಲ ಪ್ರತಿ ಅಥವಾ ಹಸ್ತಪ್ರತಿ ಲಭ್ಯವಿಲ್ಲವೆಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕರಕ್ಕೆ (Karnataka Government) 2021ರಲ್ಲಿ ಪತ್ರ ಬರೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಜಯಪ್ರಕಾಶ್ ಹೆಗ್ಡೆ ಪತ್ರದಲ್ಲಿ ಏನಿತ್ತು
“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 (ಜಾತಿ ಗಣತಿ ವರದಿ)ಯನ್ನು 2021ರ ಅಗಸ್ಟ್ 26 ರಂದು ಹಿಂದುಳಿದ ವರ್ಗಗಳ ಆಯೋಗ ಕಚೇರಿಯಲ್ಲಿ ಇರಿಸಲಾಗಿತ್ತು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳು ಹಾಗೂ ಇತರ ವಿವರಗಳನ್ನೊಳಗೊಂಡ ಸೀಲ್ಡ್ ಬಾಕ್ಸ್‌ಗಳನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಸದಸ್ಯ ಕಾರ್ಯದರ್ಶಿಯವರ ಸಮ್ಮುಖದಲ್ಲಿ ಮಹಜರ್ ನಡೆಸಿ 2021ರ ಅಕ್ಟೋಬರ್ 5 ರಂದು ತೆರೆಯಲಾಗಿತ್ತು. ಆದರೆ ಮುದ್ರಿತ ಮುಖ್ಯವರದಿಯಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇರುವುದಿಲ್ಲ.
ಇದರೊಂದಿಗೆ ಇದಕ್ಕೆ ಸಂಬಂಧಿಸಿದ ಮುಖ್ಯ ವರದಿಯ ಮೂಲ ಅಥವಾ ಹಸ್ತಪ್ರತಿ ಸೀಲ್ಡ್ ಬಾಕ್ಸಿನಲ್ಲಿ ಲಭ್ಯವಿಲ್ಲ. ಹೀಗಾಗಿ ಹಸ್ತಪ್ರತಿಯನ್ನು ಕೂಡಲೇ ಆಯೋಗದ ಕಛೇರಿಗೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಗಿತ್ತು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಬಯಸುತ್ತಾ, ಮುಂದೆ ಈ ವಿಷಯಕ್ಕೆ ಸಂಬಂಧಪಟ್ಟಂತೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.
ಇದನ್ನೂ ಓದಿ: ಮನೆಯಲ್ಲೇ ಕುಳಿತು ಜಾತಿ ಗಣತಿ ವರದಿ ಸಿದ್ಧಪಡಿಸಿದ್ದಾರೆ: ತಮ್ಮದೇ ಸರ್ಕಾರದ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ
ಸರ್ಕಾರ ಉದ್ದೇಶಪೂರ್ವಕವಾಗಿ ಮಾಡಿದ ನಾಟಕ: ಯತ್ನಾಳ್
The caste census report submitted to the Chief Minister does not have the original copy showcasing the lack of responsibility or a conspiracy theory
The validity of this document which does not have the signature of Member Secretary is questionable.
Despite being privy of… pic.twitter.com/EemTE2g3XZ
— Basanagouda R Patil (Yatnal) (@BasanagoudaBJP) November 22, 2023
ಜಾತಿ ಗಣತಿ ವರದಿ ಕಾಣೆಯಾಗಿರುವ ಬಗ್ಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಟ್ವೀಟ್ ಮಾಡಿ “ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಜಾತಿ ಗಣತಿ ವರದಿಯ ಮೂಲ ಪ್ರತಿಯೇ ಇಲ್ಲ. ಇದರಲ್ಲಿ ಜವಾಬ್ದಾರಿಯ ಕೊರತೆ ಎದ್ದು ಕಾಣುತ್ತಿದ್ದು, ಇದರಲ್ಲಿ ಪಿತೂರಿ ಅಡಗಿದೆ. ಸದಸ್ಯ ಕಾರ್ಯದರ್ಶಿಯ ಸಹಿ ಇಲ್ಲದ ಈ ದಾಖಲೆಯ ಸಿಂಧುತ್ವವು ಪ್ರಶ್ನಾರ್ಹವಾಗಿದೆ. ಇಂತಹ ಬೆಳವಣಿಗೆಗಳು ಗೌಪ್ಯವಾಗಿದ್ದರೂ ಸರಕಾರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದು ಸರ್ಕಾರ ಉದ್ದೇಶಪೂರ್ವಕವಾಗಿ ಮಾಡಿದ ನಾಟಕ ಎನಿಸುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಯಾವುದೇ ಮಾಹಿತಿ ಮಿಸ್ ಆಗಿಲ್ಲ, ಎಲ್ಲವೂ ಸಾಫ್ಟ್ವೇರ್ನಲ್ಲಿದೆ: ಜಯಪ್ರಕಾಶ್ ಹೆಗ್ಡೆ
ಜಾತಿ ಗಣತಿಯ ಮೂಲ ಪ್ರತಿ ಕಾಣೆಯಾಗಿರುವ ವಿಚಾರವಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ ಯಾವುದೇ ಡೇಟಾ ಮಿಸ್ ಆಗಿಲ್ಲ, ಎಲ್ಲವೂ ಸಾಫ್ಟ್ವೇರ್ನಲ್ಲಿದೆ. ಜಿಲ್ಲಾಧಿಕಾರಿಗಳ ಬಳಿಯೂ ಡೇಟಾ ಇದೆ. ಡೇಟಾ ಆಧರಿಸಿ ಜಾತಿಗಣತಿ ವರದಿಯನ್ನು ಸಿದ್ಧಪಡಿಸುತ್ತೇವೆ. ಇದು ಚರ್ಚೆ ಮಾಡುವ ವಿಷಯವೇ ಅಲ್ಲ, ವಿವಾದವೂ ಅಲ್ಲ. ಹಿಂದಿನ ಅಧ್ಯಕ್ಷರು ನೀಡಿದ್ದ ವರ್ಕ್ ಶೀಟ್ ಬಗ್ಗೆ ಮಾತ್ರ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೆವು ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:10 pm, Wed, 22 November 23