ಮತ್ತೆ ಶುರುವಾಯ್ತು ಕಾವೇರಿ ನದಿ ನೀರಿಗಾಗಿ ಬಡಿದಾಟ: ಎಲ್ಲರ ಚಿತ್ತ ಸುಪ್ರೀಂಕೋರ್ಟ್​ ನತ್ತ

Cauvery water dispute: ಕಾವೇರಿ ನದಿ ನೀರು ಬಿಡುಗಡೆ ಆಗ್ರಹಿಸಿ ತಮಿಳುನಾಡು ಸುಪ್ರೀಂ ಮೆಟ್ಟಿಲೇರಿದೆ. ರಾಜ್ಯದ ವಸ್ತುಸ್ಥಿತಿ ವಿವರಿಸಲು ರಾಜ್ಯ ಸರ್ಕಾರವೂ ಇಂದು ಮೇಲ್ಮನವಿ ಸಲ್ಲಿಸಲಿದೆ. ಹೀಗಾಗಿ ಎರಡು ರಾಜ್ಯಗಳು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಎಲ್ಲರ ಚಿತ್ತ ಕೋರ್ಟ್​ನತ್ತ ನೆಟ್ಟಿದೆ.

ಮತ್ತೆ ಶುರುವಾಯ್ತು ಕಾವೇರಿ ನದಿ ನೀರಿಗಾಗಿ ಬಡಿದಾಟ: ಎಲ್ಲರ ಚಿತ್ತ ಸುಪ್ರೀಂಕೋರ್ಟ್​ ನತ್ತ
ಸುಪ್ರೀಂಕೋರ್ಟ್
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on: Aug 21, 2023 | 10:30 AM

ನವದೆಹಹಲಿ/ಬೆಂಗಳೂರು, ಆಗಸ್ಟ್ 21): ಕಾವೇರಿ ನದಿ ನೀರಿಗಾಗಿ(Cauvery water) ಮತ್ತೆ ತಮಿಳುನಾಡು(Tamil Nadu) ಸರ್ಕಾರ ಕ್ಯಾತೆ ತೆಗೆದಿದ್ದು, ಕಾವೇರಿ ನದಿ ನೀರು ಬಿಡುಗಡೆ ಆಗ್ರಹಿಸಿ ತಮಿಳುನಾಡು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ತುರ್ತು ವಿಚಾರಣೆಗೆ ಇಂದು ಸಿಜೆಐ ಪೀಠದ ಮುಂದೆ ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅರ್ಜಿ ಪ್ರಸ್ತಾಪಿಲು ಸಿದ್ಧತೆ ನಡೆಸಿದ್ದಾರೆ. ಇತ್ತ ರಾಜ್ಯ ಸರ್ಕಾರವು ಸಹ ಕರ್ನಾಟಕದಲ್ಲಿನ ನೀರಿನ ವಸ್ತುಸ್ಥಿತಿ ವಿವರಿಸಲು ಇಂದು (ಆಗಸ್ಟ್ 21) ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಿದೆ. ಕರ್ನಾಟಕದ ವಾಸ್ತವ ಪರಿಸ್ಥಿತಿ ಮನವರಿಕೆಗೆ ಮಾಡಿಕೊಡಲು ತಯಾರಿ ನಡೆದಿವೆ. ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಮಳೆ ಕೊರತೆ , ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಬಗ್ಗೆ ಮಾಹಿತಿ, ಹಾಗೂ ಡ್ಯಾಂಗಳಲ್ಲಿ ನೀರಿನ ಕೊರತೆ ಬಗ್ಗೆ ಕರ್ನಾಟಕ ಪರ ವಕೀಲ ಶ್ಯಾಮ್ ದಿವಾನ್​​ ವಾದ ಮಂಡಿಸಲಿದ್ದಾರೆ.

ಕಳೆದ ಆಗಸ್ಟ್​​​​​ 14 ರಂದು ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದ ತಮಿಳುನಾಡು, ಹಾಲಿ ಇರೋ ಬೆಳೆಗಳ ರಕ್ಷಣೆಗಾಗಿ ನಿತ್ಯ 24 ಸಾವಿರ ಕ್ಯುಸೆಕ್​​​​​​​​ ಕಾವೇರಿ ನದಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರ ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಸಿತ್ತು.. ಸುಪ್ರೀಂ ಸೂಚನೆಯಂತೆ ಕೆಆರ್​​ಎಸ್​​​​ ಡ್ಯಾಂನಿಂದ ನೀರನ್ನ ಹರಿಬಿಡಲಾಗಿತ್ತು. ಆದ್ರೆ, ಇದೀಗ ಕೆಆರ್​ಎಸ್​ನಲ್ಲಿ ನೀರಿನ ಕೊರತೆ ಎದುರಾಗಿದೆ. ಹೀಗಾಗಿ ನೀರಿಗಾಗಿ ಎರಡು ರಾಜ್ಯಗಳು ಸುಪ್ರೀಂಕೋರ್ಟ್​ನಲ್ಲಿ ವಾದ ಮಂಡಿಸಲಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಪು ನೀಡಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾವೇರಿ ನೀರಿನ ಕಿಚ್ಚು, ಮಂಡ್ಯದಲ್ಲಿ ಇಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕೆಆರ್​ಎಸ್ ಜಲಾಶಯದ ನೀರಿನ ಮಟ್ಟ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್ ಎಸ್ ಜಲಾಶಯದ ನೀರಿನ ಮಟ್ಟ 105 ಅಡಿಗೆ ಕುಸಿದಿದೆ. ಜಲಾಶಯದ ಗರಿಷ್ಟಮಟ್ಟ 124.80 ಅಡಿ ಇದ್ದು, ಸದ್ಯ ಜಲಾಶಯದ ನೀರಿನ ಮಟ್ಟ 105.70 ಅಡಿ ಇದೆ. ಒಳ ಹರಿವು 4983 ಕ್ಯೂಸೆಕ್ ಇದ್ದು, ಹೊರ ಹರಿವು 15,247 ಕ್ಯೂಸೆಕ್ ಇದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ