AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ; ಕಾಂಗ್ರೆಸ್ ಎಂಪಿ ಮಾಣಿಕಂ ಟ್ಯಾಗೋರ್

Cauvery Water Dispute: ತಮಿಳುನಾಡು ಕಾಂಗ್ರೆಸ್ ಸಂಸದ ಮಣಿಕಂ ಟ್ಯಾಗೋರ್ ಕಾವೇರಿ ವಿವಾದ ಕುರಿತು ಮಾತನಾಡಿದ್ದು, ತಮಿಳುನಾಡಿನ ರಾಜಕೀಯ ಪಕ್ಷಗಳ ಕಚ್ಚಾಟ ಹೆಚ್ಚುತ್ತಿರುವುದು ವಿಷಾದ. ಆಂತರಿಕ ರಾಜಕೀಯ ಬದಿಗಿಟ್ಟು, ಕರ್ನಾಟಕ ಮತ್ತು ತಮಿಳುನಾಡು ಸಿಎಂ ನೇರ ಮಾತುಕತೆ ಇದಕ್ಕೆ ಪರಿಹಾರ ಎಂದು ಹೇಳಿದ್ದಾರೆ.

ಕಾವೇರಿ ವಿವಾದ: ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ; ಕಾಂಗ್ರೆಸ್ ಎಂಪಿ ಮಾಣಿಕಂ ಟ್ಯಾಗೋರ್
ಮಾಣಿಕಂ ಟ್ಯಾಗೋರ್Image Credit source: tv9 kannada
ಹರೀಶ್ ಜಿ.ಆರ್​.
| Edited By: |

Updated on: Aug 02, 2026 | 3:58 PM

Share

ಬೆಂಗಳೂರು, ಆಗಸ್ಟ್​​ 02: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹರಿಸುವಂತೆ CWMA ನೀಡಿರುವ ಆದೇಶಕ್ಕೆ ಸದ್ಯ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್​​, ‘ತಮಿಳುನಾಡು ಮತ್ತು ಕರ್ನಾಟಕ ಭಾರತ-ಪಾಕಿಸ್ತಾನವಲ್ಲ, ಕರ್ನಾಟಕ ಸಿಎಂ ಜತೆ ತಮಿಳುನಾಡು ಸಿಎಂ ಚರ್ಚಿಸುವುದೇ ಪರಿಹಾರ’ ಎಂದು ಹೇಳಿದ್ದಾರೆ.

ತಮಿಳುನಾಡಿನ ಹಿತಾಸಕ್ತಿಯೇ ಮುಖ್ಯ: ಮಾಣಿಕಂ ಟ್ಯಾಗೋರ್​​

ಕಾವೇರಿ ನೀರು ಹಂಚಿಕೆ ವಿಚಾರ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಜಟಾಪಟಿ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದ ಮುಖ್ಯಮಂತ್ರಿಗೆ ತಮ್ಮ ರಾಜ್ಯದ ಹಿತಾಸಕ್ತಿ ಹೇಗೆ ಮುಖ್ಯವೋ, ಅದೇ ರೀತಿ ನಮಗೆ ತಮಿಳುನಾಡಿನ ಹಿತಾಸಕ್ತಿಯೇ ಅತ್ಯಂತ ಮುಖ್ಯ’ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಒಗ್ಗಟ್ಟು, ತಮಿಳುನಾಡಿನಲ್ಲಿ ಭಿನ್ನಮತ

‘ಕಾವೇರಿ ವಿಷಯಕ್ಕೆ ಬಂದರೆ ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ನಾಯಕರು ಒಂದಾಗಿ ನಿಲ್ಲುತ್ತಾರೆ. ಆದರೆ ತಮಿಳುನಾಡಿನಲ್ಲಿ ರಾಜಕೀಯ ಪಕ್ಷಗಳು ಪ್ರತ್ಯೇಕವಾಗಿ ನ್ಯಾಯಾಲಯದ ಮೊರೆ ಹೋಗುತ್ತಿವೆ. ಈಗಾಗಲೇ ತಮಿಳುನಾಡು ವಿಧಾನಸಭೆಯಲ್ಲಿ ಎಲ್ಲಾ ಪಕ್ಷಗಳು ಒಮ್ಮತದಿಂದ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸಿವೆ. ಹೀಗಿರುವಾಗ ಈಗ ಮತ್ತೆ ಸರ್ವಪಕ್ಷ ಸಭೆ ಕರೆಯಬೇಕೆಂದು ಕೇಳುತ್ತಿರುವುದು ಏಕೆ’ ಎಂದು ಅವರು ಪ್ರಶ್ನಿಸಿದ್ದಾರೆ.

ತಮಿಳುನಾಡಿನ ರಾಜಕೀಯ ಪಕ್ಷಗಳ ಕಚ್ಚಾಟ

‘ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡಿಗೆ ನೀರು ತರುವುದಕ್ಕಿಂತ ಹೆಚ್ಚಾಗಿ ರಾಜ್ಯದ ಒಳಗಿನ ಆಂತರಿಕ ರಾಜಕೀಯವೇ ಜಾಸ್ತಿಯಾಗಿದೆ. ತಮಿಳುನಾಡಿನ ರಾಜಕೀಯ ಪಕ್ಷಗಳ ನಡುವಿನ ಕಚ್ಚಾಟ ಹೆಚ್ಚುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: Cauvery Water Dispute: ‘ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ, ಆದರೆ ಡ್ಯಾಂ ತುಂಬುವ ಹಂತದಲ್ಲಿದೆ’ ಎಂದ ಡಿ.ಕೆ ಶಿವಕುಮಾರ್

ಇನ್ನು ಮಾಜಿ ಮುಖ್ಯಮಂತ್ರಿ ಎಂ.ಜಿ.ಆರ್. ಅವರ ಹಾದಿಯಲ್ಲೇ ಪ್ರಸ್ತುತ ತಮಿಳುನಾಡು ಸಿಎಂ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ಮತ್ತು ತಮಿಳುನಾಡು ಸಿಎಂ ವಿಜಯ್​​ ಮಾತುಕತೆಗೆ ತಮಿಳುನಾಡು ಕಾಂಗ್ರೆಸ್​​ನ ಸಂಪೂರ್ಣ ಬೆಂಬಲವಿದೆ’ ಎಂದಿದ್ದಾರೆ.

ರಾಹುಲ್ ಗಾಂಧಿ ತಮಿಳುನಾಡಿಗೆ ಬಂದ ತಕ್ಷಣ ನೀರು ಬಂದಿದೆ: ಮಾಣಿಕಂ ಟ್ಯಾಗೋರ್​​

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಗ್ಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ತಮಿಳುನಾಡಿಗೆ ಭೇಟಿ ನೀಡಿದ ತಕ್ಷಣವೇ ನೀರು ಬಂದಿದೆ. ಅವರು ಮತ್ತೆ ರಾಜ್ಯಕ್ಕೆ ಬಂದಾಗ ಇನ್ನೂ ಹೆಚ್ಚಿನ ಮಳೆಯಾಗಲಿದೆ’ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್