AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಎದುರಾಗಿರುವ ಭೀಕರ ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ನೀರು ಹರಿಸುವ CWRC ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ 4 ಅಣೆಕಟ್ಟುಗಳಾದ KRS, ಕಬಿನಿ, ಹೇಮಾವತಿ, ಹಾರಂಗಿ ಇಂದಿನ ನೀರಿನ ವಾಸ್ತವ ಸ್ಥಿತಿಗತಿಯ ಪ್ರಮುಖ ವಿವರಗಳು ಇಲ್ಲಿವೆ. ಕೆಆರ್‌ಎಸ್‌ನಲ್ಲಿ ಕೇವಲ 12 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿರೋದು ಆತಂಕ ಹೆಚ್ಚಿಸಿದೆ.

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ
ಕೆ.ಆರ್.ಎಸ್ ಜಲಾಶಯ Image Credit source: PTI
ಪ್ರಸನ್ನ ಹೆಗಡೆ
|

Updated on:Jul 29, 2026 | 7:10 PM

Share

ಮುಖ್ಯಾಂಶಗಳು

  • ಮುಂಗಾರು ಮಳೆಯ ಭಾರಿ ಕೊರತೆ ಹಿನ್ನೆಲೆ
  • ಕರ್ನಾಟಕದಲ್ಲಿ ತಲೆದೋರಿದ ನೀರಿನ ಅಭಾವ
  • ಪ್ರಮುಖ ಡ್ಯಾಂಗಳಲ್ಲಿ ಸದ್ಯ ಇರುವ ನೀರೆಷ್ಟು?

ಬೆಂಗಳೂರು, ಜುಲೈ 29: ಮುಂಗಾರು ಮಳೆಯ ಭಾರಿ ಕೊರತೆ ಹಿನ್ನೆಲೆ ಕರ್ನಾಟಕದಲ್ಲಿಯೇ ನೀರಿನ ಅಭಾವ ತಲೆದೋರಿದೆ. ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳು ಭಣಗುಡುತ್ತಿರುವ ನಡುವೆ ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರೋದೀಗ ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಹೀಗಾಗಿ ಈ ಸಂಬಂಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಮುಂದಾಗಿದ್ದು, ರಾಜ್ಯದ ವಾಸ್ತವ ಸ್ಥಿತಿ ಮನದಟ್ಟು ಮಾಡಲು ತೀರ್ಮಾನಿಸಿದೆ.

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ

ಕೆ.ಆರ್.ಎಸ್ ಜಲಾಶಯ

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಒಂದಾದ ಕೆ.ಆರ್.ಎಸ್ ಜಲಾಶಯದಲ್ಲಿ ಸದ್ಯ ಬಳಕೆಗೆ ಇರೋದು ಕೇವಲ 12 ಟಿಎಂಸಿ ನೀರು. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಡ್ಯಾಂನಲ್ಲಿ ಇಂದು 91.94 ಅಡಿ ಮಾತ್ರ ನೀರಿದ್ದು, 2,842 ಕ್ಯೂಸೆಕ್ ಒಳಹರಿವು ಮತ್ತು 1,747 ಕ್ಯೂಸೆಕ್ ಹೊರ ಹರಿವಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಸದ್ಯ 17.126 ಟಿಎಂಸಿ ಮಾತ್ರ ನೀರು ಲಭ್ಯವಿದ್ದು ಈ ಪೈಕಿ 5 ಟಿಎಂಸಿ ಡೆಡ್​​ ಸ್ಟೋರೇಜ್​​ ಆಗಿದೆ.

ಇದನ್ನೂ ಓದಿ: ಕಾವೇರಿ ಜಲ ವಿವಾದ: CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರ

ಕಬಿನಿ ಡ್ಯಾಂ

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀರವಾಳು ಗ್ರಾಮದಲ್ಲಿರುವ ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 75.79 ಅಡಿ ಇದ್ದು, ಕಳೆದ ವರ್ಷ ಇದೇ ದಿನ 81.66 ಅಡಿ ಸಂಗ್ರಹವಿತ್ತು. ಡ್ಯಾಂನಲ್ಲಿ 14.70 ಟಿಎಂಸಿ ನೀರಷ್ಟೇ ಲಭ್ಯವಿದ್ದು, 3,805 ಕ್ಯೂಸೆಕ್ ನೀರು ಒಳಹರಿವು ಮತ್ತು 500 ಕ್ಯೂಸೆಕ್ ಹೊರ ಹರಿವು ಸದ್ಯ ಜಲಾಶಯದಲ್ಲಿದೆ.

ಹೇಮಾವತಿ ಜಲಾಶಯ

ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯ 37 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಹಾಲಿ 24.195 ಟಿಎಂಸಿ ನೀರು ಲಭ್ಯವಿದೆ. 5690 ಕ್ಯೂಸೆಕ್ ಒಳಹರಿವು ಮತ್ತು 500 ಕ್ಯೂಸೆಕ್ ಹೊರ ಹರಿವನ್ನು ಡ್ಯಾಂ ಹೊಂದಿದೆ. ಕಳೆದ ವರ್ಷ ಇದೇ ದಿನ ಡ್ಯಾಂನಲ್ಲಿ 35.992 ಟಿಎಂಸಿ ನೀರಿತ್ತು.

ಹಾರಂಗಿ ಜಲಾಶಯ

ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನಲ್ಲಿರುವ ಹಾರಂಗಿ ಜಲಾಶಯ 2859 ಅಡಿ ಗರಿಷ್ಟ ಮಟ್ಟ ಹೊಂದಿದ್ದು, ಇಂದಿನ ನೀರಿನ ಮಟ್ಟ 2858.88 ಅಡಿಯಷ್ಟಿದೆ. 3221 ಕ್ಯೂಸೆಕ್ ಒಳಹರಿವು ಮತ್ತು 1895 ಕ್ಯೂಸೆಕ್ ಹೊರಹರಿವಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:54 pm, Wed, 29 July 26

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?