AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ, ರಿಟ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ, ರಿಟ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಗಣಪತಿ ಶರ್ಮಾ
|

Updated on: Sep 23, 2026 | 6:39 AM

Share

ಕಾವೇರಿ ನದಿ ರಕ್ಷಣಾ ಸಮಿತಿ ಸಲ್ಲಿಸಿದ್ದ ಕರ್ನಾಟಕದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾಗೊಂಡಿದೆ. ತಮಿಳುನಾಡಿನ ಪಾಲಿನ 70.91 ಟಿಎಂಸಿ ನೀರನ್ನು ಕರ್ನಾಟಕಕ್ಕೆ ವರ್ಗಾಯಿಸುವಂತೆ ಕೋರಿದ್ದ ಈ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಪೀಠ ವಜಾ ಮಾಡಿದೆ. ರಾಜ್ಯಗಳ ವಿವಾದಗಳಲ್ಲಿ ಸಂಘಟನೆಗಳ ಅರ್ಜಿಗಳನ್ನು ಪರಿಗಣಿಸಿದರೆ ಕೊನೆಯಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ನವದೆಹಲಿ, ಸೆಪ್ಟೆಂಬರ್ 23: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನದಿ ರಕ್ಷಣಾ ಸಮಿತಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ತಮಿಳುನಾಡಿನ ಪಾಲಿನ 70.91 ಟಿಎಂಸಿ ನೀರನ್ನು ಕರ್ನಾಟಕಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠವು ವಜಾ ಮಾಡಿದೆ.

ಪ್ರಸ್ತುತ ಕಾವೇರಿ ನೀರು ಹಂಚಿಕೆ ಸೂತ್ರದಲ್ಲಿ ಲೋಪವಿದೆ ಎಂದು ಮನವಿ ಮಾಡಲಾಗಿದ್ದು, ಕರ್ನಾಟಕದ ಕುಡಿಯುವ ನೀರು, ಕೈಗಾರಿಕೆ, ಏತ ನೀರಾವರಿ, ಎರಡನೇ ಬೆಳೆ ಮತ್ತು ಪರಿಸರ ಸಂರಕ್ಷಣೆಗೆ ನೀರು ಒದಗಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಅಲ್ಲದೆ, ವೈಜ್ಞಾನಿಕ ಮತ್ತು ಮಳಿಯಾಧಾರಿತ ಸಂಕಷ್ಟ ಹಂಚಿಕೆ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕ್ಕೆ ನಿರ್ದೇಶನ ನೀಡುವಂತೆಯೂ ಮನವಿ ಸಲ್ಲಿಸಲಾಗಿತ್ತು.

ಆದರೆ, ರಾಜ್ಯಗಳ ನಡುವಿನ ವಿವಾದಗಳಲ್ಲಿ ಸಂಘಟನೆಗಳ ಅರ್ಜಿಗಳನ್ನು ಪರಿಗಣಿಸುತ್ತಾ ಹೋದರೆ ಅದಕ್ಕೆ ಕೊನೆಯೇ ಇರಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಕಾವೇರಿ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಈಗಾಗಲೇ ಕಾನೂನು ಹೋರಾಟ ಮುಂದುವರಿದಿರುವ ಹಿನ್ನೆಲೆಯಲ್ಲಿ, ಸಮಿತಿಯ ಅರ್ಜಿ ತಿರಸ್ಕರಿಸಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us