AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: ಕೆಆರ್​ಎಸ್ ಒಳಹರಿವು ಸುಧಾರಣೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯದ ಒಳಹರಿವು ಪ್ರಮಾಣ ಹೆಚ್ಚಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: ಕೆಆರ್​ಎಸ್ ಒಳಹರಿವು ಸುಧಾರಣೆ
ಕೃಷ್ಣರಾಜ ಸಾಗರ ಜಲಾಶಯ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 17, 2021 | 10:15 PM

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯದ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಗುರುವಾರ ಮುಂಜಾನೆ ಜಲಾಶಯದ ಒಳಹರಿವು ಪ್ರಮಾಣ 6934 ಕ್ಯೂಸೆಕ್ ಇತ್ತು. ಸಂಜೆ ಹೊತ್ತಿಗೆ ಇದು 60,187 ಕ್ಯೂಸೆಕ್​ಗೆ ಹೆಚ್ಚಳವಾಗಿತ್ತು. ಜಲಾಶಯದ ಇಂದಿನ ನೀರಿನ ಮಟ್ಟ 85.68 ಅಡಿ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ.

ಕೊಡಗು ಜಿಲ್ಲೆ ಮಡಿಕೇರಿ ನಗರದಲ್ಲಿ ಗುರುವಾರ ಧೋ ಎಂದು ಮಳೆ ಸುರಿಯಿತು. ನಗರದಲ್ಲಿ ಹಲವು ಮಳಿಗೆಗಳಿಗೆ ನೀರು ನುಗ್ಗಿದ ಕಾರಣ ಜನರು ಪರದಾಡಬೇಕಾಯಿತು. ಮರಗಳು ಉರುಳಿ ಬಿದ್ದು ವಿದ್ಯುತ್​ ಸಂಪರ್ಕ ಕಡಿತಗೊಂಡಿತು. ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು ಕಾರ್ಯಕ್ಕೆ ಮುಂದಾದರು.

ಕರ್ನಾಟಕದ ವಿವಿಧೆಡೆ ಉತ್ತಮ ಮಳೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿದ್ದು, ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಜಲಾಶಯದ ಗೇಟ್​ಗಳನ್ನು ತೆರೆದು ನದಿಗೆ 33,700 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಮತ್ತು ಕರ್ನಾಟಕದ ಬೆಳಗಾವಿ ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ 6 ಸೇತುವೆಗಳು ಜಲಾವೃತಗೊಂಡಿವೆ. ಹುಕ್ಕೇರಿ ತಾಲೂಕಿನಲ್ಲಿ ಹೀರಣ್ಯಕೇಶಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಾಗನೂರು-ಗೋಟೂರ ಸೇತುವೆ, ವೇದಗಂಗಾ ಹಾಗೂ ದೂದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭೀವಶಿ-ಜತ್ರಾಟ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ಮಮದಾಪೂರ-ಹುನ್ನರಗಿ, ಭೋಜವಾಡಿ-ಕುನ್ನೂರು ಸೇತುವೆಗಳು ಮುಳುಗಡೆಯಾಗಿವೆ.

(Cauvery Basin Receives Good Rain KRS Dam Inflow Improves)

ಇದನ್ನೂ ಓದಿ: ಕರ್ನಾಟಕದ ವಿವಿಧೆಡೆ ಉತ್ತಮ ಮಳೆ: ತುಂಗಾ ಜಲಾಶಯ ಭರ್ತಿ, ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ

ಇದನ್ನೂ ಓದಿ: Karnataka Weather: ಮಲೆನಾಡಿನಲ್ಲಿ ಹನಿ ಕಡಿಯದೇ ಸುರಿಯುತ್ತಿದೆ ಮಳೆ; ಭಾರೀ ಗಾಳಿ, ಮಳೆಗೆ ಜನಜೀವನ ಅಸ್ತವ್ಯಸ್ತ