ಕಾವೇರಿ ವಿವಾದ: ಮತ್ತೆ ಸುಪ್ರಿಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ​ ರಾಜ್ಯ ಸರ್ಕಾರ

ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದರು. ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಅರ್ಜಿ ಸಲ್ಲಿಸಲು ನಿರ್ಧರಿಸಿದೆ.

ಕಾವೇರಿ ವಿವಾದ: ಮತ್ತೆ ಸುಪ್ರಿಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ​ ರಾಜ್ಯ ಸರ್ಕಾರ
ವಿಧಾನಸೌಧ
Edited By: ವಿವೇಕ ಬಿರಾದಾರ

Updated on: Sep 30, 2023 | 9:31 AM

ಬೆಂಗಳೂರು ಸೆ.30: ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ (CWMA) ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ (Supreme court) ಮರು ಪರಿಶೀಲನೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿ, ನಿಮ್ಮ ಸಮಸ್ಯೆ ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಅಂತ ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನ ಕೋರ್ಟ್​ಗೆ ಸಲ್ಲಿಸಿ ಎಂದು ಸಲಹೆ ನೀಡಿದರು.

ಅಲ್ಲದೆ ತಮಿಳುನಾಡಿನ ಡ್ಯಾಂ ನೀರು ಮತ್ತು ಅವರು ಎಷ್ಟು ಎಕರೆಯಲ್ಲಿ ಕೃಷಿ ಮಾಡುತ್ತಿದ್ದಾರೆ ಎಂಬುವುದರ ಬಗ್ಗೆ ನ್ಯಾಯಾಲಯದ ಗಮನಕ್ಕೆ ತನ್ನಿ. ನದಿ ಹುಟ್ಟುವ ರಾಜ್ಯಕ್ಕೆ ಅಧಿಕಾರ ಜಾಸ್ತಿ. ಇದನ್ನು ಪ್ರತಿಪಾದಿಸಿ. ಕೋರ್ಟ್​ಲ್ಲಿ ಪ್ರಕರಣ ಇರುವಾಗ ಬಹಿರಂಗ ಹೇಳಿಕೆ ಕೊಡಬೇಡಿ. ಸಂಕಷ್ಟ ಸೂತ್ರಕ್ಕೆ ಒತ್ತಾಯಿಸಿ. ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂಕೋರ್ಟ್​​ಲ್ಲಿ ಒತ್ತಾಯ ಮಾಡಿ ಎಂದು ತಜ್ಞರು ಸಿಎಂಗೆ ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ಪ್ರಾಧಿಕಾರದ ಆದೇಶ ವಿರುದ್ಧ ಭುಗಿಲೆದ್ದ ಆಕ್ರೋಶ; ಶನಿವಾರ ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ಸಭೆ

ಕಾವೇರಿ ವಿಚಾರದಲ್ಲಿ ನೀವು ರಾಜಕೀಯ ಫೈಟ್ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ ಹೋಗಿ. ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ ಅಂಶಗಳನ್ನ ಹೊರಗಡೆ ಹೇಳುವುದು ಬೇಡ ಎಂದು ನ್ಯಾಯಮೂರ್ತಿಗಳು ಹಾಗೂ ವಕೀಲರು ಸಲಹೆ ನೀಡಿದರು.

ನ್ಯಾಯಮೂರ್ತಿಗಳ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮತ್ತು ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದರು. ಸಭೆಯಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:29 am, Sat, 30 September 23

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us