AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧಾರ – ಬೊಮ್ಮಾಯಿ

Cauvery Water Dispute: ಬ್ರ್ಯಾಂಡ್ ಬೆಂಗಳೂರು ಎಂದು ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಬ್ರ್ಯಾಂಡ್ ಬೆಂಗಳೂರೋ ಅಥವಾ ಬ್ಯಾಂಡ್ ಬೆಂಗಳೂರೋ ಎನ್ನುವುದು ಮುಂದೆ ಗೊತ್ತಾಗುತ್ತದೆ. ತಮಿಳುನಾಡಿನ ಹಿತ ಕಾಪಾಡಲು ರಾಜ್ಯದ ಹಿತಾಸಕ್ತಿ ಬಲಿಕೊಟ್ಟಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ಕಾವೇರಿ ವಿವಾದ: ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧಾರ - ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ|

Updated on: Sep 23, 2023 | 1:47 PM

Share

ಬೆಂಗಳೂರು ಸೆ.23: ಸರ್ಕಾರ ತಮಿಳುನಾಡಿಗೆ (Tamil nadu) ಕಾವೇರಿ ನದಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ (BJP) ನಾಯಕರು ಇಂದು (ಸೆ.23) ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಾತನಾಡಿ ಕರ್ನಾಟಕದ ನೆಲ, ಜಲ ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾವೇರಿ ನದಿ ನೀರು ಸಂರಕ್ಷಣೆ ಮಾಡುವಲ್ಲೂ ಸರ್ಕಾರ ಎಡವಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೀರಿಗೆ ಹಾಹಾಕಾರವಾದರೆ ಸಿಎಂ ಸಿದ್ದರಾಮಯ್ಯ ಹೊಣೆ. ಬೆಂಗಳೂರಿಗೆ ಕುಡಿಯುವ ನೀರಿಲ್ಲ. ಇದನ್ನು ಕೋರ್ಟ್​ಗೆ ಹೇಳಿಲ್ಲ ಎಂದು ಆರೋಪ ಮಾಡಿದರು.

ಕೂಡಲೇ ನೀರು ಬಿಡುವ ನಿರ್ಧಾರ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಮಾಡಲಿದೆ. ರಾಜ್ಯವನ್ನು ಆಳುವ ನೈತಿಕತೆ ಸರ್ಕಾರಕ್ಕೆ ಇಲ್ಲ. ಕಾವೇರಿ ಹೋರಾಟವನ್ನು ಯಾರೇ ಮಾಡಿದರೂ ಅದಕ್ಕೆ ಬಿಜೆಪಿ ಬೆಂಬಲ ಕೊಡುತ್ತದೆ. ತಮಿಳುನಾಡಿಗೆ ಸರ್ಕಾರ ಈಗಾಗಲೇ ದೊಡ್ಡ ಲಾಭ ಮಾಡಿಕೊಟ್ಟಿದೆ. ಹೇಡಿ ನಿರ್ಧಾರ ವಾಪಸ್ ಪಡೆಯುವಂತೆ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ರ್ಯಾಂಡ್ ಬೆಂಗಳೂರು ಎಂದು ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಬ್ರ್ಯಾಂಡ್ ಬೆಂಗಳೂರೋ ಅಥವಾ ಬ್ಯಾಂಡ್ ಬೆಂಗಳೂರೋ ಎನ್ನುವುದು ಮುಂದೆ ಗೊತ್ತಾಗುತ್ತದೆ. ತಮಿಳುನಾಡಿನ ಹಿತ ಕಾಪಾಡಲು ರಾಜ್ಯದ ಹಿತಾಸಕ್ತಿ ಬಲಿಕೊಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಮೊದಲು 10 ಸಾವಿರ ಕ್ಯೂಸೆಕ್ ನೀರು ಹರಿಸಿದಾಗಲೂ ಸುಮ್ಮನಿದ್ದರು. ಎರಡನೇ ಬಾರಿ ಕಾವೇರಿ ನೀರು ಬಿಟ್ಟಾಗ ಸರ್ವಪಕ್ಷಗಳ ಸಭೆ ಕರೆದರು. ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದರೂ ಹಾಕಲಿಲ್ಲ. 32 ಟಿಎಂಸಿ ನೀರಿನ ಬದಲು 67 ಟಿಎಂಸಿ ನೀರನ್ನು ತಮಿಳುನಾಡು ಅಕ್ರಮವಾಗಿ ಬಳಸಿದೆ. ಇದನ್ನು ಕೋರ್ಟ್​ಗೆ ಮನವರಿಕೆ ಮಾಡಿಕೊಟ್ಟಿಲ್ಲ. ಹೀಗಾಗಿ ಪದೇಪದೇ ನೀರು ಬಿಡುವ ಸ್ಥಿತಿ ಬಂದಿದೆ. ರೈತರು ಹೋರಾಟ ಮಾಡಿದರೇ, ಅವರೇ ಕೋರ್ಟ್​​ಗೆ ಹೋಗಬೇಕು ಎಂದರು. ಸುಪ್ರಿಂಕೋರ್ಟ್ ಮುಂದೆ ಸರಿಯಾಗಿ ವಾದ ಮಾಡಿಲ್ಲ ಎಂದರು.

ಇದನ್ನೂ ಓದಿ: ಕಾವೇರಿ ವಿವಾದ; ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ಬಂದ್

ಪ್ರದಾನಿಗೆ ಪತ್ರ ಬರೆದಿದ್ದೇವೆ ಎನ್ನುತ್ತಾರೆ. ರಾಜಕೀಯವಾಗಿ ಇದನ್ನು ಪರಿವರ್ತನೆ ಮಾಡುವ ಯತ್ನ ಮಾಡುತ್ತಿದ್ದಾರೆ. ಇಂಡಿಯಾ ಒಕ್ಕೂಟದಲ್ಲಿ ತಮಿಳುನಾಡು ಮುಖ್ಯಮಂತ್ರಿ ಕೂಡ ಇದ್ದಾರೆ. ಅವರಿಗೆ ಪತ್ರ ಬರೆದು, ಇಲ್ಲಿನ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಸೋನಿಯಾಗಾಂಧಿ ಮಧ್ಯಪ್ರವೇಶ ಮಾಡಬೇಕು. ಮತ್ತೆ ನೀರು ಕೇಳಬೇಡಿ ಎಂದು ಹೇಳಬೇಕು. ಎರಡೂ ರಾಜ್ಯದ ಸಿಎಂ ಕರೆಸಿ ಮಾತನಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಬಿಜೆಪಿ ನಾಯಕರು ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆಗೆ ಮುಂದಾದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ಕಾರಜೋಳ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ