ಕಾಂಗ್ರೆಸ್ ಸರ್ಕಾರ ಕನ್ನಡ ಭಾವನೆಗಳನ್ನು ದಮನ ಮಾಡಬಾರದು: ಹೆಚ್​ಡಿ ಕುಮಾರಸ್ವಾಮಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕೆಲವೆಡೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಬಂದೋ ಬಸ್ತ್ ಕೈಗೊಳ್ಳಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿದ ಹೆಚ್​ಡಿ ಕುಮಾರಸ್ವಾಮಿ, ಇಂದಿನ ಬಂದ್​ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಕನ್ನಡ ಭಾವನೆಗಳನ್ನು ದಮನ ಮಾಡಬಾರದು: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ
Edited By:

Updated on: Sep 29, 2023 | 3:09 PM

ಬೆಂಗಳೂರು, ಸೆ.29: ಕಾಂಗ್ರೆಸ್ ಸರ್ಕಾರ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದರು. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕಾವೇರಿ (Cauvery) ನಮ್ಮದು ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

ಕಾವೇರಿಗಾಗಿ ಬಂದ್​ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್​ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ನಾಡು, ನುಡಿ, ನೆಲ, ಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ ಹಾಗೂ ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಘಂಟೆ ಆಗಬೇಕು ಎಂದರು.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ಇದನ್ನೂ ಓದಿ: ಕಾವೇರಿ ನೀರು ಸಂಕಷ್ಟ ಸೂತ್ರ ರೆಡಿ ಮಾಡ್ತೇವೆ, ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ: ಡಿಕೆ ಶಿವಕುಮಾರ್

ಕರ್ನಾಟಕ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿ ವಿವಿಧ ಜಿಲ್ಲೆಗಳಲ್ಲಿ ನೀರಿನ ಅಭಾವ ಎದುರಾಗಿದೆ. ರಾಜ್ಯದ ಸ್ಥಿತಿ ಹೀಗಿದ್ದರೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ ತಮಿಳುನಾಡಿಗೆ ನೀರು ಹರಿಸುತ್ತಲೇ ಇದೆ. ಇಂಡಿಯಾ ಮೈತ್ರಿ ಕೂಟ ರಕ್ಷಣೆಗಾಗಿ ನೀರು ಹರಿಬಿಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ.

ಇದು ಒಂದೆಡೆಯಾದರೆ, ಮತ್ತೊಂದೆಡೆ ಕಾವೇರಿ ಪ್ರತಿಭಟನೆಯ ಕಿಚ್ಚು ಜೋರಾಗಿಯೇ ಇದೆ. ರೈತರು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಒಟ್ಟುಗೂಡಿ ಇಂದು ಕರ್ನಾಟಕ ಬಂದ್​ ನಡೆಸುತ್ತಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕೆಲವಡೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Fri, 29 September 23