AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ಮರು ಸಮೀಕ್ಷೆ: ಕನ್ನಡಿಗರ ಪ್ರಶ್ನೆಗಳನ್ನು ಸಿಎಂ ಸಿದ್ದರಾಮಯ್ಯ ಮುಂದಿಟ್ಟ ಆರ್​ ಅಶೋಕ್

ಕರ್ನಾಟಕದ ಜಾತಿ ಗಣತಿ ಮರು ಸಮೀಕ್ಷೆಯ ಕುರಿತು ಹೈಕಮಾಂಡ್ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೀಗಿರುವಾಗ ಜಾತಿಗಣತಿ ಮರು ಸಮೀಕ್ಷೆಯ ವಿಚಾರವಾಗಿ ಕನ್ನಡಿಗರ ಕೆಲ ಪ್ರಶ್ನೆಗಳನ್ನು ಸಿಎಂ ಸಿದ್ದರಾಮಯ್ಯಗೆ ಟ್ವೀಟ್ ಮಾಡುವ ಮೂಲಕ ವಿಪಕ್ಷ ನಾಯಕ ಆರ್ ಅಶೋಕ್​ ಕೇಳಿದ್ದಾರೆ.

ಜಾತಿಗಣತಿ ಮರು ಸಮೀಕ್ಷೆ: ಕನ್ನಡಿಗರ ಪ್ರಶ್ನೆಗಳನ್ನು ಸಿಎಂ ಸಿದ್ದರಾಮಯ್ಯ ಮುಂದಿಟ್ಟ ಆರ್​ ಅಶೋಕ್
ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್​ ಅಶೋಕ್​
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 11, 2025 | 12:03 PM

ಬೆಂಗಳೂರು, ಜೂನ್​ 11: ಸಾಮಾಜಿಕ ಆರ್ಥಿಕ ಸಮೀಕ್ಷೆಯ ಜಾತಿ ಗಣತಿ (caste census resurvey) ವರದಿ ಕರ್ನಾಟಕದಲ್ಲಿ ಕಿಚ್ಚುಹೊತ್ತಿಸಿದ್ದ ವರದಿ. ಇದೇ ಜಾತಿಗಣತಿ ವರದಿ ಕುರಿತಂತೆ ಇದೀಗ ಮಹತ್ವದ ನಿರ್ಧಾರ ಹೊರಬಿದ್ದಿದೆ. ಜಾತಿಗಣತಿ ವರದಿಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ್ದು, ಮರು ಸರ್ವೇ  ಮಾಡುವಂತೆ ತಿಳಿಸಿದೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್​ ಅಶೋಕ್​ (R Ashoka), ಕನ್ನಡಿಗರ ಪ್ರಶ್ನೆಗಳನ್ನು ಸಿಎಂ ಸಿದ್ದರಾಮಯ್ಯಗೆ ಕೇಳಿದ್ದಾರೆ.

ಪ್ರಶ್ನೆ 1: ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥಾನಾ?

ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡಿದ್ದರು.

ಇದನ್ನೂ ಓದಿ
Image
ಜಾತಿ ಗಣತಿ ಮರು ಸರ್ವೇಗೆ ಕಾರಣಗಳೇನು? ಕೈ ಹೈಕಮಾಂಡ್ ಅಚ್ಚರಿ ನಿರ್ಧಾರ..!
Image
ಜಾತಿ ಗಣತಿ: ಕಾಂಗ್ರೆಸ್ ಹೈಕಮಾಂಡ್ ನಡೆ ಸ್ವಾಗತಿಸಿದ ಕರ್ನಾಟಕ ವೀರಶೈವ ಮಹಾಸಭ
Image
ಕಾಲ್ತುಳಿತ: 11 ಜನರ ಸಾವಿನ 1 ದುರಂತದಲ್ಲಿ ಸಿಲುಕಿ ಒದ್ದಾಡುತ್ತಿರುವ ಸರ್ಕಾರ
Image
ಕಾಲ್ತುಳಿತ: ಕೋರ್ಟ್​ನಲ್ಲಿ ಸಿಐಡಿಗೆ ಹಿನ್ನೆಡೆ, ಆರೋಪಿಗಳು ಮತ್ತೆ ಜೈಲಿಗೆ

ಆರ್​ ಅಶೋಕ್ ಟ್ವೀಟ್​

ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ. ಆದರೆ ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ. ಇದರಿಂದ ಒಂದು ವಿಷಯ ಸ್ಪಷ್ಟವಾಗುತ್ತದೆ. ನಿಮಗೆ ರಾಜ್ಯದ ಜನರ ಮೇಲೆ, ಮಠಾಧೀಶರು, ಸಮುದಾಯಗಳ ಮುಖಂಡರ ಮೇಲೆ ವಿಶ್ವಾಸವಿಲ್ಲ. ನೀವು ಏನಿದ್ದರೂ ಹೈಕಮಾಂಡ್‌ ವಾಕ್ಯ ಪರಿಪಾಲಕ ಅಲ್ಲವೇ?

ಪ್ರಶ್ನೆ 2: ಸಮೀಕ್ಷೆ ನಡೆಸುವವರು ಯಾರು?

ಸಿಎಂ ಸಿದ್ದರಾಮಯ್ಯನವರು 90 ದಿನಗಳ ಕಾಲಮಿತಿಯಲ್ಲಿ ಸಮೀಕ್ಷೆ ನಡೆಸುವ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಸಮೀಕ್ಷೆ ಹೇಗೆ ಸಾಧ್ಯ ಎಂಬುದು ಜನಸಾಮಾನ್ಯರ ಆತಂಕವಾಗಿದೆ. ಶಾಲೆಗಳು ಈಗಾಗಲೇ ಆರಂಭವಾಗಿವೆ. ಇಂತಹ ಸಮಯದಲ್ಲಿ ಸಮೀಕ್ಷೆಯಂತಹ ಬೃಹತ್ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿದರೆ, ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಬುಡಮೇಲಾಗುತ್ತವೆ. ಮಕ್ಕಳ ಭವಿಷ್ಯದ ಮೇಲೆ ಇದು ನೇರ ಪರಿಣಾಮ ಬೀರಲಿದೆ. ಹಾಗಾದರೆ, ಈ 90 ದಿನಗಳಲ್ಲಿ ಸಮೀಕ್ಷೆಯನ್ನು ನಡೆಸಲು ಸರ್ಕಾರ ಯಾರನ್ನು ನಿಯೋಜಿಸಲಿದೆ?

ಪಶ್ನೆ 3: ಆನ್‌ಲೈನ್ ಸಮೀಕ್ಷೆ – ಅವಿವೇಕದ ಕ್ರಮವಲ್ಲವೇ?

ಆನ್‌ಲೈನ್ ಮೂಲಕ ಸಮೀಕ್ಷೆ ನಡೆಸುವ ಚಿಂತನೆ ಮತ್ತೊಂದು ಅವಿವೇಕದ ಕ್ರಮವೆಂದು ತೋರುತ್ತಿದೆ. ಅನೇಕ ಅಕ್ಷರಸ್ಥರೇ ಇಂದಿಗೂ ಆನ್‌ಲೈನ್ ವ್ಯವಸ್ಥೆಯಿಂದ ದೂರ ಇರುವಾಗ, ಇಂತಹ ಸಮೀಕ್ಷೆ ಹೇಗೆ ಸಾಧ್ಯ? ಇದರಿಂದ ಮಾಹಿತಿಯ ನಿಖರತೆ ಮತ್ತು ಗುರುತುಪತ್ತೆ ಹೇಗೆ ಸಾಧ್ಯವಾಗುತ್ತದೆ? ತಪ್ಪು ದಾಖಲಾತಿಗಳನ್ನು ತಡೆಯಲು ಸರ್ಕಾರ ಏನು ಕ್ರಮ ತೆಗೆದುಕೊಳ್ಳಲಿದೆ?

ಪ್ರಶ್ನೆ 4: ತೆರಿಗೆದಾರರ 167 ಕೋಟಿ ರೂ. ದುಂದುವೆಚ್ಚಕ್ಕೆ ಹೊಣೆ ಯಾರು?

ಜಾತಿ ಜನಗಣತಿಗಾಗಿ ಈಗಾಗಲೇ ಖರ್ಚಾದ ಈ ಬೃಹತ್ ಮೊತ್ತಕ್ಕೆ ಯಾರು ಹೊಣೆಗಾರರು? ಈ ಹಿಂದೆ ಸಿದ್ಧಪಡಿಸಿದ್ದ ಕಾಂತರಾಜು-ಜಯಪ್ರಕಾಶ್ ಹೆಗ್ಡೆ ಅವರ ‘ಚೌಚೌ ವರದಿ’ಗೆ ಈಗ ಎಳ್ಳು-ನೀರು ಬಿಟ್ಟಂತಾಗಿದೆ. ಆ ವರದಿಗೆ ತೆರಿಗೆದಾರರ 167 ಕೋಟಿ ರೂ. ವೆಚ್ಚವಾಗಿದೆ. ಈ ಹಣವನ್ನು ಯಾರಿಂದ ವಸೂಲಿ ಮಾಡುತ್ತೀರಿ?

ಪ್ರಶ್ನೆ 5: ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ?

ಈ ಎಲ್ಲ ಬೆಳವಣಿಗೆಗಳಿಗಿಂತ ಮಿಗಿಲಾಗಿ, ಮುಖ್ಯಮಂತ್ರಿಗಳು ಮತ್ತು ಅವರ ಹೈಕಮಾಂಡ್ ಸೇರಿಕೊಂಡು, ಇತ್ತೀಚಿನ ಐಪಿಎಲ್ ವಿಜಯೋತ್ಸವ ದುರಂತವನ್ನು ಮರೆಮಾಚಲು ಮತ್ತೊಂದು ಬೃಹತ್ ನಾಟಕ ಆರಂಭಿಸಿರುವ ಅನುಮಾನಗಳು ದಟ್ಟವಾಗಿವೆ. ಇದು ನಿಜಕ್ಕೂ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಾತಿ ಜನಗಣತಿ ಮರು ಸರ್ವೇಗೆ ಕಾರಣಗಳೇನು? ಅಚ್ಚರಿ ಮೂಡಿಸಿದ ಕೈ ಹೈಕಮಾಂಡ್ ನಿರ್ಧಾರ..!

ನಿಮಗೆ ನಿಜಕ್ಕೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಮೊದಲು ಸಾರ್ವಜನಿಕ ಚರ್ಚೆ ನಡೆಸಿ. ಹಾಗೆಯೇ, ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಿ. ಸಮಗ್ರವಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿ, ಈ ಶೈಕ್ಷಣಿಕ ವರ್ಷ ಮುಗಿದ ಬಳಿಕವಷ್ಟೇ ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆ ನಡೆಸಿ. ಇದು ರಾಜ್ಯದ ಹಿತದೃಷ್ಟಿಯಿಂದ ಅತಿ ಅವಶ್ಯಕ ಎಂದು ಆರ್​. ಅಶೋಕ್​ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ