Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಕಾವೇರಿ ನೀರು: ತಜ್ಞರು ಕೊಟ್ಟ ಸಲಹೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ, ಇಲ್ಲಿದೆ ವಿವರ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್​​​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಸುಪ್ರೀಂಕೋರ್ಟ್ ಮುಂದೆ ನಮ್ಮ ಕಷ್ಟ ಹೇಳಿಕೊಳ್ಳಲು ಶನಿವಾರವೇ ಮರುಪರಿಶೀಲನಾ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು: ತಜ್ಞರು ಕೊಟ್ಟ ಸಲಹೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ, ಇಲ್ಲಿದೆ ವಿವರ
ಕಾನೂನು ತಜ್ಞರ ಜತೆ ಸಿದ್ದರಾಮಯ್ಯ ಸಭೆ
Follow us
TV9 Web
| Updated By: Ganapathi Sharma

Updated on: Sep 29, 2023 | 8:18 PM

ಬೆಂಗಳೂರು, ಸೆಪ್ಟೆಂಬರ್ 29: ತಮಿಳುನಾಡಿಗೆ ಅಕ್ಟೋಬರ್​​ 15ರ ವರೆಗೆ ದಿನ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಾನೂನು ತಜ್ಞರ ಜತೆ ಸಭೆ ನಡೆಸಿದರು. ಸಭೆಯ ನಂತರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ನೀರಾವರಿ ವಿವಾದಗಳಿಗೆ ಸಂಬಂಧ ಸಲಹಾ ಸಮಿತಿ ರಚನೆಗೆ ಸಲಹೆ ತಜ್ಞರು ಸಲಹೆ ನೀಡಿದ್ದಾರೆ. ಮಹದಾಯಿ, ಕಾವೇರಿ, ಕೃಷ್ಣಾ ಜಲ ವಿವಾದದಲ್ಲಿ ಸಲಹೆ ನೀಡಲು ಸಮಿತಿ ರಚಿಸುವಂತೆ ಸೂಚಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಲಹಾ ಸಮಿತಿಯು ಪ್ರತಿದಿನ ಡೇಟಾ ಸಂಗ್ರಹಿಸಿ ರಾಜ್ಯದ ಕಾನೂನು ತಂಡಕ್ಕೆ ಸಲಹೆ ನೀಡಬೇಕು. ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ವಾಸ್ತವಾಂಶಗಳನ್ನು ವಿವರಿಸಲಾಗಿದೆ. ಇಷ್ಟೆಲ್ಲ ಮಾಹಿತಿ ನೀಡಿದರೂ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದಾರೆ. ಈ ಕುರಿತು ಸುಪ್ರೀಂ ಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ತಜ್ಞರು ಸಲಹೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡುವಂತೆ ಸಭೆಯಲ್ಲಿ ತಜ್ಞರು ಸಲಹೆ ನೀಡಿದ್ದಾರೆ. ಸುಪ್ರೀಂಕೋರ್ಟ್​ ಜೊತೆ ಮಾತನಾಡಿ ಮನವೊಲಿಸುವಂತೆ ಸಲಹೆ ನೀಡಿದ್ದಾರೆ. ಮೇಕೆದಾಟು ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಸಮಸ್ಯೆಯಾಗಲ್ಲ. ತಮಿಳುನಾಡಿಗೆ ಮನವರಿಕೆ ಮಾಡಿ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕು. ಮೇಕೆದಾಟು ಯೋಜನೆ ಜಾರಿಯಾದರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ತಮಿಳುನಾಡುಗೆ ಅಗತ್ಯವಿದ್ದಾಗ ನೀರು ಹರಿಸಲು ಸಹಕಾರಿಯಾಗಲಿದೆ. ಜಲವಿದ್ಯುತ್ ಉತ್ಪಾದನೆಗೆ ಬಳಸಿದ ನೀರು ತಮಿಳುನಾಡಿಗೆ ಹರಿದುಹೋಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡದಿದ್ದರೆ ಏನಾಗಬಹುದು? ಸಾಧ್ಯತೆಗಳ ಬಗ್ಗೆ ಕಾನೂನು ತಜ್ಞರ ಜತೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ

ಅಲ್ಲದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್​​​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಸುಪ್ರೀಂಕೋರ್ಟ್ ಮುಂದೆ ನಮ್ಮ ಕಷ್ಟ ಹೇಳಿಕೊಳ್ಳಲು ಶನಿವಾರವೇ ಮರುಪರಿಶೀಲನಾ ಅರ್ಜಿ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್