AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.26ರ ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲ ವಾಪಸ್, ಕರ್ನಾಟಕ ಬಂದ್​ಗೆ ಆಟೋ, ಓಲಾ-ಊಬರ್ ಸಪೋರ್ಟ್

Bengaluru Bandh ಕಾವೇರಿ ನದಿ ನೀರಿಗಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಆದ್ರೆ, ಇದೀಗ ಆಟೋ, ಓಲಾ ಹಾಗೂ ಊಬರ್​ ಸಂಘಟನೆಗಳು ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದು, ಸೆ.29ರ ಅಖಂಡ ಕರ್ನಾಟಕ ಬಂದ್​ಗೆ ಬೆಂಬಲ ಘೋಷಿಸಿವೆ.

ಸೆ.26ರ ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲ ವಾಪಸ್, ಕರ್ನಾಟಕ ಬಂದ್​ಗೆ ಆಟೋ, ಓಲಾ-ಊಬರ್ ಸಪೋರ್ಟ್
ಪ್ರಾತಿನಿಧಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Sep 25, 2023 | 1:09 PM

Share

ಬೆಂಗಳೂರು, (ಸೆಪ್ಟೆಂಬರ್ 26): ಕರುನಾಡಲ್ಲಿ ಕಾವೇರಿಗಾಗಿ(Cauvery Water Dispute) ಹೋರಾಟ ಜೋರಾಗಿದೆ. ಬೆಂಗಳೂರು ಬಂದ್(Bengaluru Bandh), ಕರ್ನಾಟಕ ಬಂದ್ (Karnataka bandh)ಯಾವಾಗ ಮಾಡಬೇಕೆಂಬ ಗೊಂದಲದಲ್ಲಿ ಸಂಘಟನೆಗಳು ಸಿಲುಕಿಕೊಂಡಿವೆ. ಈಗಾಗಲೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಈಗಾಗಲೇ ನಾಳೆ(ಸೆಪ್ಟೆಂಬರ್ 26) ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಇದಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ. ಇದರ ಮಧ್ಯೆ ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ.

ನಾಳೆ ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿದ್ದು, ನಾಳೆ(ಸೆ.26) ಬೆಂಗಳೂರಲ್ಲಿ ಓಲಾ ಉಬರ್ ಸೇವೆಗಳು ಯಥಾಸ್ಥಿತಿಯಲ್ಲಿ ಇರುತ್ತವೆ. ಆದ್ರೆ, ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್​ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿವೆ. ಆದ್ರೆ, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಇದರಿಂದ ಬೆಂಗಳೂರು ಹಾಗೂ ಕರ್ನಾಟಕ ಬಂದ್​ ಗೊಂದಲಮಯವಾಗಿದ್ದು, ಸಂಘಟನೆಗಳ ನಡುವೆಯೇ ಗೊಂದಲ ಸೃಷ್ಟಿಯಾಗಿದೆ.

Published On - 1:08 pm, Mon, 25 September 23

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More