AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water: ನಾಳೆ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ, ಸರ್ವ ಪಕ್ಷದ ನಾಯಕರಿಗೂ ಆಹ್ವಾನ

ತಮಿಳುನಾಡಿಗೆ ಮತ್ತೆ 15 ದಿನ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ನಾಳೆ ಮಧ್ಯಾಹ್ನವೂ ತುರ್ತು ಸಭೆ ಕರೆಯಲಾಗಿದೆ. ಈ ಸಭೆಗೆ ಸರ್ವ ಪಕ್ಷಗಳಲ್ಲಿನ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯರು, ಸಂಸದರಿಗೂ ಆಹ್ವಾನ ನೀಡಲಾಗಿದೆ.

Cauvery Water: ನಾಳೆ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ, ಸರ್ವ ಪಕ್ಷದ ನಾಯಕರಿಗೂ ಆಹ್ವಾನ
ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on: Sep 12, 2023 | 10:16 PM

Share

ಬೆಂಗಳೂರು, ಸೆ.12: ತಮಿಳುನಾಡಿಗೆ ಮತ್ತೆ 15 ದಿನ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ನಾಳೆ ಮಧ್ಯಾಹ್ನವೂ ತುರ್ತು ಸಭೆ ಕರೆಯಲಾಗಿದೆ. ಈ ಸಭೆಗೆ ಸರ್ವ ಪಕ್ಷಗಳಲ್ಲಿನ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯರು, ಸಂಸದರಿಗೂ ಆಹ್ವಾನ ನೀಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ತುರ್ತು ಸಭೆ ಕರೆಯಲಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ಸಂಪುಟದ ಹಿರಿಯ ಸಚಿವರು, ಲೋಕಸಭೆ ಹಾಗೂ ರಾಜ್ಯಸಭಾ ಸದಸ್ಯರಿಗೆ ಆಹ್ವಾನ ನೀಡಲಾಗಿದೆ.

ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆದಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಮಿತಿ ಸಭೆಯಲ್ಲಿ ಮತ್ತೆ 15 ದಿನ 5000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ CWRC ಆದೇಶ ಹೊರಡಿಸಿದೆ. ಆದರೆ, ಈ ನಿರ್ಧಾರಕ್ಕೆ ಕರ್ನಾಟಕದ ಅಧಿಕಾರಿಗಳು ಒಪ್ಪಿಗೆ ಸೂಚಿಸಿಲ್ಲ.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶ

ಇದರ ಬೆನ್ನಲ್ಲೇ, ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ನಾಗೇಂದ್ರ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಎಸಿಎಸ್ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿದಂತೆ ಸಂಬಂಧಪಟ್ಟ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಸದ್ಯಕ್ಕಿಲ್ಲ. ಸದ್ಯಕ್ಕಿಲ್ಲ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿ ಮಾಡಲಾಗಿದೆ. ಕರ್ನಾಟಕ CWRC ಆದೇಶ ಪಾಲಿಸದಿದ್ದರೆ ಮಾತ್ರ ಅದಕ್ಕೂ ಮುನ್ನ ಸಭೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More