AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Caste census Row: ಜಾತಿಗಣತಿ ತಡೆಗೆ ನಕಾರ, ಕೆಲವು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಆದೇಶ

ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆದಿ ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲ ಷರತ್ತುಗಳನ್ನು ವಿಧಿಸಿದೆ. ಇದರೊಂದಿಗೆ ಕಾನೂನು ಹೋರಾಟದಕ್ಕೆ ರಾಜ್ಯ ಸರ್ಕಾರ ಮೇಲುಗೈ ಸಾಧಿಸಿದಂತಾಗಿದೆ.

Caste census Row: ಜಾತಿಗಣತಿ ತಡೆಗೆ ನಕಾರ, ಕೆಲವು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಆದೇಶ
Karnataka High Court
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 25, 2025 | 5:25 PM

Share

ಬೆಂಗಳೂರು, (ಸೆಪ್ಟೆಂಬರ್ 25): ಹಲವು ಗೊಂದಲಗಳಿಗೆ ಕಾರಣವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ (Caste Census survey) ತಡೆ ನೀಡಲು ಕರ್ನಾಟಕ ಹೈಕೋರ್ಟ್ (Karnataka High Court) ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ, ಎರಡು ದಿನ ವಾದ ಪ್ರತಿವಾದ ಆಲಿಸಿದ್ದು, ಅಂತಿಮವಾಗಿ ಇಂದು (ಸೆಪ್ಟೆಂಬರ್ 25) ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದ್ರೆ,  ಜನರ ದತ್ತಾಂಶದ ಗೌಪ್ಯತೆ ಬಗ್ಗೆ ಸರ್ಕಾರಕ್ಕೆ ಹಾಗೂ ಹಿಂದೂಳಿದ ವರ್ಗಾಗಳ ಆಯೋಗಕ್ಕೆ ಕೆಲವು ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಕೋರ್ಟ್ ವಿಧಿಸಿದ ಷರತ್ತುಗಳೇನು?

ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೇ ದತ್ತಾಂಶದ ಗೌಪ್ಯತೆ ಸಂಬಂಧ ಪ್ರಮಾಣಪತ್ರ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಿ ತೆಗೆಯದಂತೆ ಸೂಚಿಸಲು ನಿಮಗಿರುವ ಅಧಿಕಾರವೇನು? ಜಾತಿ ಗಣತಿ ಬಗ್ಗೆ ಕೋರ್ಟ್ ಪ್ರಶ್ನೆ

ನೀವು ಸಂಗ್ರಹಿಸಿರುವ ದತ್ತಾಂಶ ಹೇಗೆ ರಕ್ಷಿಸುತ್ತೀರಿ ಎಂದು ಹೈಕೋರ್ಟ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಇ ಆಡಳಿತ ವಿಭಾಗವೇ ದತ್ತಾಂಶವನ್ನು ರಕ್ಷಿಸುತ್ತದೆ. ಸರ್ಕಾರದ ಅಧಿಕಾರಿಗಳಷ್ಟೇ ನಿಯಂತ್ರಣ ಹೊಂದಿರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಗೆ ತಡೆ ಕೋರಿ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ರಾಜ್ಯ ಒಕ್ಕಲಿಗರ ಸಂಘ ಮತ್ತು ಇತರರು ಪಿಐಎಲ್ ಸಲ್ಲಿಸಿದ್ದರು. ಈ ಪಿಐಎಲ್​​ ಗಳನ್ನು ವಿಚಾರಣೆ ನಡೆಸುದ ಮುಖ್ಯ ನ್ಯಾ.ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠ ಎರಡು ದಿನಗಳ ಕಾಲ ವಾದ ಪ್ರತಿವಾದ ಆಲಿಸಿತ್ತು. ಪಿಐಎಲ್ ಸಲ್ಲಿಸಿದ್ದ ಅರ್ಜಿದಾರರು ಹಾಗೂ ಕೇಂದ್ರ ಸರ್ಕಾರ ಪರ ವಕೀಲರು ಸಮೀಕ್ಷೆ ತಡೆ ನೀಡುವಂತೆ ತಮ್ಮದೇ ರೀತಿಯಲ್ಲಿ ಪೀಥದ ಮುಂದೆ ಪ್ರಬಲ ವಾದ ಮಂಡಿಸಿದ್ದರು. ಇನ್ನು ಇದಕ್ಕೆ ರಾಜ್ಯ ಸರ್ಕಾರ ಹಾಗೂ ಹಿಂದೂಳಿದ ವರ್ಗಗಳ ಆಯೋಗದ ಪರ ವಕೀಲರು ಸಹ ಪ್ರಬಲವಾಗಿ ವಾದ ಮಂಡಿಸಿದರು. ಹೀಗೆ ಎರಡು ದಿನಗಳ ಕಾಲ ವಾದ ಪ್ರತಿವಾದ ಆಲಿಸಿದ ಹೈಕೋರ್​ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿದ್ದು, ಜನರು ಗೌಪ್ಯತೆ ಕಾಪಾಡುವಂತೆ ಕೆಲ ಸೂಚನೆಗಳನ್ನು ನೀಡಿ ಮಧ್ಯಂತೆ ಆದೇಶಿಸಿದೆ.

Published On - 4:59 pm, Thu, 25 September 25

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?