AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಹೈಕಮಾಂಡ್ ಸಭೆ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಈಗ ರಾಜ್ಯ ಕಾಂಗ್ರೆಸ್‌ಗೆ ಯಮಯಾತನೆ ತಂದಿಟ್ಟಿದೆ. 11ಮಂದಿ ಸಾವಿನಿಂದಾಗಿ ರಾಷ್ಟ್ರಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದು, ಇದು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹೋಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಕರೆಯಿಸಿಕೊಂಡು ಘಟನೆಯ ವಿವರ ಕೇಳಿದೆ. ಅಲ್ಲದೇ ರಾಹುಲ್ ಗಾಂಧಿಯವರ ಮಹತ್ವಕಾಂಕ್ಷೆ ಜಾತಿ ಗಣತಿ ವರದಿ ಬಗ್ಗೆಯೂ ಸಹ ಸಭೆಯಲ್ಲಿ ಚರ್ಚೆ ನಡೆದಿದೆ. ಸಭೆಯಲ್ಲಿ ಏನೆಲ್ಲಾ ಆಯ್ತು? ಸಿಎಂ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಹೈಕಮಾಂಡ್ ಸಭೆ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ
Cm Siddaramaiah
Follow us
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on: Jun 10, 2025 | 4:19 PM

ನವದೆಹಲಿ, (ಜೂನ್ 10): ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಲೆ ಸಂಭವಿಸಿದೆ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಜಾತಿ ಜನಗಣತಿ (Karnataka caste census  report) ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರುವ ಕಾರಣ ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇನ್ನು ಜಾತಿ ಜನಗಣತಿ ಮರು ಸರ್ವೇ ಮಾಡುವ ಬಗ್ಗೆಯೂ ಸಹ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಾತನಾಡಿ, ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಇನ್ನು ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 60, 80, 90 ದಿನಗಳ ಕಾಲ‌ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ ಸಿಎಂ-ಡಿಸಿಎಂಗೆ ಹೈಕಮಾಂಡ್ ಖಡಕ್​ ಸೂಚನೆ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿ ಗಣತಿ ವರದಿಯು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಕಾಂಗ್ರೆಸ್​ ಶಾಸಕರು, ಹಿರಿಯ ನಾಯಕರು ಈ ಜಾರಿ ಗಣತಿ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಂದಿನ ಸಭೆಯಲ್ಲಿ ರಾಹುಲ್ ಗಾಂಧಿ ಮಹತ್ವದ ಚರ್ಚೆ ಮಾಡಿದ್ದು, ಮತ್ತೆ ಮರು ಸರ್ವೆ ಮಾಡಲು ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ.

ಇನ್ನು ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.

ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದ್ದು, ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ, ನ್ಯಾ.ಕುನ್ಹಾ ನೇತೃತ್ವದ ತನಿಖೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್‌ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.

11 ಜನರು ಸಾಯಬಾರದಿತ್ತು. ಆ ಘಟನೆಯಿಂದ ನೋವಾಗಿದೆ. ಸಮರ್ಥನೆಗೆ ಕುಂಭಮೇಳದ ಘಟನೆಯನ್ನು ತೆಗೆದುಕೊಳ್ಳುವುದಿಲ್ಲ. ರಾಜ್ಯದಲ್ಲಿ ನಡೆದ ಘಟನೆಯಿಂದ ನೋವಾಗಿದೆ. ತನಿಖೆಯ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮತ್ತೆ ಜಾತಿಗಣತಿ ಸಮೀಕ್ಷೆ ಮಾಡಲು ತೀರ್ಮಾನ ಎಂದ ಡಿಕೆಶಿ

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ವರಿಷ್ಠರು ನನ್ನ ಹಾಗೂ ಸಿಎಂರನ್ನು ದೆಹಲಿಗೆ ಬರಲು ಹೇಳಿದ್ದರು. ಜೂ.12ರಂದು ಜಾತಿಗಣತಿ ತೀರ್ಮಾನ ಮಾಡಲು ನಿಗದಿ ಆಗಿತ್ತು. ಜಾತಿಗಣತಿ ಬಗ್ಗೆ ಚರ್ಚಿಸಲು ವಿಶೇಷ ಸಂಪುಟ ಕರೆಯಲಾಗಿತ್ತು.ಜಾತಿಗಣತಿ ಬಗ್ಗೆ ಅನೇಕ ಮಠಾಧೀಶರು ವರಿಷ್ಠರನ್ನು ಭೇಟಿಯಾಗಿದ್ದರು. ಅಂಕಿ ಸಂಖ್ಯೆಯ ‌ಬಗ್ಗೆ ಆಕ್ಷೇಪ ಇದೆ ಅಂತಾ ಕೆಲವರು ಹೇಳಿದ್ದರು. ಅಪಸ್ವರ ಬರಬಾರದೆಂಬ ಉದ್ದೇಶದಿಂದ ಮತ್ತೆ ಜಾತಿಗಣತಿಗೆ ಸಲಹೆ ನೀಡಿದ್ದಾರೆ. ಹಾಗಾಗಿ ಮತ್ತೆ ಜಾತಿಗಣತಿ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ. ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ. ನಮ್ಮ ಸರ್ಕಾರದ ಬಗ್ಗೆ ಯಾರಿಗೂ ಆತಂಕ ಬೇಡ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮೀಕ್ಷೆ ಮಾಡಲಿದ್ದೇವೆ. ಯಾವಾಗ ಸಮೀಕ್ಷೆ ಎಂದು ಸಂಪುಟ ಸಭೆ ಮಾಡಿ ಸಿಎಂ ತಿಳಿಸುತ್ತಾರೆ. ಆನ್​​ಲೈನ್​ ಮೂಲಕವೂ ಮಾಹಿತಿ ನೀಡಲು ಅವಕಾಶ ನೀಡುತ್ತೇವೆ. ಅಪಸ್ವರ ಕೇಳಿ ಬಂದಿರುವುದಿಂದ ಮತ್ತೆ ಸಮೀಕ್ಷೆಮಾಡುತ್ತಿದ್ದೇವೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ