ಅನ್ಯಾಯ ತಪ್ಪಿಸಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸುವುದೇ ಪರಿಹಾರ; ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್ಡಿ ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 25: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ (Cauvery Dispute) ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸುವುದೇ ಪರಿಹಾರ. ಈ ವಿಚಾರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ (HD Deve Gowda) ಅವರು ಪ್ರಧಾನಿಗೆ ಪತ್ರ ಬರೆದಿರುವುದನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಾವೇರಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಸಂದರ್ಭದಲ್ಲಿ ಮತ್ತು ಕರ್ನಾಟಕ ಬರದಿಂದ ತತ್ತರಿಸಿರುವುದನ್ನು ಗಮನಿಸಿ ದೇವೇಗೌಡರು ಪ್ರಧಾನಿಗೆ ಮಧ್ಯ ಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ.
‘ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ. ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ’ ಎಂದು ಎಕ್ಸ್ ಪೋಸ್ಟ್ನಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್ಡಿ ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಕಾವೇರಿ ನೀರಿನ ಬಗ್ಗೆ ಮಾತನಾಡುತ್ತ ಕಣ್ಣೀರು ಹಾಕಿದ ದೇವೇಗೌಡ, ವಾಸ್ತವಸ್ಥಿತಿ ಅಧ್ಯಯನಕ್ಕೆ ತಂಡ ಕಳಿಸಲು ಮೋದಿಗೆ ಮನವಿ
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ. ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ… https://t.co/pfy7J1Oo6B
— Siddaramaiah (@siddaramaiah) September 25, 2023
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 3:16 pm, Mon, 25 September 23