Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ನೀರು ವಿವಾದ: ಸೆ.1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​

Cauvery water dispute: ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಆಗಸ್ಟ್ 25) ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ(ಸೆಪ್ಟೆಂಬರ್ 01) ಮುಂದೂಡಿದೆ. ಅಲ್ಲದೇ ಅಷ್ಟರೊಳಗೆ ಮಧ್ಯಂತರ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿವಾದ: ಸೆ.1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​
ಸುಪ್ರಿಂ ಕೋರ್ಟ್​
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on:Aug 25, 2023 | 1:08 PM

ನವದೆಹಲಿ, (ಆಗಸ್ಟ್ 25): ಕಾವೇರಿ ನೀರಿಗಾಗಿ(Cauvery water dispute) ತಮಿಳುನಾಡು (Tamil Nadu) ಸಲ್ಲಿಸಿದ್ದ ಅರ್ಜಿಯನ್ನು ಇಂದು (ಆಗಸ್ಟ್ 25) ಸುಪ್ರೀಂಕೋರ್ಟ್ (supreme court) ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ(ಸೆಪ್ಟೆಂಬರ್ 01) ಮುಂದೂಡಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ . ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಅಭಿಪ್ರಾಯ ಪಟ್ಟಿದ್ದು, ಈ ಮಧ್ಯಂತರ ಅವಧಿಯಲ್ಲಿ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಮೊದಲಿಗೆ ವಾದ ಆರಂಭಿಸಿದ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ 40 ಟಿಎಂಸಿ ನೀರು ಬಿಡುತ್ತಿಲ್ಲ. ಅಲ್ಲದೇ 15 ದಿನಗಳು 10 ಸಾವಿರ ಕ್ಯೂಸೆಕ್ ನೀರು ಬಿಡಲು CWMA ಆದೇಶ ನೀಡಿತ್ತು. ಇದು ಮುಂದಿನ 20 ದಿನಗಳಿಗೆ ಮುಂದುವರೆಯಬೇಕು ಸುಪ್ರೀಂಕೋರ್ಟ್​ ತ್ರೀಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.

ಇದನ್ನೂ ಓದಿ: ತಮಿಳುನಾಡಿಗೆ ಹರಿಸುತ್ತಿರುವ ನೀರಿನ ಪ್ರಮಾಣ ಕಡಿಮೆ ಮಾಡಿದ ರಾಜ್ಯ ಸರ್ಕಾರ, ಆದರೂ ಎಷ್ಟು ನೀರು ಹರಿಯುತ್ತಿದೆ ಗೊತ್ತಾ? 

ಕರ್ನಾಟಕ ಪರ ಶ್ಯಾಮ ದಿವಾನ್ ವಾದ

ಮಳೆ ಪ್ರಮಾಣ ಕಡಿಮೆ ಇದೆ. ಹೀಗಾಗಿ ನೀರಿನ ಪ್ರಮಾಣ ತುಂಬಾ ಕಡಿಮೆ ಇದೆ. ಈ ವಿಚಾರವನ್ನು ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಹೇಳಲು ಪ್ರಯತ್ನಿಸಿದಾಗ ತಮಿಳುನಾಡು ಸರ್ಕಾರದ ಅಧಿಕಾರಿಗಳು ಕೇಳದೆ ಸಭೆಯಿಂದ ಹೊರನಡೆದಿದ್ದಾರೆ ಎಂದು ಕರ್ನಾಟಕ ಪರ ಶ್ಯಾಮ ದಿವಾನ್ ವಾದ ಮಂಡಿಸಿದರು. ಎರಡೂ ರಾಜ್ಯಗಳ ಪರ ವಕೀಲರ ವಾದ -ಪ್ರತಿವಾದ ಆಲಿಸಿದ ಸುಪ್ರೀಕೋರ್ಟ್​ ತ್ರಿಸದಸ್ಯ ಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿತು.

ಸೋಮವಾರವೇ ಸಭೆ ಕರೆಯಲು ಪ್ರಾಧಿಕಾರ ನಿರ್ಧಾರ

ಕಾವೇರಿ ನದಿ ನೀರಿಗಾಗಿ ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ವೇಳೆ ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರವು ಸೋಮವಾರವೇ (ಆ.28) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದು, ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರದ ಅಭಿಪ್ರಾಯ ಸಂಗ್ರಹಿಸಲಿದೆ.

ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ ತೆಗೆದಿರುವ ತಮಿಳುನಾಡು, ಬಗ್ಗೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಇನ್ನು ಕರ್ನಾಟಕವೂ ಸಹ ತಮಿಳುನಾಡು ವಿರುದ್ಧ ಅಫಿಡೆವಿಟ್​ ಸಲ್ಲಿಸಿತ್ತು.

ಕರ್ನಾಟಕದ ಅಫಿಡೆವಿಟ್​ನಲ್ಲಿ ಏನಿದೆ?

ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಅದಾಗ್ಯೂ ಕರ್ನಾಟಕ ತಮಿಳುನಾಡಿಗೆ ನೀರು ಹರಿಸಿ CWMA ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:45 pm, Fri, 25 August 23

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್