ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಹರಿದು ಬಂದ ಭಕ್ತ ಸಾಗರ
ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕಾವೇರಿ ತಾಯಿಯ ದರ್ಶನ ಪಡೆಯಲು ತಲಕಾವೇರಿಯತ್ತ ಭಕ್ತ ಸಾಗರವೇ ಹರಿದು ಬರ್ತಿದೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ.
ಮಡಿಕೇರಿ, ಅಕ್ಟೋಬರ್ 17: ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತ ಪ್ರವಾಹವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್ ಗಳ ವ್ಯವಸ್ಥೆಯೂ ಇದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 17, 2025 11:29 AM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
