AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ತಮಿಳುನಾಡಿನ ಆಕ್ಷೇಪಣೆಗೆ ಅಫಿಡವಿಟ್ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಿದೆ.  ತಮಿಳುನಾಡಿನಲ್ಲಿ ನೀರಿನ ಕೊರತೆ ಇದೆ. 4.5 ಲಕ್ಷ ಎಕರೆ ಬೆಳೆಗಳಿಗೆ ನೀರಿನ ಅಗತ್ಯವಿದೆ ಎಂದು ತಮಿಳುನಾಡು ವಾದಿಸಿದ್ದು, CWMA ಆದೇಶ ಪಾಲನೆಯಾಗುತ್ತಿಲ್ಲ ಎಂದು ಆಕ್ಷೇಪ ಕೂಡ ವ್ಯಕ್ತಪಡಿಸಿತ್ತು.

ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
CWMA ಆದೇಶ ಪಾಲನೆ ಮುಂದುವರಿಸಲು ಸುಪ್ರೀಂಕೋರ್ಟ್ ಸೂಚನೆ Image Credit source: PTI
ಪ್ರಸನ್ನ ಹೆಗಡೆ
|

Updated on:Sep 24, 2026 | 12:42 PM

Share

ನವದೆಹಲಿ, ಸೆಪ್ಟೆಂಬರ್​ 24: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕ್ಕೆ ಸೂಚನೆ ನೀಡಿದೆ. ಜೊತೆಗೆ ತಮಿಳುನಾಡಿನ ಆಕ್ಷೇಪಕ್ಕೆ ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸಲು ತಿಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿಕೆ ಮಾಡಿದೆ. ಕರ್ನಾಟಕ ಎಲ್ಲಾ ನೀರನ್ನು ಬಳಸಿಕೊಳ್ಳುತ್ತಿದೆ ಎಂದು ತಮಿಳುನಾಡು ಆರೋಪಿಸಿದರೆ, ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ ಎಂದು ಕರ್ನಾಟಕ ಕೋರ್ಟ್​​ ಗಮನಕ್ಕೆ ತಂದಿದೆ.

ಕರ್ನಾಟಕದ ವಾದವೇನು?

ಮಳೆ ಕೊರತೆಯಿಂದ ಡ್ಯಾಮ್​​​ಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ . ಕಳೆದ ವರ್ಷ ಇದೇ ಸಮಯದಲ್ಲಿ 81 ಟಿಎಂಸಿ ನೀರಿತ್ತು ಈ ವರ್ಷ ನೀರಿನ ಒಳಹರಿವಿನಲ್ಲಿ ಕೊರತೆ ಇದೆ . ಕರ್ನಾಟಕದಲ್ಲಿ ಮುಂಗಾರು ವಿಫಲವಾಗಿದ್ದು, ಬರ ಘೋಷಣೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಇದೆ. ಹೀಗಾಗಿ ನೀರು ಬಿಡುಗಡೆ ಮಾಡುವಂತೆ CWMA ಆದೇಶಕ್ಕೆ ಕರ್ನಾಟಕದ ವಿರೋಧವಿದೆ. ಬರ ಪರಿಸ್ಥಿತಿಯಲ್ಲಿ CWMA ಆದೇಶ ಪಾಲನೆ ಕಷ್ಟ ಎಂದು ಕರ್ನಾಟಕ ವಾದಿಸಿದೆ. ಕಾವೇರಿ ಜಲಾನಯನ ಪ್ರದೇಶದಲ್ಲೇ ನೀರಿನ ಕೊರತೆ ಇದೆ. ಹೀಗಾಗಿ ಕುಡಿಯುವ ನೀರು, ಪರಿಸರ, ಕೈಗಾರಿಕೆಗಳ ಅಗತ್ಯ ಪರಿಗಣಿಸಿ ಹೆಚ್ಚುವರಿ ನೀರಿಗೆ ತಮಿಳುನಾಡು ಬೇಡಿಕೆಯ ಅರ್ಜಿ ವಜಾಕ್ಕೆ ಮನವಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ CWMAಗೆ ಕರ್ನಾಟಕ ಮೇಲ್ಮನವಿ

ತಮಿಳುನಾಡಿನ ವಾದವೇನು?

ತಮಿಳುನಾಡಿನಲ್ಲಿ ನೀರಿನ ಕೊರತೆ ಇದೆ. 4.5 ಲಕ್ಷ ಎಕರೆ ಬೆಳೆಗಳಿಗೆ ನೀರಿನ ಅಗತ್ಯವಿದೆ ಎಂದು ತಮಿಳುನಾಡು ವಾದಿಸಿದ್ದು, CWMA ಆದೇಶ ಪಾಲನೆಯಾಗುತ್ತಿಲ್ಲ ಎಂದು ಆಕ್ಷೇಪ ಕೂಡ ವ್ಯಕ್ತಪಡಿಸಿದೆ. ನೀರಿನ ಕೊರತೆಯಿಂದಾಗಿ ನಾವು ಈಗಾಗಲೇ ಪೂರ್ವೈ ಬೆಳೆಯನ್ನು ಕಳೆದುಕೊಂಡಿದ್ದೇವೆ. ಪ್ರಮಾಣಾನುಗುಣವಾಗಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ತೀರ್ಪಿನ ಜಾರಿಗೆ ನಾವು ಒತ್ತಾಯಿಸುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವರದಿ: ನಟರಾಜ್​​, ಟಿವಿ9 ನವದೆಹಲಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:24 pm, Thu, 24 September 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More