Karnataka Dam Water Level: ನೀರಿಗಾಗಿ ಹಾಹಾಕಾರ ! ಕೆಆರ್ಎಸ್ ಸೇರಿದಂತೆ ಮಾ.01ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಮಾರ್ಚ 1ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕುಡಿಯಲು, ನಿತ್ಯ ಬಳಕೆ ಮತ್ತು ಕೃಷಿಗೆ ನೀರಿಲ್ಲದೆ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಈ ಬಾರಿ ಸರಿಯಾಗಿ ಮಳೆಯಾಗದ ಹಿನ್ನೆಲೆಯಲ್ಲಿ ನೀರಿನ ಮೂಲಗಳು ಬತ್ತುತ್ತಿವೆ. ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಕೆಎಸ್ಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದೆ. ಹೀಗಾಗಿ ಇದ್ದ ನೀರನ್ನೇ ಬರುವ ಮಳೆಗಾಲದವರೆಗು ಉಪಯೋಗಿಸಿಕೊಳ್ಳಬೇಕು. ಹೀಗಾಗಿ ವಾರ ಅಥವಾ 10 ದಿನಕ್ಕೊಮ್ಮೆ ನಗರ ವಾಸಿ ಮನೆಗಳಿಗೆ ಕಾವೇರಿ ನೀರು ಬಿಡಲಾಗುತ್ತಿದೆ. ಹಾಗಾದರೆ ಕೆಆರ್ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ 01 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 48.84 | 51.19 | 0 | 1981 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 8.55 | 29.41 | 0 | 979 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 11.66 | 14.90 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 16.02 | 28.44 | 207 | 753 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 40.07 | 67.42 | 0 | 3468 |
ಕಬಿನಿ ಜಲಾಶಯ (Kabini Dam) | 696.13 | 19.52 | 11.70 | 10.74 | 110 | 500 |
ಭದ್ರಾ ಜಲಾಶಯ (Bhadra Dam) | 657.73 | 71.54 | 25.45 | 51.79 | 60 | 3417 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 28.13 | 24.28 | 0 | 3057 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 13.41 | 21.59 | 48 | 515 |
ವರಾಹಿ ಜಲಾಶಯ (Varahi Dam) | 594.36 | 31.10 | 7.92 | 09.02 | 0 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.38 | 3.25 | 195 | 200 |
ಸೂಫಾ (Supa Dam) | 564.00 | 145.33 | 58.19 | 74.60 | 260 | 3444 |
ಚಿಕ್ಕಮಗಳೂರಿನಲ್ಲೂ ಜೀವಜಲಕ್ಕೆ ಹಾಹಾಕಾರ !
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೇಸಿಗೆ ಆರಂಭಕ್ಕೂ ಮುನ್ನವೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಅದರಲ್ಲೂ ಪ್ರತಿ ವರ್ಷ ಅತಿವೃಷ್ಟಿಗೆ ಒಳಗಾಗಿ ಸಂಕಷ್ಟತೆ ಒಳಗಾಗುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ನದಿ ಹಳ್ಳ ಕೊಳ್ಳ ಬಾವಿ ಸೇರಿದಂತಹ ಜಲ ಮೂಲಗಳು ಬತ್ತಿ ಹೋಗಿದ್ದು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ತೋಟದೂರು ಗ್ರಾಮ ಪಂಚಾಯಿತಿಯ ತನೂಡಿ ಗ್ರಾಮದ ಆಳುಗೋಡಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:21 am, Fri, 1 March 24