AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲ ವಿವಾದ: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್​​ಗೆ ದೂರು; ತಮಿಳುನಾಡಿನಿಂದ ತುರ್ತು ಮನವಿ

ಅಕ್ಟೋಬರ್ 23ರಿಂದ ಕಾವೇರಿ ನೀರು ಹರಿಸಿಲ್ಲ ಎಂದು ಕರ್ನಾಟಕದ ವಿರುದ್ಧ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಸಲ್ಲಿಸಿದ್ದು, ಅರ್ಜಿ ತ್ವರಿತ ವಿಚಾರಣೆಗೆ  ನ್ಯಾಯಾಲಯ ಸಮ್ಮತಿಸಿದೆ.  ಪ್ರವಾಹದ ಕಾರಣದಿಂದ ಜಲಾಶಯಗಳಲ್ಲಿ ಅನಿವಾರ್ಯವಾಗಿ ಹೆಚ್ಚುವರಿ ನೀರು ಸಂಗ್ರಹವಾದ ಕೆಲವೇ ಸಂದರ್ಭಗಳಲ್ಲಿ ಮಾತ್ರ ಕರ್ನಾಟಕ ನೀರು ಬಿಡುಗಡೆ ಮಾಡಿದೆ ಎಂದು ತಮಿಳುನಾಡು ದೂರಿದೆ.

ಕಾವೇರಿ ಜಲ ವಿವಾದ: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್​​ಗೆ ದೂರು; ತಮಿಳುನಾಡಿನಿಂದ  ತುರ್ತು ಮನವಿ
ಸುಪ್ರೀಂ ಕೋರ್ಟ್‌Image Credit source: Getty Images
ಪ್ರಸನ್ನ ಹೆಗಡೆ
|

Updated on:Nov 05, 2026 | 12:41 PM

Share

ನವದೆಹಲಿ, ನವೆಂಬರ್​​ 05: ಅಕ್ಟೋಬರ್ 23ರಿಂದ ಕರ್ನಾಟಕವು ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಮಾಡಿದೆ. ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದ್ದರೂ ಕರ್ನಾಟಕ ನೀರು ಹರಿಸಿಲ್ಲ ಎಂದು ತಮಿಳುನಾಡು ಆರೋಪಿಸಿದೆ. ಇದರಿಂದ ಬೆಳೆ ಬೆಳೆಯಬೇಕಿರುವ ನಾಲ್ಕು ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ಅಪಾಯ ಎದುರಾಗಿದ್ದು, ಸ್ಥಳೀಯ ರೈತರಿಗೆ ತೀವ್ರ ಸಂಕಷ್ಟ ಉಂಟಾಗಬಹುದು ಎಂದು ತಮಿಳುನಾಡು ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

‘ನಾವೀಗ ಎಲ್ಲಿಗೆ ಹೋಗಬೇಕು?’

ಕಾವೇರಿ ನ್ಯಾಯಮಂಡಳಿಯು ನೆರೆಯ ರಾಜ್ಯಕ್ಕೆ ನೀರು ಹಂಚಿಕೆ ಮಾಡುವಂತೆ ನೀಡಿರುವ ಆದೇಶಗಳನ್ನು ಕರ್ನಾಟಕ ನಿರಂತರವಾಗಿ ಉಲ್ಲಂಘಿಸುತ್ತಿದೆ. ಪ್ರವಾಹದ ಕಾರಣದಿಂದ ಜಲಾಶಯಗಳಲ್ಲಿ ಅನಿವಾರ್ಯವಾಗಿ ಹೆಚ್ಚುವರಿ ನೀರು ಸಂಗ್ರಹವಾದ ಕೆಲವೇ ಸಂದರ್ಭಗಳಲ್ಲಿ ಮಾತ್ರ ಕರ್ನಾಟಕ ನೀರು ಬಿಡುಗಡೆ ಮಾಡಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಎದುರು ತಮಿಳುನಾಡು ಸರ್ಕಾರದ ಪರ ವಕೀಲ ಬಿ. ಕರುಣಾಕರನ್ ಆರೋಪಿಸಿದ್ದಾರೆ. ಬೆಳೆ ಬೆಳೆಯಬೇಕಿದ್ದ ನಾಲ್ಕು ಲಕ್ಷ ಹೆಕ್ಟೇರ್ ಭೂಮಿ ಸಂಪೂರ್ಣವಾಗಿ ನಾಶವಾಗಲಿದೆ. ಕರ್ನಾಟಕ ನೀರು ಬಿಡುಗಡೆ ಮಾಡುತ್ತಿಲ್ಲ. ನಾವೀಗ ಎಲ್ಲಿಗೆ ಹೋಗಬೇಕು? ಎಂದವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಪ್ರತಿಬಾರಿಯೂ ತಮಿಳುನಾಡು ಸಮಸ್ಯೆ ಹೇಳುತ್ತಿದೆ’: ಕಾವೇರಿ ಜಲ ವಿವಾದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​

ತಮಿಳುನಾಡು ಮನವಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಈ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ತಮಿಳುನಾಡು ಮಾಡಿರುವ ಮನವಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ರೈತರ ಹಿತಾಸಕ್ತಿ ಕಾಪಾಡಲು ತ್ವರಿತ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಒತ್ತಾಯಿಸುತ್ತಿದ್ದು, ಉಭಯ ರಾಜ್ಯಗಳ ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಂದು ಹಂತಕ್ಕೆ ಈಗ ತಲುಪಿದೆ. ಇದಕ್ಕೂ ಮುನ್ನ, ತಮಿಳುನಾಡು ತನಗೆ ಬರಬೇಕಾದ ಬಾಕಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:40 pm, Thu, 5 November 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ