ಕರ್ನಾಟಕದೊಂದಿಗೆ ನೇರ ಮಾತುಕತೆ ಬೇಡ: ಸಿಎಂ ವಿಜಯ್​​​​ಗೆ ಪಳನಿಸ್ವಾಮಿ ಸಲಹೆ

Cauvery Water Dispute: ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕದೊಂದಿಗೆ ನೇರ ಮಾತುಕತೆ ಬೇಡ ಎಂದು ತಮಿಳುನಾಡು ಸಿಎಂ ವಿಜಯ್​​​​ಗೆ ಮಾಜಿ ಸಿಎಂ ಪಳನಿಸ್ವಾಮಿ ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಕೂಡ ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದೊಂದಿಗೆ ನೇರ ಮಾತುಕತೆ ಬೇಡ: ಸಿಎಂ ವಿಜಯ್​​​​ಗೆ ಪಳನಿಸ್ವಾಮಿ ಸಲಹೆ
ಸಿಎಂ ವಿಜಯ್​, ಮಾಜಿ ಸಿಎಂ ಪಳನಿಸ್ವಾಮಿ
Image Credit source: google
Edited By:

Updated on: Jul 31, 2026 | 4:45 PM

ಮುಖ್ಯಾಂಶಗಳು

  • ಸಿಎಂ ವಿಜಯ್​​​​ಗೆ ಪಳನಿಸ್ವಾಮಿ ಸಲಹೆ
  • ಕಾವೇರಿ, ಮೇಕೆದಾಟು ಯೋಜನೆಯಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದ ಮಾಜಿ ಸಿಎಂ
  • ರಾಜ್ಯ ಸರ್ಕಾರದ ವಿರುದ್ಧವೂ ಪಳನಿಸ್ವಾಮಿ ವಾಗ್ದಾಳಿ 

ಬೆಂಗಳೂರು, ಜುಲೈ 31: ‘ಕಾವೇರಿ ನೀರು ಹಂಚಿಕೆ (Cauvery water Dispute) ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದೊಂದಿಗೆ ನೇರ ಮಾತುಕತೆ ಬೇಡ. ಮಾತುಕತೆ ನಡೆಸುವುದರಿಂದ ತಮಿಳುನಾಡಿಗೆ ಹಿನ್ನಡೆ ಆಗುತ್ತದೆ’ ಎಂದು ಸಿಎಂ ವಿಜಯ್​ಗೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ (Edappadi K. Palaniswami) ಸಲಹೆ ನೀಡಿದ್ದಾರೆ.

ಕಾವೇರಿ, ಮೇಕೆದಾಟು ಯೋಜನೆಯಲ್ಲಿ ರಾಜೀ ಮಾಡಿಕೊಳ್ಳಬಾರದು: ಪಳನಿಸ್ವಾಮಿ

ಸೇಲಂನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಡಪ್ಪಾಡಿ ಕೆ. ಪಳನಿಸ್ವಾಮಿ, ‘ಕರ್ನಾಟಕ ಸರ್ಕಾರದೊಂದಿಗೆ ಸಿಎಂ ಜೋಸೆಫ್ ನೇರ ಮಾತುಕತೆ ನಡೆಸುವುದು ಬೇಡ, ಇದರಿಂದ ತಮಿಳುನಾಡಿಗೆ ರಾಜಕೀಯ ಹಾಗೂ ಕಾನೂನಾತ್ಮಕವಾಗಿ ಹಿನ್ನಡೆಯಾಗಲಿದೆ. ಕೋರ್ಟ್ ಆದೇಶದ ಮೂಲಕವೇ ಕಾವೇರಿ ನೀರು ಪಡೆದುಕೊಳ್ಳಬೇಕೆ ಹೊರತು ಮಾತುಕತೆಯಿಂದಲ್ಲ. ಕಾವೇರಿ ನೀರು ಹಾಗೂ ಮೇಕೆದಾಟು ಯೋಜನೆಯಲ್ಲಿ ಯಾವುದೇ ರಾಜೀ ಮಾಡಿಕೊಳ್ಳಬಾರದು. ತಮಿಳುನಾಡು ಸಿಎಂ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ’ ಆಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಪಳನಿಸ್ವಾಮಿ ವಾಗ್ದಾಳಿ 

ಕರ್ನಾಟಕ ಸರ್ಕಾರದ ಧೋರಣೆ ವಿರುದ್ಧ ವಾಗ್ದಾಳಿ ಮಾಡಿದ ಎಡಪ್ಪಾಡಿ ಕೆ. ಪಳನಿಸ್ವಾಮಿ, ‘ತಮಿಳುನಾಡು ಮುಖ್ಯಮಂತ್ರಿಗೆ ಕರ್ನಾಟಕಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿ, ಹೆಲಿಕಾಪ್ಟರ್ ವ್ಯವಸ್ಥೆ ಮಾಡುವುದಾಗಿ ಹೇಳಿರುವ ಕರ್ನಾಟಕ ಸರ್ಕಾರದ ಆಫರ್‌ನಿಂದ ತಮಿಳುನಾಡಿಗೆ ಯಾವುದೇ ಪ್ರಯೋಜನವಿಲ್ಲ. ಕರ್ನಾಟಕಕ್ಕೆ ಭೇಟಿ ನೀಡುವ ಆಹ್ವಾನ ಎಂದರೆ ತಮಿಳುನಾಡಿಗೆ ನೀರು ನೀಡುವುದಿಲ್ಲ ಎಂದೇ ಅರ್ಥ’ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆ ಶಿವಕುಮಾರ್, ಕಾರಣವೇನು?

‘ತಮಿಳುನಾಡಿನ 20 ಜಿಲ್ಲೆಗಳಿಗೆ ಕಾವೇರಿ ನದಿಯೇ ಮುಖ್ಯ ಕುಡಿಯುವ ನೀರಿನ ಆಧಾರವಾಗಿದೆ. ಒಂದು ವೇಳೆ ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ತಮಿಳುನಾಡಿನ ಫಲವತ್ತಾದ ಡೆಲ್ಟಾ ಜಿಲ್ಲೆಗಳು ಸಂಪೂರ್ಣವಾಗಿ ಮರುಭೂಮಿಯಾಗಲಿವೆ. ಆದರೆ ಕರ್ನಾಟಕ ಸರ್ಕಾರ ಹಾಗೂ ಡಿಕೆ ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಕೈಬಿಡುವುದಿಲ್ಲ, ಅಣೆಕಟ್ಟು ಕಟ್ಟೇ ತೀರುತ್ತೇವೆ ಎಂದು ಹೇಳುತ್ತಿರುವುದು ತಮಿಳುನಾಡಿನ ರೈತರ ಹಿತಾಸಕ್ತಿಗೆ ಮಾರಕವಾಗಿದೆ. ಆದ್ದರಿಂದ ತಮಿಳುನಾಡು ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣವೇ ಮರುಪರಿಶೀಲಿಸಬೇಕು’ ಎಂದು ಒತ್ತಾಯಿಸಲಾಗಿದೆ.

ತಕ್ಷಣವೇ ಸರ್ವಪಕ್ಷ ಸಭೆ ಕರೆಯಬೇಕು ಎಂದ ಪಳನಿಸ್ವಾಮಿ 

‘ಇನ್ನು ತಮಿಳುನಾಡಿನ ರೈತರ ಹಕ್ಕನ್ನು ಕಾಪಾಡಲು ರಾಜ್ಯದಲ್ಲಿ ತಕ್ಷಣವೇ ಸರ್ವಪಕ್ಷ ಸಭೆ ಕರೆಯಬೇಕು ಮತ್ತು ಡೆಲ್ಟಾ ಭಾಗದ ಮುಖ್ಯ ರೈತ ಸಂಘಟನೆಗಳನ್ನೂ ಈ ಸಭೆಗೆ ಆಹ್ವಾನಿಸಬೇಕು ಎಂದು ಎಡಪ್ಪಾಡಿ ಕೆ. ಪಳನಿಸ್ವಾಮಿ ಆಗ್ರಹಿಸಿದ್ದಾರೆ. ಮೇಕೆದಾಟು ಹಾಗೂ ಕಾವೇರಿ ವಿಷಯದಲ್ಲಿ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಬೇಕು ಹಾಗೂ ಕಾವೇರಿ ನೀರಿಗಾಗಿ ಕಾನೂನು ಹೋರಾಟದ ಜೊತೆಗೆ ರಾಜಕೀಯ ಒತ್ತಡವನ್ನು ತರಲು ಎಐಎಡಿಎಂಕೆ ಒತ್ತಾಯಿಸಿದೆ.’

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Fri, 31 July 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us