ಚರ್ಮಗಂಟು ರೋಗ ಆತಂಕ: ಕರ್ನಾಟಕದಾದ್ಯಂತ ಜಾನುವಾರು ಸಂತೆ, ಸಾಗಣೆ ನಿಷೇಧ

| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2022 | 8:07 PM

ಜಾನುವಾರುಗಳಿಗೆ ಚರ್ಮಗಂಟು ರೋಗ ವಿಪರೀತವಾಗಿ ಹಬ್ಬುತ್ತಿರುವುದರಿಂದ ಪಶುಸಂಗೋಪನಾ ಇಲಾಖೆ ಮುಂಜಾಗ್ರತಾ ಕ್ರಮಕೈಗೊಂಡಿದೆ.

ಚರ್ಮಗಂಟು ರೋಗ ಆತಂಕ: ಕರ್ನಾಟಕದಾದ್ಯಂತ ಜಾನುವಾರು ಸಂತೆ, ಸಾಗಣೆ ನಿಷೇಧ
ಚರ್ಮಗಂಟು ರೋಗ
Follow us on

ಬೆಂಗಳೂರು: ಕರ್ನಾಟಕದಲ್ಲಿ ಜಾನುವಾರುಗಳಿಗೆ ಚರ್ಮಗಂಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳ ಸಂತೆ ಹಾಗೂ ಸಾಗಣೆ ನಿಷೇಧಿಸಲಾಗಿದೆ.

ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ಪಶುಸಂಗೋಪನಾ ಇಲಾಖೆ ಇಂದು(ಅಕ್ಟೋಬರ್ 13) ಮಹತ್ವದ ಸೂಚನೆ ನೀಡಿದೆ. ಜಾನುವಾರುಗಳಲ್ಲಿ ಚರ್ಮಗಂಟು ನಿಯಂತ್ರಣಕ್ಕೆ ಪಶುಸಂಗೋಪನಾ ಇಲಾಖೆ ಈ ಕ್ರಮ ತೆಗೆದುಕೊಂಡಿದೆ.

Lumpy Skin Disease: ಕರ್ನಾಟಕದಲ್ಲಿಯೂ ಚರ್ಮಗಂಟು ರೋಗ ಉಲ್ಬಣ, ಹಾವೇರಿಯಲ್ಲಿ ಒಂದೇ ದಿನ ನೂರಾರು ರಾಸುಗಳ ಸಾವು

ಜಾನುವಾರುಗಳಿಗೆ ಚರ್ಮಗಂಟು ರೋಗ ವಿಪರೀತವಾಗಿ ಹಬ್ಬುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಜಾನುವಾರುಗಳ ಸಂತೆಯನ್ನ ರದ್ದುಪಡಿಸಿದೆ.

ಈ ಚರ್ಮ ಗಂಟು ರೋಗ ಹಸು ಮತ್ತು ಎಮ್ಮೆಗಳಲ್ಲಿ ತೀವ್ರವಾಗಿ ಕಾಣಿಸಿಕೊಂಡಿದ್ದು, ಹೆಚ್ಚು ಹರಡುವ ಸಾಧ್ಯತೆ ಇರುವುದರಿಂದ ಸಾಗಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೇಗೆ ಹರಡುತ್ತದೆ?

ರೋಗಪೀಡಿತ ಜಾನುವಾರುಗಳ ಬಾಯಿ, ಮೂಗಿನಿಂದ ಸುರಿಯುವ ಲೋಳೆಯಂತಹ ದ್ರವ ಬಿದ್ದ ಕಡೆ ಆರೋಗ್ಯವಂತ ರಾಸುಗಳು ಆಹಾರ ಸೇವಿಸಿದರೆ ರೋಗ ಹರಡುತ್ತದೆ. ಜಾನುವಾರುಗಳು ಕುಡಿಯುವ ನೀರಿನಲ್ಲಿ ರೋಗ ಬಂದ ಹಸುವಿನ ಜೊಲ್ಲು, ಇತರ ದ್ರವ ಸೇರಿದ್ದರೂ ರೋಗ ಹರಡುತ್ತದೆ. ರೋಗಪೀಡಿತ ಆಕಳಿನ ಸಂಪರ್ಕದ ಕೀಟ, ನೋಣ, ಸೊಳ್ಳೆ ಇತರ ಜಾನುವಾರುಗಳಿಗೆ ಕಡಿದಾಗಲೂ ರೋಗ ಹರಡುತ್ತದೆ.

ರೋಗ ಲಕ್ಷಣಗಳು

ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತವೆ. ವಾರಗಟ್ಟಲೆ ಜ್ವರ ಇರುವುದರೊಂದಿಗೆ ಹಾಲು ನೀಡುವ ಪ್ರಮಾಣವೂ ಕಡಿಮೆಯಾಗುತ್ತದೆ. ಈ ರೋಗವು ಮನುಷ್ಯರಿಗೆ, ಕುರಿ, ಮೇಕೆಗಳಿಗೆ ಹರಡುವುದಿಲ್ಲ. ಆದರೆ ಹಸು-ದತ್ತುಗಳಿಗೆ ಮಾತ್ರ ಜೀವಕಂಟಕವಾಗಬಲ್ಲದು.

Published On - 8:07 pm, Thu, 13 October 22