AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ಕರ್ನಾಟಕಕ್ಕೆ ಬಿಗ್ ಶಾಕ್, ತಮಿಳುನಾಡಿಗೆ ನೀರು ಹರಿಸುವ CWMA ಸೂಚನೆ ಪಾಲಿಸಲು ಸುಪ್ರೀಂ ಆದೇಶ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ.

ಕಾವೇರಿ ವಿವಾದ: ಕರ್ನಾಟಕಕ್ಕೆ ಬಿಗ್ ಶಾಕ್, ತಮಿಳುನಾಡಿಗೆ ನೀರು ಹರಿಸುವ CWMA ಸೂಚನೆ ಪಾಲಿಸಲು ಸುಪ್ರೀಂ ಆದೇಶ
ಕಾವೇರಿ ವಿವಾದ: ಕರ್ನಾಟಕಕ್ಕೆ ಬಿಗ್ ಶಾಕ್ (ಸಾಂದರ್ಭಿಕ ಚಿತ್ರ)Image Credit source: tv9
ಹರೀಶ್ ಜಿ.ಆರ್​.
| Edited By: |

Updated on: Aug 17, 2026 | 12:30 PM

Share

ಮುಖ್ಯಾಂಶಗಳು

  • CWMA ಆದೇಶ ಪಾಲಿಸಲು ಕರ್ನಾಟಕಕ್ಕೆ ಸುಪ್ರೀಂ ಸೂಚನೆ
  • ಮುಂದಿನ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
  • ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕು

ನವದೆಹಲಿ, ಆಗಸ್ಟ್ 17: ಕಾವೇರಿ ನೀರು ಹಂಚಿಕೆ (Cauvery Dispute) ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರೊಂದಿಗೆ, ಮುಂಗಾರು ಮಳೆ ಕೊರತೆ ಎದುರಿಸುತ್ತಿರುವ ಕರ್ನಾಟಕಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, CWMA ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಸುಪ್ರೀಂ ಕೋರ್ಟ್​ನಲ್ಲಿ ತಮಿಳುನಾಡಿನ ವಾದ ಏನು?

CWMA ಕರ್ನಾಟಕದಿಂದ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬರುತ್ತಿಲ್ಲ ಎಂದು ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದೆ. ನಿತ್ಯ ಕೇವಲ 5ರಿಂದ 6 ಸಾವಿರ ಕ್ಯೂಸೆಕ್‌ನಷ್ಟು ನೀರು ಬರುತ್ತಿದ್ದು, ಈವರೆಗೆ ಸುಮಾರು 13ರಿಂದ 14 ಟಿಎಂಸಿ ನೀರು ಮಾತ್ರ ಲಭಿಸಿದೆ ಎಂದು ತಮಿಳುನಾಡು ತನ್ನ ವಾದದಲ್ಲಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ CWMA ಆದೇಶವನ್ನು ಜಾರಿಗೊಳಿಸುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

ಕರ್ನಾಟಕದ ವಾದವೇನು?

ಕರ್ನಾಟಕದ ಪರವಾಗಿ, ಈಗಾಗಲೇ 3,500 ಕ್ಯೂಸೆಕ್ ನೀರು ಹರಿಸಲಾಗಿದೆ ಎಂದು ತಿಳಿಸಲಾಗಿದೆ. CWMA ಆದೇಶವನ್ನು ಪಾಲಿಸಲು ರಾಜ್ಯ ಪ್ರಯತ್ನಿಸುತ್ತಿದೆ ಎಂದು ವಾದಿಸಲಾಗಿದೆ. ಬಿಳಿಗುಂಡ್ಲು ಬಳಿ ನೀರಿನ ಪ್ರಮಾಣವನ್ನು ಅಳೆಯಲಾಗುತ್ತದೆ. 12 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಅಲ್ಲಿ ದಾಖಲಾಗಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಕರ್ನಾಟಕದ ಪರ ವಾದ ಮಂಡಿಸಲಾಗಿದೆ.

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಪರಿಸ್ಥಿತಿ ಅನಿಶ್ಚಿತವಾಗಿದ್ದು, ಈ ಪ್ರಮಾಣದಲ್ಲಿ ನಿರಂತರವಾಗಿ ನೀರು ಹರಿಸುವುದು ರಾಜ್ಯಕ್ಕೆ ಕಷ್ಟವಾಗುತ್ತಿದೆ. ಆದರೂ CWMA ಆದೇಶ ಪಾಲಿಸಲು ಕರ್ನಾಟಕ ಪ್ರಯತ್ನಿಸುತ್ತಿದೆ ಎಂದು ತಿಳಿಸಲಾಗಿದೆ.

ಮೇಕೆದಾಟು ಯೋಜನೆ ಪ್ರಸ್ತಾಪ

ಈ ಸಂದರ್ಭದಲ್ಲಿ ಮೇಕೆದಾಟು ಆಣೆಕಟ್ಟು ಯೋಜನೆಯ ಅಗತ್ಯತೆಯನ್ನೂ ಕರ್ನಾಟಕದ ಪರವಾಗಿ ಪ್ರಸ್ತಾಪಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಇಂತಹ ಅನಿಶ್ಚಿತ ಪರಿಸ್ಥಿತಿ ಎದುರಾದಾಗ ಮೇಕೆದಾಟು ಯೋಜನೆ ಸಹಕಾರಿಯಾಗಲಿದೆ ಎಂದು ವಾದಿಸಲಾಗಿದೆ. ಆದರೆ ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಅಂಶವನ್ನೂ ಕರ್ನಾಟಕದ ಪರವಾಗಿ ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ಇದನ್ನೂ ಓದಿ: ಕಾವೇರಿ ನೀರು ವಿವಾದ: CWRC ಶಿಫಾರಸ್ಸು ಎತ್ತಿಹಿಡಿದ CWMA, ಕರ್ನಾಟಕಕ್ಕೆ ಮತ್ತೆ ಬರೆ

ಅಂತಿಮವಾಗಿ, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚಿಸಿದ್ದು, ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವ ನಿರ್ದೇಶನ ಮುಂದುವರಿದಿದೆ. ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ