ಕಾವೇರಿ ನೀರು ವಿವಾದ: CWRC ಶಿಫಾರಸ್ಸು ಎತ್ತಿಹಿಡಿದ CWMA, ಕರ್ನಾಟಕಕ್ಕೆ ಮತ್ತೆ ಬರೆ

ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮೇಲಿಂದ ಮೇಲೆ ಹಿನ್ನಡೆಯಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಕುಂಠಿತಗೊಂಡಿದ್ದರಿಂದ ಕಾವೇರಿ ಜಲಾಶದಲ್ಲಿ ನಿರೀಕ್ಷೆಯಷ್ಟು ನೀರು ಸಂಗ್ರಹವಾಗಿಲ್ಲ. ಇದರ ಮಧ್ಯೆ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶಿಸಿದ್ದು, ಇದರ ಬೆನ್ನಲ್ಲೇ ಇದೀಗ CWMA ಸಹ CWRC ಆದೇಶವನ್ನು ಎತ್ತಿ ಹಿಡಿದಿದೆ.

ಕಾವೇರಿ ನೀರು ವಿವಾದ: CWRC ಶಿಫಾರಸ್ಸು ಎತ್ತಿಹಿಡಿದ CWMA, ಕರ್ನಾಟಕಕ್ಕೆ ಮತ್ತೆ ಬರೆ
Cauvery Water
Edited By:

Updated on: Aug 11, 2026 | 5:34 PM

ಮುಖ್ಯಾಂಶಗಳು

  • ಕಾವೇರಿ ನದಿ ನೀರು ವಿವಾದ: CWRC ಶಿಫಾರಸ್ಸು ಎತ್ತಿಹಿಡಿದ CWMA
  • ಸಿಡಬ್ಲ್ಯುಆರ್​ಸಿ 15 ದಿನ 12,000 ನೀರು ಹರಿಸಲು ಸೂಚಿಸಿತ್ತು
  • ಇದನ್ನು ಪ್ರಶ್ನಿಸಿ ಕರ್ನಾಟಕ, ಸಿಡಬ್ಲ್ಯುಎಂಎಗೆ ಮೇಲ್ಮನವಿ ಸಲ್ಲಿಸಿತ್ತು

ನವದೆಹಲಿ, (ಆಗಸ್ಟ್ 11): ತಮಿಳುನಾಡಿಗೆ 12 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ (Karnataka) ಕಾವೇರಿ ನಿರ್ವಹಣಾ ಪ್ರಾಧಿಕಾರ (CWMA) ಸಹ ನಿರ್ದೇಶನ ನೀಡಿದೆ. 15 ದಿನಗಳ ಕಾಲ ನಿತ್ಯ 3500 ಕ್ಯುಸೆಕ್‌ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸೂಚಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ)ಯ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮೇಲ್ಮನವಿ ಸಲ್ಲಿಸಿತ್ತು. ಆದ್ರೆ,  ಸಿಡಬ್ಲ್ಯುಆರ್‌ಸಿ ಆದೇಶವನ್ನು ಈಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕೂಡ ಎತ್ತಿ ಹಿಡಿದಿದೆ. ಆ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಕರ್ನಾಟಕಕ್ಕೆ ಮತ್ತೆ ಗಾಯದ ಮೇಲೆ ಬರೆ ಎಳೆದಿದೆ.

ಸುಪ್ರೀಂಕೋರ್ಟ್​​​​ ಮೆಟ್ಟಿಲೇರಲು ಚಿಂತನೆ

ತಮಿಳುನಾಡಿಗೆ ನಿತ್ಯ 3500 ಕ್ಯುಸೆಕ್‌ ನೀರು ಬಿಡಬೇಕೆಂಬ ಸಿಡಬ್ಲ್ಯುಆರ್‌ಸಿ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದ್ದರಿಂದ ಕರ್ನಾಟಕ ಸರ್ಕಾರ ಸಮಾಧಾನಗೊಂಡಿದ್ದು, CWMA ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದೆ.  ವಾಡಿಕೆಗಿಂತ ಕಡಿಮೆ ಮಳೆ, ಹಾಗೂ ಕರ್ನಾಟಕದ ರೈತರು ಬೆಳೆದ ಬೆಳೆಗೂ ನೀರಿಲ್ಲ ಎನ್ನುವ ಅಂಶಗಳನ್ನಿಟ್ಟುಕೊಂಡು ಸುಪ್ರೀಂಕೋರ್ಟ್​​​​ನಲ್ಲಿ ಪ್ರಬಲ ವಾದ ಮಂಡಿಸಲು ಡಿಕೆ ಶಿವಕುಮಾರ್ ಸರ್ಕಾರ ಮುಂದಾಗಿದ್ದು, ಈ ಸಂಬಂಧ ನಾಳೆ (ಆಗಸ್ಟ 12) ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಲಸಂಪನ್ಮೂಲ ಟೆಕ್ನಿಕಲ್ ಅಡ್ವೈಸರ್ , ಹಿರಿಯ ವಕೀಲರು , ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್​​ ಕೊಟ್ಟ CWRC; ತಮಿಳುನಾಡಿಗೆ ಮುಂದಿನ 15ದಿನ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ

ಕರ್ನಾಟಕದ ಪರ ಭಾಗಿಯಾಗಿದ್ದ ಗೌರವ್ ಗುಪ್ತಾ ಹೇಳಿದ್ದೇನು?

ಇನ್ನು ಸಭೆಯಲ್ಲಿ ಕರ್ನಾಟಕದ ಪರವಾಗಿ ಭಾಗಿಯಾಗಿದ್ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದು,  CWMA ಸಭೆ ಮಗಿದಿದ್ದು, CWRC ಸಭೆ ಶಿಫಾರಸ್ಸುನ್ನು ಆದೇಶವಾಗಿ ಮಾರ್ಪಾಡು ಮಾಡಿದೆ. ಪ್ರತಿ ದಿನ 15 ದಿನಗಳ ಕಾಲ 12 ಸಾವಿರ ಕ್ಯೂಸೆಕ್​​​ ನೀರು ತಮಿಳುನಾಡಿಗೆ ಹರಿಸಬೇಕು ಅಂತಾ ಹೇಳಿದೆ. ಈ ಬಗ್ಗೆ ಸರ್ಕಾರ ಮುಂದೆ ಕಾನೂನು ಹೋರಾಟ ನಡೆಸಲಿದೆ. ತಮಿಳುನಾಡು 40 ಟಿಎಂಸಿ ನೀರಿಗೆ ಬೇಡಿಕೆ ಇಟ್ಟಿದೆ. ನಾವು ಅಷ್ಟು ಪ್ರಮಾಣದ ನೀರು ನಾವು ಬಿಡಲು ಸಾಧ್ಯವಿಲ್ಲ ಅಂತಾ ವಾದ ಮಂಡಿಸಿದ್ದೇವೆ ಎಂದು ಹೇಳಿದರು.
Cauvery Water Dispute: CWRC ಶಿಫಾರಸು ಎತ್ತಿಹಿಡಿದ CWMA! ರಾಜ್ಯಕ್ಕೆ ಅನ್ಯಾಯವಾಗಿದೆ: CS ಗೌರವ್ ಗುಪ್ತಾ!
ಸಿಡಬ್ಲ್ಯುಆರ್​ಸಿ ಶಿಫಾರಸು ಪ್ರಶ್ನಿಸಿ ಸಿಡಬ್ಲ್ಯುಎಂಎಗೆ ಹೋಗಿದ್ದೆವು. ಆದ್ರೆ, ಸಿಡಬ್ಲ್ಯುಆರ್​ಸಿ ಶಿಫಾರಸು ಪಾಲಿಸುವಂತೆ CWMA ಆದೇಶಿಸಿದೆ. 15 ದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
CWMA ಆದೇಶದಿಂದ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. CWMA ಮುಂದೆ ಸಮರ್ಥವಾಗಿ ವಾದ ಮಂಡನೆ ಮಾಡಿದ್ದೆವು. ಆದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಮಳೆ ಪ್ರಮಾಣ ಕಡಿಮೆ ಇರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ . ಸಿಡಬ್ಲ್ಯುಎಂಎ ಆದೇಶದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ರಾಜ್ಯದ ಕಾನೂನು ತಂಡದ ಜೊತೆ ಚರ್ಚೆ ನಡೆಸುತ್ತೇವೆ ಎಂದು ವಿವರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Tue, 11 August 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us